Get Updates
Get notified of breaking news, exclusive insights, and must-see stories!

Maha Shivratri 2023: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಹಾ ಶಿವರಾತ್ರಿಯ ಸಂಭ್ರಮ ಹೇಗಿತ್ತು?, ಇಲ್ಲಿದೆ ವಿವರ

ದೇಶದ್ಯಾಂತ ಮಹಾಶಿವರಾತ್ರಿ ಸಂಭ್ರಮ ಜೋರಾಗಿದ್ದು, ಹಾಗೆಯೇ ಚಿಕ್ಕಬಳ್ಳಾಪುರದಲ್ಲಿ ಯಾವ ರೀತಿ ಸಂಭ್ರಮ ಇದೆ ಅನ್ನುವುದನ್ನು ಇಲ್ಲಿ ತಿಳಿಯಿರಿ.

ಚಿಕ್ಕಬಳ್ಳಾಪುರ, ಫೆಬ್ರವರಿ, 18: ಹಿಂದೂಗಳ ಪವಿತ್ರ ಹಬ್ಬವಾದ ಮಹಾಶಿವರಾತ್ರಿ ಹಬ್ಬವನ್ನು ಜಿಲ್ಲೆಯಾದ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಮುಂಜಾನೆಯಿಂದಲೇ ದೇವಾಲಯಗಳತ್ತ ತೆರಳಿದ ಭಕ್ತರು, ದೇವರಿಗೆ ವಿಶೇಷ ಅಲಂಕಾರ, ಪೂಜೆ, ಅಭಿಷೇಕ, ನೈವೇದ್ಯಗಳನ್ನು ಅರ್ಪಿಸುವ ಜೊತೆಗೆ ವಿಶೇಷ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಹಬ್ಬದ ಪ್ರಯುಕ್ತ ಚಿಕ್ಕಬಳ್ಳಾಪುರ, ಚಿಂತಾಮಣಿ, ಗೌರಿಬಿದನೂರು, ಕೈವಾರ, ಇಶಾ ಕೇಂದ್ರ ಸೇರಿದಂತೆ ಜಿಲ್ಲೆಯ ಇತರೆ ತಾಲೂಕುಗಳಲ್ಲೂ ಶಿವ-ಪಾರ್ವತಿ, ಈಶ್ವರ ಹಾಗೂ ಇನ್ನಿತರ ದೇವಾಲಯಗಳನ್ನು ಹೂ, ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ದೇವಾಲಗಳ ಆವರಣದಲ್ಲಿ ಹಾಗೂ ಸುತ್ತಮುತ್ತ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.

ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿ ಪಡೆದಿರುವ ಚಿಕ್ಕಬಳ್ಳಾಪುರ ತಾಲೂಕಿನ ಶ್ರೀ ಭೋಗನಂದೀಶ್ವರ ಸ್ವಾಮಿ ದೇವಾಲಯದಲ್ಲಿ ನಂದೀಶ್ವರನಿಗೆ ವಿಶೇಷ ಪೂಜೆಗಳು ನಡೆದವು. ಭೋಗನಂದೀಶ್ವರನಿಗೆ ಏಕವಾರ ಅಭಿಷೇಕ, ಕ್ಷೀರಾಭಿಷೇಕ, ತುಪ್ಪಾಭಿಷೇಕ, ಗಂಧಾಬಿಷೇಕ, ಪುಷ್ಪಾಭಿಷೇಕ ನಡೆಯಿತು. ಹಾಗೆಯೇ ದೇವಾಲಯದ ಆವರಣದಲ್ಲಿ ಮಹಿಳೆಯರು ದೀಪಗಳನ್ನು ಬೆಳಗಿ ಹರಿಕೆ ತೀರಿಸಿಕೊಂಡರು.

