Breaking; ಚಿಕ್ಕಬಳ್ಳಾಪುರ ಸೇರಿ ವಿವಿಧ ಜಿಲ್ಲೆಗಳ ಡಿಸಿಗಳ ವರ್ಗಾವಣೆ
ಚಿಕ್ಕಬಳ್ಳಾಪುರ, ಜುಲೈ 10; ಕರ್ನಾಟಕ ಸರ್ಕಾರ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಚಿಕ್ಕಬಳ್ಳಾಪುರ, ಕೊಪ್ಫಳ, ದಾವಣಗೆರೆ ಸೇರಿದಂತೆ ಹಲವಾರು ಜಿಲ್ಲಾಧಿಕಾರಿಗಳು ವರ್ಗವಾಗಿದ್ದಾರೆ.
ಸೋಮವಾರ ಕರ್ನಾಟಕ ಸರ್ಕಾರ 8 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಅಮ್ಲಾನ್ ಆದಿತ್ಯ ಬಿಸ್ವಾಸ್, ಕ್ಯಾಪ್ಟನ್ ಡಾ. ರಾಜೇಂದ್ರ ಕೆ., ವಿಕಾಸ್ ಕಿಶೋರ್ ಸುರಳ್ಕರ್ ಸೇರಿದಂತೆ ವಿವಿಧ ಅಧಿಕಾರಿಗಳು ವರ್ಗಾವಣೆಗೊಂಡಿದ್ದಾರೆ.
ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿದ್ದ ಅಮ್ಲಾನ್ ಆದಿತ್ಯ ಬಿಸ್ವಾಸ್‌ರನ್ನು ಬೆಂಗಳುರು ವಿಭಾಗಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

ಗದಗ ಜಿಲ್ಲಾಧಿಕಾರಿಯಾಗಿದ್ದ ಎಂ. ಸುಂದರೇಶ್ ಬಾಬುರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಎಂಡಿಯಾಗಿ ಅವರು ನೇಮಕಗೊಂಡಿದ್ದಾರೆ.
ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್‌ರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೆಪಿಎಸ್‌ಸಿಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್. ಲತಾರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಜಿಲ್ಲಾಧಿಕಾರಿಯಾಗಿದ್ದ ಕೆ. ಶ್ರೀನಿವಾಸರನ್ನು ವರ್ಗಾವಣೆ ಮಾಡಲಾಗಿದೆ.
ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಆದರೆ ಅವರಿಗೆ ಯಾವುದೇ ಸ್ಥಳವನ್ನು ನಿಯುಕ್ತಿ ಮಾಡಿಲ್ಲ.
ವರ್ಗಾವಣೆಗೊಂಡ ಅಧಿಕಾರಿಗಳು
* ಕ್ಯಾಪ್ಟನ್ ಡಾ. ರಾಜೇಂದ್ರ ಕೆ. ತಕ್ಷಣದಿಂದ ಜಾರಿಗೆ ಬರುವಂತೆ ಕೋ-ಅಪರೇಟಿವ್ ಸೊಸೈಟಿ ರಿಜಿಸ್ಟ್ರಾರ್ ಮತ್ತು ನಿರ್ದೇಶಕ ಕೋ-ಅಪರೇಟಿವ್ ಆಡಿಟ್ ಆಗಿ ವರ್ಗಾವಣೆ ಮಾಡಲಾಗಿದೆ.
* ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಎಂಡಿಯಾಗಿದ್ದ ಶಿವಾನಂದ ಕಾಪ್ಸಿಯನ್ನು ದಾವಣಗೆರೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
* ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಕಾರ್ಯರ್ಶಿ ಹೊನ್ನಾಂಬಾರನ್ನು ಗದಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
* ಲೋಖಂಡೆ ಸ್ನೇಹಲ್ ಸುಧಾಕರ್ ಉನ್ನತ ಶಿಕ್ಷಣ ಇಲಾಖೆಯ ಉಪ ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡಿದ್ದಾರೆ.












Click it and Unblock the Notifications