ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಾರದಲ್ಲಿ ಒಂದು ದಿನ ಕೊರೊನಾ ಲಸಿಕಾ ಉತ್ಸವ: ಸುಧಾಕರ್

|
Google Oneindia Kannada News

ಚಿಕ್ಕಬಳ್ಳಾಪುರ, ಆಗಸ್ಟ್ 29: ರಾಜ್ಯದಲ್ಲಿ ನೀಡಲಾಗುತ್ತಿರುವ ಲಸಿಕೆ ಸಂಖ್ಯೆ 4 ಕೋಟಿಗೆ ತಲುಪಿದ್ದು, ಇನ್ನು ಮುಂದೆ ಪ್ರತಿ ದಿನ 5 ಲಕ್ಷ ಲಸಿಕೆ ನೀಡುವ ಗುರಿ ಇರಿಸಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ದಿನಕ್ಕೆ 5 ಲಕ್ಷದಂತೆ ಒಂದು ತಿಂಗಳಲ್ಲಿ ಒಂದೂವರೆ ಕೋಟಿ ಲಸಿಕೆ ನೀಡಲಾಗುವುದು. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಾನು ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ ಪ್ರತಿ ದಿನ 5 ಲಕ್ಷಕ್ಕೂ ಹೆಚ್ಚು ಲಸಿಕೆ ನೀಡಲು ಕೋರಲಾಗಿದೆ ಎಂದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಂದೇ ದಿನ 30 ಸಾವಿರ ಲಸಿಕೆ ನೀಡಲಾಗಿದೆ. ಇನ್ನು ಮುಂದೆ 50 ಸಾವಿರ ಗುರಿ ನೀಡಲಾಗಿದೆ. ವಾರದಲ್ಲಿ ಒಂದು ದಿನ ಲಸಿಕಾ ಉತ್ಸವ ಮಾಡಲಾಗುವುದು. ಇದಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಆ ದಿನ 15 ರಿಂದ 20 ಲಕ್ಷ ಲಸಿಕೆ ನೀಡುವ ಗುರಿ ಇರಿಸಿಕೊಳ್ಳಲಾಗುವುದು. ಕೊಳೆಗೇರಿಗಳಲ್ಲಿ ಇರುವವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುವುದು. ಬೆಂಗಳೂರು ಒಂದರಲ್ಲೇ ಒಂದು ಕೋಟಿ ಲಸಿಕೆ ನೀಡಲಾಗಿದೆ. ಕೆಲವೇ ದಿನಗಳಲ್ಲಿ ಬೆಂಗಳೂರಿನಲ್ಲಿ ಎರಡೂ ಡೋಸ್ ಲಸಿಕೆಯನ್ನು ಪೂರ್ಣಗೊಳಿಸಿ ಇಡೀ ದೇಶದಲ್ಲಿ ಲಸಿಕೆ ಕಾರ್ಯ ಪೂರ್ಣಗೊಂಡ ಮೊದಲ ಮಹಾನಗರವಾಗಿಸಲಾಗುವುದು ಎಂದರು.

ಬೇರೆ ದೇಶಗಳಿಂದಲೂ ಜನರು ಇಲ್ಲಿಗೆ ಬರುತ್ತಾರೆ

ಬೇರೆ ದೇಶಗಳಿಂದಲೂ ಜನರು ಇಲ್ಲಿಗೆ ಬರುತ್ತಾರೆ

ಬೆಂಗಳೂರು ಕೋವಿಡ್ ವೇಗವಾಗಿ ಹರಡುವ ಸ್ಥಳ. ಬೇರೆ ದೇಶಗಳಿಂದಲೂ ಜನರು ಇಲ್ಲಿಗೆ ಬರುತ್ತಾರೆ. ಇಲ್ಲಿ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ. ಕೋವಿಡ್ 3 ನೇ ಅಲೆಗೆ ಸಿದ್ಧತೆಯಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಕ್ಕಳ ನಿಗಾ ಘಟಕವನ್ನು 60-70 ಹಾಸಿಗೆ ಸಹಿತ ಅಭಿವೃದ್ಧಿಪಡಿಸಲಾಗಿದೆ ಎಂದರು.

ನಂತರ ಶಿಡ್ಲಘಟ್ಟದ ಬಾಲಾಜಿ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಶಿಡ್ಲಘಟ್ಟದಲ್ಲಿ 9-10 ಕೆರೆಗಳಿಗೆ ಎಚ್ ಎನ್ ವ್ಯಾಲಿಯಿಂದ ನೀರು ತುಂಬಿಸುವ ಯೋಜನೆ ಬಂದಿದೆ. ಈ ಬಗ್ಗೆ ಟೀಕೆಗಳು ಬಂದಿದ್ದು, ಇಂದು ಕೆರೆಯ ನೀರು ದಿಟ್ಟ ಉತ್ತರ ಬಂದಿದೆ. ಪ್ರತಿ ಕೆರೆಗೆ ಈ ಭಾಗದಲ್ಲಿ ನೀರು ತುಂಬಿಸುವ ಯೋಜನೆ ಮಾಡಬೇಕಿದೆ. ಜೊತೆಗೆ ಶಿಡ್ಲಘಟ್ಟದಲ್ಲಿ ಕೈಗಾರಿಕಾ ವಲಯಗಳನ್ನು ನಿರ್ಮಿಸಲಾಗುವುದು ಎಂದರು.

ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಹಾಲು ಸಹಕಾರಿ ಸಂಘ

ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಹಾಲು ಸಹಕಾರಿ ಸಂಘ

ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಹಾಲು ಸಹಕಾರಿ ಸಂಘ ಮಾಡಬೇಕೆಂದು ಕೇಂದ್ರಕ್ಕೆ ಕೋರಲಾಗಿತ್ತು. ಒಂದು ತಿಂಗಳೊಳಗೆ ಪ್ರತ್ಯೇಕ ದೊರೆಯಲಿದೆ. ಹೈನುಗಾರಿಕೆ, ಮಗ್ಗ, ರೇಷ್ಮೆ ಸೇರಿದಂತೆ ಸಣ್ಣ ಸಂಘಗಳಿಗೆ ಆರ್ಥಿಕ ನೆರವು ನೀಡಲಾಗುವುದು. ಅಭಿವೃದ್ಧಿ ವಿಚಾರ ಬಂದಾಗ ರಾಜಕೀಯ ಮಾಡುವುದಿಲ್ಲ ಎಂದರು.

ಎತ್ತಿನಹೊಳೆ ಯೋಜನೆಗೆ ಸ್ಪಷ್ಟತೆ

ಎತ್ತಿನಹೊಳೆ ಯೋಜನೆಗೆ ಸ್ಪಷ್ಟತೆ

ಎತ್ತಿನಹೊಳೆ ಯೋಜನೆಯಲ್ಲಿ ಭೂಸ್ವಾಧೀನ ತಡ ಆಗುತ್ತಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೊಂದಿಗೆ ಸುದೀರ್ಘವಾಗಿ ಚರ್ಚಿಸಲಾಗಿದೆ. ಅವರಿಗೂ ನೀರಾವರಿ ಬಗ್ಗೆ ಆಳ ಜ್ಞಾನವಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ ಜಿಲ್ಲೆಗಳಿಗೆ ಆದ್ಯತೆ ಮೇರೆಗೆ ನೀರು ದೊರೆಯಲಿದೆ. ಕೃಷ್ಣಾ ಮೇಲ್ದಂಡೆಯಿಂದ 156 ಟಿಎಂಸಿ ನೀರು ಪಡೆಯಬೇಕಿದೆ. ಇದಕ್ಕೆ ತಕರಾರು ನಡೆಯುತ್ತಿದ್ದು, ವಕೀಲರೊಂದಿಗೆ ಮುಖ್ಯಮಂತ್ರಿಗಳು ಚರ್ಚಿಸಿದ್ದಾರೆ. ಶೀಘ್ರ ತಡೆಯಾಜ್ಞೆ ತೆರವುಗೊಳಿಸಿ ನೀರು ಕೊಡಿಸುವ ಕೆಲಸವಾಗಬೇಕು ಎಂದು ಸಿಎಂ ಸೂಚಿಸಿದ್ದಾರೆ ಎಂದರು.

ಕಠಿಣ ಕ್ರಮ

ಕಠಿಣ ಕ್ರಮ

ರಾಜ್ಯ ಅನೇಕ ಕಾರಣಗಳಿಗೆ ಹೆಸರುವಾಸಿಯಾಗಿದೆ. ಆದರೆ ಮೈಸೂರಿನ ಅತ್ಯಾಚಾರ ಘಟನೆ ದುರದೃಷ್ಟಕರ. ರಾಜ್ಯದಲ್ಲಿ ದಕ್ಷ ಪೊಲೀಸ್ ಅಧಿಕಾರಿಗಳಿದ್ದು, ಅತ್ಯಾಚಾರ ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ. ಇಂತಹ ಘಟನೆ ಮರುಕಳಿಸದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಗಟ್ಟಿಯಾದ ನಿರ್ಧಾರ ಕೈಗೊಳ್ಳಲಿದೆ ಎಂದರು.

ಕಾಮಗಾರಿಗೆ ಚಾಲನೆ, ಉದ್ಘಾಟನೆ

ಕಾಮಗಾರಿಗೆ ಚಾಲನೆ, ಉದ್ಘಾಟನೆ

ಶಿಡ್ಲಘಟ್ಟ ತಾಲೂಕಿನ ಸಾದಲಿ ನಾಡ ಕಚೇರಿಯನ್ನು ಸಚಿವ ಡಾ.ಕೆ.ಸುಧಾಕರ್ ಉದ್ಘಾಟಿಸಿದರು. ನಂತರ ಬಶೆಟ್ಟಿಹಳ್ಳಿ ಬಳಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗೆ ಚಾಲನೆ ನೀಡಿದರು. ವಸತಿ ಶಾಲೆ ಕಾಮಗಾರಿಗೆ ಚಾಲನೆ, ನಗರೋತ್ಥಾನದಡಿ 4.60 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಪೈಪ್ ಕಾಮಗಾರಿ, 2 ಕೋಟಿ ರೂ. ವೆಚ್ಚದ ವಿದ್ಯಾರ್ಥಿನಿಲಯ ಕಟ್ಟಡ ಉದ್ಘಾಟನೆ ಮಾಡಿದರು. ಇದೇ ವೇಳೆ ಗುಡಿಹಳ್ಳಿಯ ಅಬ್ಲೂಡು ಕೆರೆ ಭರ್ತಿಯಾದ ಹಿನ್ನೆಲೆಯಲ್ಲಿ, ಸಚಿವರು ಕೆರೆಗೆ ಬಾಗಿನ ಸಮರ್ಪಿಸಿದರು

Recommended Video

Rishab Pant ಅವರು ಹೇಗೆ ಬೇಕಿದ್ದರೂ ಬ್ಯಾಟಿಂಗ್ ಮಾಡಬಹುದು ಎಂದ Gavaskar | Oneindia Kannada

English summary
Karnataka aim to reach 5 lakh Corona Vaccine dosage per day and weekly once Vaccine campaign will be conducted said Medical education and Health minister Dr Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X