ಬೆಂಗಳೂರು, ದೊಡ್ಡಬಳ್ಳಾಪುರ, ಕೋಲಾರ ಸೇರಿದಂತೆ ಜಿಲ್ಲೆ ಹಾಗೂ ಪಕ್ಕದ ಆಂಧ್ರದಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಅಲ್ಲದೆ, ಸಾಲಾಗಿ ನಿಂತು ಭೋಗನಂದೀಶ್ವರನ ದರ್ಶನವನ್ನು ಕೂಡ ಪಡೆದರು. ದೇವಾಲಯದ ಒಳಗಡೆಯಿರುವ ಬೃಹತ್ ಕಲ್ಯಾಣಿಯಲ್ಲಿ ವಿಶೇಷ ಪೂಜಾ ಕೈಂಕರ್ಯವನ್ನು ನೆರೆವೇರಿಸಿದರು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸಿದ ಕಾರಣ, ಇದನ್ನು ನಿಭಾಯಿಸಲು ಪೊಲೀಸ್, ಹೋಂಗಾರ್ಡ್‌ಗಳನ್ನು ನಿಯೋಜಿಸಲಾಗಿತ್ತು. ವಾಹನಗಳ ದಟ್ಟಣೆ ಹೆಚ್ಚಾದ್ದಗಿದ್ದರಿಂದ ನಂದಿಯಿಂದ ಚಿಕ್ಕಬಳ್ಳಾಪುರ ರಸ್ತೆಯ ಅರ್ಧ ಕಿಲೋ ಮೀಟರ್‌ ದೂರದಲ್ಲಿ ಹಾಗೂ ಹೆದ್ದಾರಿ ಕಡೆ ಅರ್ಧ ಕಿ. ಮೀ. ದೂರದಲ್ಲಿ ಪ್ರತ್ಯೇಕ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿತ್ತು.

 ಜಿಲ್ಲೆಯಲ್ಲಿ ಶಿವರಾತ್ರಿ ಸಂಭ್ರಮ ಹೇಗಿತ್ತು?

ಜಿಲ್ಲೆಯಲ್ಲಿ ಶಿವರಾತ್ರಿ ಸಂಭ್ರಮ ಹೇಗಿತ್ತು?

ದೇವಾಲಯದಲ್ಲಿ ವಿವಿಧ ಕಲಾ ತಂಡಗಳಿಂದ ಭಜನೆ, ಸಂಗೀತ ಹಾಗೂ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ನಂದಿ ದೇವಾಲಯದ ಆಡಳಿತ ಮಂಡಳಿಯಿಂದ ಪ್ರಸಾದ ವಿನಿಯೋಗವೂ ನಡೆಯಿತು. ಚಿಕ್ಕಬಳ್ಳಾಪುರ ನಗರ ಎಂ.ಜಿ. ರಸ್ತೆಯ ಶ್ರೀ ಮರಳು ಸಿದ್ಧೇಶ್ವರಸ್ವಾಮಿ ದೇವಾಲಯದಲ್ಲಿ ಶಿವರಾತ್ರಿ ಹಬ್ಬ ಆಚರಣೆ ವಿಜೃಂಭಣೆಯಿಂದ ನಡೆಯಿತು.

 ಶಿವನ ದರ್ಶನಕ್ಕೆ ನೆರೆದಿದ್ದ ಭಕ್ತರ ದಂಡು

ಶಿವನ ದರ್ಶನಕ್ಕೆ ನೆರೆದಿದ್ದ ಭಕ್ತರ ದಂಡು

ದೇವಾಲಯ ಸೇವಾ ಸಮಿತಿ ಹಾಗೂ ಭಕ್ತಾಗಳಿಂದ ಪ್ರತಿ ವರ್ಷದಂತೆ ಈ ಬಾರಿಯೂ ಹಮ್ಮಿಕೊಂಡಿದ್ದ ಉತ್ಸವದಲ್ಲಿ ಬೆಳಗ್ಗೆಯಿಂದ ಸಂಜೆವರೆಗೆ ವಿಶೇಷ ಪೂಜೆ, ಅಭಿಷೇಕ, ಗಣಪತಿ ಪೂಜೆ, ಮಹಾಗಣಪತಿ ಪುರಸರ ನವಗ್ರಹ ಹೋಮ, ಸುದರ್ಶನ ಹೋಮ, ಮಹಾಪೂರ್ಣಾಹುತಿ ಅಲಂಕಾರ ಮಹಾ ಮಂಗಳಾರತಿ ಸೇರಿದಂತೆ ಇನ್ನಿತರ ಧಾರ್ಮಿಕ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಮಹಿಳೆಯರು, ಮಕ್ಕಳು, ಕುಟುಂಬ ಸಮೇತರಾಗಿ ಸಾವಿರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡಿದ್ದರು.

