'ಮಹಿಳೆಯರ ಉತ್ತಮ ಬದುಕಿಗಾಗಿ ಸಾರಾಯಿ ನಿಷೇಧ ಮಾಡಿದ್ದೇ ನಾನು' ಎಚ್‌ಡಿಕೆ
ನೆಲಮಂಗಲ ಏಪ್ರಿಲ್ 15: ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಮಾಗಮದಿಂದಾಗಿ ಲೋಕಸಭೆ ಚುನಾವಣೆಯಲ್ಲಿ ತ್ರಿಬಲ್ ಎಂಜಿನ್‌ನ ಗೆಲುವಿನ ಗಾಳಿ ಬೀಸುತ್ತಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.
ನೆಲಮಂಗಲ ಮತ್ತು ದೊಡ್ಡಬಳ್ಳಾಪುರದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಡಾ.ಕೆ.ಸುಧಾಕರ್ ಪ್ರಚಾರ ನಡೆಸಿದರು. ನಂತರ ಮಾತನಾಡಿದ ಡಾ.ಕೆ.ಸುಧಾಕರ್, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಇರುವವರೆಗೂ ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನದಲ್ಲೇ ಉಳಿಯಲಿದೆ. ಬಿಜೆಪಿ ಯಾವಾಗಲೂ ಆಡಳಿತದ ಸ್ಥಾನದಲ್ಲಿದ್ದು ಜನ ಕಲ್ಯಾಣ ಕಾರ್ಯಗಳನ್ನು ಮಾಡಲಿದೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನೀರಾವರಿಗೆ ಕೊಟ್ಟಷ್ಟು ಕೊಡುಗೆಗಳನ್ನು ಯಾರೂ ಕೊಟ್ಟಿಲ್ಲ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಹಿಳೆಯರ ಬಗ್ಗೆ ಕೆಟ್ಟದಾಗಿ ಹೇಳಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ. ಅದರೆ ಮಹಿಳೆಯರಿಗಾಗಿಯೇ ಕುಮಾರಸ್ವಾಮಿ ಸಾರಾಯಿ ನಿಷೇಧ ಮಾಡಿದ್ದರು. ರೈತರ ಸಾಲ ಮನ್ನಾ ಮಾಡಿದ್ದರು. ಕಾಂಗ್ರೆಸ್‌ಗೆ ಹೇಳಲು ಸಾಧನೆಗಳ ಸರಕು ಇಲ್ಲದೆ ಈ ರೀತಿಯ ತಂತ್ರ ಹೆಣೆಯುತ್ತಿದೆ ಎಂದರು.
ಕಾಂಗ್ರೆಸ್ ಇಂಡಿ ಕೂಟ ಮಾಡಿಕೊಂಡು ಮಂಡಿಯಲ್ಲಿ ಭಾರತವನ್ನೇ ಮಾರಾಟ ಮಾಡಲು ಮುಂದಾಗಿದೆ. 40 ಸ್ಥಾನಕ್ಕಿಂತ ಹೆಚ್ಚು ಬರಲ್ಲ ಎನ್ನುವುದು ಗೊತ್ತಿರುವುದರಿಂದ ಹಾಗೂ ಮುಂದಿನ 50 ವರ್ಷ ಅಧಿಕಾರ ಸಿಗದಿರುವುದು ಖಚಿತವಾಗಿರುವುದರಿಂದ ಗ್ಯಾರಂಟಿ ಕಾರ್ಡುಗಳನ್ನು ನೀಡುತ್ತಿದ್ದಾರೆ. 2,000 ರೂ. ಕೊಡುತ್ತಿರುವುದರಿಂದಲೇ ರಾಜ್ಯದ ಸ್ಥಿತಿ ಅಧೋಗತಿಗೆ ಸಾಗಿದೆ. ದೇಶದ ಬೊಕ್ಕಸದಿಂದ ಇದೇ ರೀತಿ ಹಣ ನೀಡಿದರೆ ಇಡೀ ದೇಶ ಹಾಳಾಗಲಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶವನ್ನು ಪಾಕಿಸ್ತಾನಕ್ಕಿಂತ ಹಿಂದಕ್ಕೆ ಕೊಂಡೊಯ್ಯಲಿದೆ ಎಂದರು.

ದಲಿತರಿಗೆ ಮೀಸಲಿಟ್ಟ 11 ಸಾವಿರ ಕೋಟಿ ಮೊತ್ತವನ್ನು ಗ್ಯಾರಂಟಿಗೆ ಬಳಸಲಾಗಿದೆ. ಮಲ್ಲಿಕಾರ್ಜುನ ಖರ್ಗೆಯವರನ್ನು ಮುಖ್ಯಮಂತ್ರಿ ಮಾಡದೆ ದೆಹಲಿಗೆ ಕಳುಹಿಸಲಾಗಿದೆ. ದಲಿತರ ಬಗ್ಗೆ ಕಾಂಗ್ರೆಸ್‌ಗೆ ಗೌರವ ಇದ್ದರೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಬೇಕಿತ್ತು. ಡಾ.ಬಿ.ಆರ್.ಅಂಬೇಡ್ಕರ್‌ರ ಹೆಸರು ಹೇಳಲು ಕಾಂಗ್ರೆಸ್ ಯೋಗ್ಯತೆ ಮತ್ತು ನೈತಿಕತೆ ಇಲ್ಲ. ಬಾಬಾ ಸಾಹೇಬರನ್ನು ಎರಡು ಬಾರಿ ಸೋಲಿಸಿದ್ದೇ ಕಾಂಗ್ರೆಸ್ ಎಂದರು.
ಹಿಂದೂಗಳು ಮತ ನೀಡಬೇಕಾ?
ಕಾಂಗ್ರೆಸ್‌ನ ಅಭ್ಯರ್ಥಿ ಕ್ಯಾಶ್ ಪಾರ್ಟಿ. ಅವರ ಖಾತೆಯಲ್ಲಿನ ಹಣ ನೋಡಿ ಟಿಕೆಟ್ ನೀಡಿದ್ದಾರೆ. ನಾನು ಆರೋಗ್ಯ ಸಚಿವನಾಗಿ, ಶಾಸಕನಾಗಿ ಕೆಲಸ ಮಾಡಿದ್ದನ್ನು ನೋಡಿ ಟಿಕೆಟ್ ನೀಡಿದ್ದಾರೆ. ಹಣದಿಂದ ಚುನಾವಣೆ ನಡೆಸಲು ಸಾಧ್ಯವಿಲ್ಲ, ಆದರೆ ಜನರ ಪ್ರೀತಿಯಿಂದ ಮಾತ್ರ ಅದು ಸಾಧ್ಯವಾಗುತ್ತದೆ ಎಂಬುದನ್ನು ಅಭ್ಯರ್ಥಿಯ ತಂದೆ ತಿಳಿಯಬೇಕು. ಇಂತಹ ಅಹಂಕಾರದ ಮಾತನ್ನಾಡಬಾರದು. ಕಾಂಗ್ರೆಸ್ ಸರ್ಕಾರ ಆಳಲು ಬಂದು ರಾಜ್ಯವನ್ನು ಹಾಳು ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿ ಹೆಸರಿನಲ್ಲಿ ರಾಮ ಇದೆ, ಅವರಿಗೆ ಟಿಕೆಟ್ ಕೊಡಿಸಿದ್ವರಾ ಹೆಸರಿನಲ್ಲೂ ರಾಮ ಇದೆ, ಆದರೆ ಅವರು ರಾಮ ಮಂದಿರಕ್ಕೆ ಹೋಗುವುದಿಲ್ಲ ಅವರ ಹೃದಯದಲ್ಲಿ ರಾಮನ ಬಗ್ಗೆ ಭಕ್ತಿ ಇಲ್ಲ. ಇಂಥವರಿಗೆ ಹಿಂದೂಗಳು ಮತ ನೀಡಬೇಕಾ ಎಂದು ಪ್ರಶ್ನೆ ಮಾಡಿದರು.

ಪ್ರಧಾನಿ ಮೋದಿ ರಾಮ ಮಂದಿರದಲ್ಲಿ ಬಾಲರಾಮನನ್ನು ಪ್ರತಿಷ್ಠಾಪಿಸಿದ್ದಾರೆ. ಜೊತೆಗೆ ರಾಮರಾಜ್ಯವನ್ನು ಸ್ಥಾಪಿಸಿದ್ದಾರೆ. ಆದರೆ ಕಾಂಗ್ರೆಸ್ ಜನರ ಭವಿಷ್ಯದ ಜೊತೆ ಜೂಜಾಡಲು ಬಂದಿದೆ. ರೈತರು, ಮಹಿಳೆಯರು, ಯುವಕರು ಹಾಗೂ ಬಡವರ ಪಾಲಿಗೆ ಕಾಂಗ್ರೆಸ್ ಸರ್ಕಾರ ಶಾಪವಾಗಿದ್ದು, ರಾಜ್ಯದ ಜನತೆಯ ಹಿತರಕ್ಷಣೆಗಾಗಿ ಬಿಜೆಪಿಯು ಜೆಡಿಎಸ್ ಜೊತೆ ಕೈ ಜೋಡಿಸಿದೆ. ಈ ಲೋಕಸಭಾ ಚುನಾವಣೆ ಒಂದು ಧರ್ಮ ಯುದ್ಧವಾಗಿದ್ದು, ಧರ್ಮದ ಪರ, ಸಾಮಾನ್ಯ ಜನರ ಪರವಾಗಿರುವ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಹೊಣೆ ನಮ್ಮ ಮೇಲಿದೆ ಎಂದರು.
ಬಡತನ ನಿವಾರಣೆ ಇಲ್ಲ, ಪಿಕ್ ಪಾಕೆಟ್ ಸರ್ಕಾರ
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಹಿಂದೆ ಇಂದಿರಾಗಾಂಧಿ ಬಡತನ ನಿರ್ಮೂಲನೆ ಮಾಡುವ ಯೋಜನೆ ಜಾರಿ ಮಾಡಿದ್ದರೂ ಬಡತನ ನಿವಾರಿಸಿಲ್ಲ. ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದ್ದೇವೆ ಎಂದು ಗ್ಯಾರಂಟಿಗಳನ್ನು ತೋರಿಸಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಮಹಿಳೆಯರಿಗೆ ಹಣ ನೀಡಿ, ಪುರುಷರಿಂದ ಹಣ ಪಡೆಯಲಾಗುತ್ತಿದೆ. ಇದು ಪಿಕ್ ಪಾಕೆಟ್ ಸರ್ಕಾರ ಎಂದು ಟೀಕಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications