ಮೆಡಿಕಲ್ ಕಾಲೇಜು ವಿಚಾರ: ಡಿಕೆಶಿಗೆ ತಿರುಗೇಟು ಕೊಟ್ಟ ಸುಧಾಕರ್

ಚಿಕ್ಕಬಳ್ಳಾಪುರ, ಅಕ್ಟೋಬರ್ 30: ಮೆಡಿಕಲ್ ಕಾಲೇಜುವಿಚಾರವಾಗಿ ಮಾಜಿ ಸಚಿವ ಡಿ.ಕೆ. ಶಿಕುಮಾರ್ ನೀಡಿದ್ದ ಹೇಳಿಕೆಗೆ ಅನರ್ಹ ಶಾಸಕ ಕೆ. ಸುಧಾಕರ್ ತಿರುಗೇಟು ನೀಡಿದ್ದಾರೆ.

ಕನಕಪುರಕ್ಕೆ ಮಾತ್ರ ಸೀಮಿತವಾದವರಂತೆ ಮಾತನಾಡುತ್ತಾರೆ. ಮೆಡಿಕಲ್ ಕಾಲೇಜನ್ನು ನನ್ನ ಪ್ರಾಣ ಹೋದರೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಬಿಟ್ಟುಕೊಡುವುದಿಲ್ಲ ಎಂದು ಹೇಳಿದ್ದಾರೆ. ಆಸ್ಪತ್ರೆ, ಮೆಡಿಕಲ್ ಎಂಬುದು ನಮ್ಮಗಳ ಪ್ರಾಣ ಉಳಿಸಲಿಕ್ಕೆ ಇರುವುದು ಎಂಬುದನ್ನು ಅವರು ಮರೆತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೋಗುವ ಪ್ರಾಣ ಉಳಿಸಲು ಮೆಡಿಕಲ್ ಕಾಲೇಜು

ಹೋಗುವ ಪ್ರಾಣ ಉಳಿಸಲು ಮೆಡಿಕಲ್ ಕಾಲೇಜು

ಡಿ.ಕೆ.ಶಿವಕುಮಾರ್ ಅವರ ಮೆಡಿಕಲ್ ಕಾಲೇಜ ಚಿಕ್ಕಬಳ್ಳಾಪುರಕ್ಕೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ ಎನ್ನುವ ಮಾತಿನ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಪಾಪ ಮೆಡಿಕಲ್‍ಗಾಗಿ ಪ್ರಾಣ ಬಿಡಿತ್ತೀನಿ ಅಂತ ಹೇಳಿದ್ದಾರೆ. ಹೋಗೋ ಪ್ರಾಣಗಳನ್ನು ಉಳಿಸಲಿಕ್ಕೆ ಮೆಡಿಕಲ್ ಕಾಲೇಜು ಇರುವುದು ಎಂಬುದನ್ನು ಮರೆತಂತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ವೈದ್ಯಕೀಯ ಕಾಲೇಜು ಮಂಜೂರು ಮಾಡಿದ್ದು ಯಾರು?

ವೈದ್ಯಕೀಯ ಕಾಲೇಜು ಮಂಜೂರು ಮಾಡಿದ್ದು ಯಾರು?

ಸಿದ್ದರಾಮಯ್ಯ ವೈದ್ಯಕೀಯ ಕಾಲೇಜು ಮಂಜೂರು ಮಾಡಿದ್ದರುಡಿ.ಕೆ.ಶಿವಕುಮಾರ್ ಕನಕಪುರ ಕರ್ನಾಟಕದಲ್ಲಿ ಒಂದು ತಾಲ್ಲೂಕು ಎಂಬುದನ್ನು ತಿಳಿದಂತಿಲ್ಲ. ಮೊದಲು ಅದೊಂದು ತಾಲ್ಲೂಕು ಎಂಬುದನ್ನು ತಿಳಿದುಕೊಳ್ಳಲಿ ಎಂದರು. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಜಿಲ್ಲೆಗೆ ವೈದ್ಯಕೀಯ ಕಾಲೇಜು ಬಜೆಟ್‍ನಲ್ಲಿ ಮಂಜೂರು ಮಾಡಿದ್ದರು.

ಯಡಿಯೂರಪ್ಪ ಅವರಿಂದ ಶಂಕುಸ್ಥಾಪನೆಯಾಗಲಿದೆ

ಯಡಿಯೂರಪ್ಪ ಅವರಿಂದ ಶಂಕುಸ್ಥಾಪನೆಯಾಗಲಿದೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಮೃತ ಹಸ್ತದಲ್ಲಿಯೇ ಮೆಡಿಕಲ್ ಕಾಲೇಜು ಶಂಕುಸ್ಥಾಪನೆ ಉಪ ಚುನಾವಣೆಗೂ ಮುನ್ನವೇ ನೆರವೇರಿಸುವುದು ಶತ ಸಿದ್ಧ ಎಂದು ಸ್ಪಷ್ಟಪಡಿಸಿದರು.

ಡಿಕೆ ಶಿವಕುಮಾರ್ ಹೇಳಿದ್ದೇನು?

ಡಿಕೆ ಶಿವಕುಮಾರ್ ಹೇಳಿದ್ದೇನು?

ಕನಕಪುರಕ್ಕೆ ಮಂಜೂರಾಗಿದ್ದ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡುವುದಕ್ಕೆ ನಾನು ಬಿಡುವುದಿಲ್ಲ ಎಂದು ಗುಡುಗಿರುವ ಡಿಕೆಶಿ, ನಾನೇನೂ ಚಿಕ್ಕಬಳ್ಳಾಪುರ ಅಭಿವೃದ್ದಿಗೆ ತಕರಾರು ಎತ್ತುತ್ತಿಲ್ಲ ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+