ಜಾತಿ ನೋಡಿ ಬಿಜೆಪಿ ಮತ ಹಾಕಿದರೆ ಎಚ್‌ಡಿಕೆ ಕುರ್ಚಿಗೆ ಆಪತ್ತು: ಮೊಯ್ಲಿ

ಚಿಕ್ಕಬಳ್ಳಾಪುರ, ಮಾರ್ಚ್‌ 26: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಜಾತಿ ಮುಖನೋಡಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿಗೆ ಮತ ಹಾಕಿದರೆ ಸರ್ಕಾರಕ್ಕೆ ಕಂಟಕ ಎದುರಾಗುತ್ತದೆ ಎಂದು ವೀರಪ್ಪ ಮೊಯ್ಲಿ ಅವರು ಕ್ಷೇತ್ರದ ಜೆಡಿಎಸ್‌ಗೆ ಎಚ್ಚರಿಕೆ ನೀಡಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಸಭೆಯೊಂದರಲ್ಲಿ ಮಾತನಾಡುತ್ತಾ ಅವರು ಈ ಮಾತು ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಚ್ಚೇಗೌಡ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದು, ಅವರು ಗೌಡ ಸಮುದಾಯದವರಾಗಿದ್ದಾರೆ. ಕ್ಷೇತ್ರದಲ್ಲಿ ಗೌಡ ಸಮುದಾಯದ ಪ್ರಾಬಲ್ಯ ಹೆಚ್ಚಿದೆ.

ಗೌಡ ಸಮುದಾಯದ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಜಾತಿ ಮುಖ ನೋಡಿ ಬಿಜೆಪಿಗೆ ಮತ ಹಾಕಿದರೆ, ಕುಮಾರಸ್ವಾಮಿ ಅವರ ಸರ್ಕಾರ ಉರುಳಿಸಲಾಗುವುದು ಎಂಬ ಮಾದರಿಯ ಎಚ್ಚರಿಕೆಯನ್ನು ವೀರಪ್ಪ ಮೊಯ್ಲಿ ಅವರು ನೀಡಿದ್ದಾರೆ.

JDS party workers should vote to congress: Veerappa Moily

ನಾನು ಮೈತ್ರಿ ಪಕ್ಷಗಳ ಅಭ್ಯರ್ಥಿ ಆಗಿರುವ ಕಾರಣ, ಎರಡೂ ಪಕ್ಷಗಳ ಕಾರ್ಯಕರ್ತರ ಮತಗಳನ್ನು ಸೇರಿಸಿ ಕನಿಷ್ಟ ಐದು ಲಕ್ಷ ಮತಗಳ ಅಂತರದಿಂದ ಗೆಲ್ಲಬೇಕಾಗಿದೆ ಎಂದು ಅವರು ಹೇಳಿದರು.

ಬಿಜೆಪಿಯಿಂದ ಬಚ್ಚೇಗೌಡ ಅವರು ನಾಮಪತ್ರ ಸಲ್ಲಿಸಿದ್ದು, ಅವರು ಕಳೆದ ಚುನಾವಣೆಯಲ್ಲಿ ಸೋತಿದ್ದರು. ಗೌಡ ಸಮುದಾಯದ ಮತಗಳು ಕ್ಷೇತ್ರದಲ್ಲಿ ಹೆಚ್ಚು ಇದ್ದು, ಈ ಬಾರಿ ಚುನಾವಣೆಯಲ್ಲಿ ಗೌಡ ಸಮುದಾಯದ ಮತಗಳೇ ನಿರ್ಣಾಯಕ ಆಗಲಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+