ಚಿಕ್ಕಬಳ್ಳಾಪುರದಲ್ಲಿ ಹೆಚ್ಚಿದ ಕ್ರಷರ್ ಸಮಸ್ಯೆ: ಹಿಂದಿನವರೇ ಪರ್ಸಂಟೇಜ್ ಪಡೆದಿದ್ದಾರೆ ಎಂದ ಸಚಿವ ಸುಧಾಕರ್
ಚಿಕ್ಕಬಳ್ಳಾಪುರ, ನವೆಂಬರ್ 02: ಹಿಂದೆ ಅಧಿಕಾರದಲ್ಲಿ ಇದ್ದವರೇ ಸ್ವಂತ ಕ್ರಷರ್‌ಗಳನ್ನು ಮಾಡಿಕೊಂಡಿದ್ದಾರೆ. ಬೇರೆಯವರ ಜೊತೆ ಹೊಂದಾಣಿಕೆ ಮಾಡಿಕೊಂಡು ಪರ್ಸಂಟೇಜ್ ತೆಗೆದುಕೊಂಡು ಜನರ ಪ್ರಾಣಕ್ಕೆ ಸಂಚಕಾರವಿದ್ದರೂ ಕ್ರಷರ್‌ಗಳನ್ನು ನಡೆಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಪರೋಕ್ಷವಾಗಿ ಮಾಜಿ ಸಚಿವ ಡಾ.ಕೆ. ಸುಧಾಕರ್ ವಿರುದ್ಧ ಕಿಡಿಕಾರಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರದಲ್ಲಿ ಮಿತಿಮೀರಿ ಕ್ರಷರ್‌ಗಳನ್ನು ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರ, ಗುಡಿಬಂಡೆ ಮತ್ತು ಬಾಗೇಪಲ್ಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರಷರ್‌ಗಳು ನಡೆಯುತ್ತಿವೆ. ಕಳೆದು 10 ವರ್ಷಗಳಿಂದ ಈ ಕ್ರಷರ್‌ಗಳ ಬಗ್ಗೆ ಯಾರೂ ಪ್ರಶ್ನೆ ಮಾಡಿಲ್ಲ. ಈಗ ನಾವು ನೇರಾನೇರ ಕಡಿವಾಣ ಹಾಕಲು ಆಗಲ್ಲ. ಹಂತಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಹಿಂದೆ ಅಧಿಕಾರದಲ್ಲಿ ಇದ್ದವರೇ ಕ್ರಷರ್‌ಗಳನ್ನು ಹೊಂದಿದ್ದಾರೆ. ಸಾಕಷ್ಟು ಮಂದಿ ಜೊತೆ ಒಡಂಬಡಿಕೆ ಮಾಡಿಕೊಂಡು ಪರ್ಸಂಟೇಜ್ ಪಡೆಯುತ್ತಿ ರುವುದು ಎಲ್ಲವೂ ಗೊತ್ತಿದೆ. ನಿಯಮ ಮೀರಿ ಕ್ರಷರ್‌ಗಳನ್ನು ನಡೆಸುತ್ತಿರುವ ಬಗ್ಗೆ ಸಭೆ ನಡೆಸಿ ಕ್ರಷರ್ ಮಾಲೀಕರಿಗೆ ಎಚ್ಚರಿಕೆ ನೀಡಲಾಗುವುದು. ಮಿತಿ ಮೀರಿದ ಕ್ರಷರ್ಗಳಿಂದ ಧೂಳು ತುಂಬಿ ನೀರಿನಲ್ಲಿ ಬೆರೆಯುತ್ತಿದೆ.
ಇದರ ಬಗ್ಗೆ ಯಾರೂ ದೊಡ್ಡ ಮಟ್ಟದ ಪ್ರತಿಭಟನೆಗಳನ್ನು ನಡೆಸುತ್ತಿಲ್ಲ. ರೈತರಿಗೆ ತೊಂದರೆಯಾದರೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ಕೊಡಿ ಎಂದು ಮನವಿ ಮಾಡಿದರು. ನಂದಿಬೆಟ್ಟದಲ್ಲಿ ರೋಪ್ ವೇ ನಿರ್ಮಾಣ ಸಂಬಂಧ ಸಭೆ ನಡೆಸುತ್ತಿದ್ದ ವೇಳೆ ಸಾಕಷ್ಟು ಮಂದಿ ಕ್ರಷರ್‌ಗಳಿಂದ ಆಗುತ್ತಿರುವ ಸಮಸ್ಯೆ ಬಗ್ಗೆ ಮೆಸೇಜ್‌ನಲ್ಲಿ ತಿಳಿಸಿದ್ದಾರೆ. ನೀರಿನಲ್ಲಿ ಕಲ್ಲಿನ ಪುಡಿ ಬರೆತು ಸಾಕಷ್ಟು ಸಮಸ್ಯೆಯಾಗಿದೆ. ಕ್ರಷರ್‌ಗಳನ್ನು ನಿಲ್ಲಿಸಿ ಎಂದು ಕೇಳಿದ್ದಾರೆ. ಇದರ ಬಗ್ಗೆ ಸಮಾಲೋಚಿಸಿ ಜನರಿಗೆ ತೊಂದರೆಯಾಗದಂತೆ ಏನು ಮಾಡಬೇಕು ಎಂಬುದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕ್ರಷರ್ ನಿಲ್ಲಿಸಲು ಕ್ರಮ ಎಂದ ಶಾಸಕ ಪ್ರದೀಪ್ ಈಶ್ವರ್
ಪೆರೇಸಂದ್ರ, ಮಂಡಿಕಲ್ ವ್ಯಾಪ್ತಿಯಲ್ಲಿ ಕ್ರಷರ್‌ಗಳನ್ನು ನಿಲ್ಲಿಸಲು ಕ್ರಮ ತಾಲೂಕಿನ ಪೆರೇಸಂದ್ರ ಮತ್ತು ಮಂಡಿಕಲ್ ವ್ಯಾಪ್ತಿಯಲ್ಲಿ ಮಿತಿ ಮೀರಿ ಸುಮಾರು 150ಕ್ಕೂ ಹೆಚ್ಚು ಕ್ರಷರ್‌ಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.

ಚುನಾವಣೆ ವೇಳೆ ಈ ಭಾಗದಲ್ಲಿ ನಡೆಯುತ್ತಿರುವ ಕ್ರಷರ್‌ಗಳಿಂದ ಆಗುತ್ತಿರುವ ತೊಂದರೆಗಳನ್ನು ನಿವಾರಿಸುತ್ತೇನೆ ಎಂದು ಹೇಳಿದ್ದೆ. ಹೀಗಾಗಿ ಈ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕ್ರಷರ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮಿತಿ ಮೀರಿದ ಗಣಿ ಚಟುವಟಿಕೆಗಳಿಂದ ಈ ಭಾಗದಲ್ಲಿ ಕಲ್ಲಿನ ಧೂಳು ಆವರಿಸಿದ್ದು, ಜನರು ನಾನಾ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಕ್ರಷರ್‌ಗಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಎರಡೂ ಹೋಬಳಿ ವ್ಯಾಪ್ತಿಯಲ್ಲಿ ಸುಮಾರು 150 ಕ್ರಷರ್‌ಗಳಿವೆ. ಬಳಕೆಗೆ ಅನುಕೂಲವಾ ಗುವಂತೆ ನಿಗದಿತ ಸಂಖ್ಯೆ ಯಲ್ಲಿದ್ದರೆ ಸಮಸ್ಯೆಯಿಲ್ಲ. ಆದರೆ, ಬೇರೆ ಕಡೆಗೆ ಸರಬರಾಜು ಮಾಡುವ ಸಲುವಾಗಿ ನಮ್ಮ ಕ್ಷೇತ್ರದ ಜನರ ಆರೋಗ್ಯ ಹಾಳು ಮಾಡಲು ಸಾಧ್ಯವಿಲ್ಲ. ಹೀಗಾಗಿ ಕ್ರಷರ್ ಗಳನ್ನು ನಿಲ್ಲಿಸಲು ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನೊಂದೆಡೆ ತಾಲೂಕು ಕಚೇರಿ ಎದುರು ಮಂಡಿಕಲ್ ವ್ಯಾಪ್ತಿಯ ರೈತರು ಹಾಗೂ ಸಾರ್ವಜನಿಕರು ಮಿತಿ ಮೀರುತ್ತಿರುವ ಕ್ರಷರ್‌ಗಳನ್ನು ನಿಲ್ಲಿಸಿ ತಮ್ಮ ಪ್ರಾಣ ಉಳಿಸಿ ಎಂದು ಪ್ರತಿಭಟನೆ ನಡೆಸಿದರು. ಕಲ್ಲಿನ ಧೂಳಿನಿಂದ ಮನೆಗಳಲ್ಲಿ ಇರಲು ಸಾಧ್ಯವಾಗುತ್ತಿಲ್ಲ. ತೋಟಗಳು ಹಾಳಾಗುತ್ತಿವೆ. ಹೀಗಾಗಿ ತಕ್ಷಣ ಕ್ರಷರ್‌ಗಳನ್ನು ನಿಲ್ಲಿಸಬೇಕೆಂದು ಆಗ್ರಹಿಸಿದರು.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications