ಕೆಎಸ್‌ಆರ್‌ಟಿಸಿ ಬಸ್ ಟೈರ್ ಸ್ಫೋಟ: ನಾಲ್ವರಿಗೆ ಗಾಯ
ಚಿಕ್ಕಬಳ್ಳಾಪುರ, ಮೇ 7: ಕೆಎಸ್‌ಆರ್‌ಟಿಸಿ ಬಸ್ ಟೈರ್ ಸ್ಫೋಟಗೊಂಡು ನಾಲ್ವರು ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ. ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಟೈರ್ ಏಕಾ ಏಕಿ ಸ್ಫೋಟಗೊಂಡು ಅವಘಡ ಅಂಭವಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7 ರ ಐಟಿಐ ಕಾಲೇಜು ಬಳಿ ನಡೆದಿದೆ. ದೊಡ್ಡಬಳ್ಳಾಪುರ ನಗರದಿಂದ ಚಿಕ್ಕಬಳ್ಳಾಪುರ ಮಾರ್ಗವಾಗಿ ಅನಂತಪುರಕ್ಕೆ ತೆರಳುತ್ತಿದ್ದ ಬಸ್ ಇದಾಗಿತ್ತು.

ಚಾಲಕ, ನಿರ್ವಾಹಕ ಹಾಗೂ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಾಗೇಪಲ್ಲಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.












Click it and Unblock the Notifications