 ಆದಿಯೋಗಿ ದರ್ಶನಕ್ಕೆ ಆಗಮಿಸಿದ್ದ ಭಕ್ತರ ದಂಡು

ಆದಿಯೋಗಿ ದರ್ಶನಕ್ಕೆ ಆಗಮಿಸಿದ್ದ ಭಕ್ತರ ದಂಡು

ಇನ್ನು ತಾಲೂಕಿನ ಅಗಲಗುರ್ಕಿ ಸಮೀಪದ ಇಶಾ ಕೇಂದ್ರದ ಆದಿಯೋಗಿ ದರ್ಶನ ಪಡೆಯಲು ಲಕ್ಷಾಂತರ ಜನರು ಆಗಮಿಸಿದ್ದರು. ಯೋಗ ಲಿಂಗೇಶ್ವರ ದೇವರಿಗೆ ದೀಪ ಬೆಳಗಿಸುವ ಮತ್ತು ಜಲಾಭಿಷೇಕ ಮಾಡಲು ಭಕ್ತಾಧಿಕಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಇಶಾ ಕೇಂದ್ರಕ್ಕೆ ತಲುಪಲು ವಾಹನಗಳ ದಟ್ಟಣೆ ಹೆಚ್ಚಾಗಿತ್ತು. ಹಾಗೆಯೇ ಪ್ರಜಾಪಿತ ಬ್ರಹ್ಮ ಕುಮಾರಿ ಆಶ್ರಮದಲ್ಲಿ ಶಿವರಾತ್ರಿ ಹಬ್ಬದ ಅಂಗವಾಗಿ ನವ ಧಾನ್ಯಗಳಿಂದ ಶಿವಲಿಂಗ ಮೂರ್ತಿಗಳನ್ನು ಸ್ಥಾಪಿಸಲಾಗಿತ್ತು.

 ಕಾರ್ಯಕ್ರಮಗಳ ವಿವರ ಇಲ್ಲಿದೆ

ಕಾರ್ಯಕ್ರಮಗಳ ವಿವರ ಇಲ್ಲಿದೆ

ಫೆಬ್ರವರಿ 19 ರಂದು ಭಾನುವಾರ ಭೋಗ ನಂದಿಶ್ವರ ಸ್ವಾಮಿಯ ಜೋಡಿ ಬ್ರಹ್ಮ ರಥೋತ್ಸವ ನಡೆಯಲಿದೆ. ಧಾರ್ಮಿಕ ದತ್ತಿ ಇಲಾಖೆಯಿಂದ ಆಯೋಜಿಸಿರುವ ರಥೋತ್ಸವಕ್ಕೆ ಮಧ್ಯಾಹ್ನ 12:15ಕ್ಕೆ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜ್ ಚಾಲನೆ ನೀಡಲಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ದೇವರಿಗೆ ಪುಷ್ಪಾರ್ಪಣೆ ಮಾಡಲಿದ್ದು, ಸಂಸದ ಬಿ.ಎನ್.ಬಚ್ಚೇಗೌಡ ಮತ್ತಿತರರು ಭಾಗವಹಿಸಲಿದ್ದಾರೆ. ಶಿವರಾತ್ರಿ ಹಬ್ಬದ ಮರುದಿನ ನಡೆಯುವ ಈ ಅದ್ಧೂರಿ ಬ್ರಹ್ಮ ರಥೋತ್ಸವಕ್ಕೆ ಸುತ್ತಮುತ್ತಲ ಲಕ್ಷಾಂತರ ಮಂದಿ ಭಕ್ತರು ಆಗಮಿಸಲಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+