ಸಂಕ್ರಾಂತಿ ನಂತರ ಮತ್ತೆ ಕುಮಾರಸ್ವಾಮಿ ಸಿಎಂ.?

ಚಿಕ್ಕಬಳ್ಳಾಪುರ, ನವೆಂಬರ್ 26: ಸಂಕ್ರಾಂತಿ ನಂತರ ಮತ್ತೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಧಾನಸಭಾ ಉಪಾಧ್ಯಕ್ಷ ಕೃಷ್ಣಾರೆಡ್ಡಿ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರಾಧಾಕೃಷ್ಣ ಪರವಾಗಿ ಚುನಾವಣಾ ಪ್ರಚಾರದಲ್ಲಿ ಈ ಮಾತನ್ನು ಹೇಳಿದ್ದಾರೆ. ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಬುದ್ದಿ ಕಲಿಸಲು ರಾಜ್ಯದ ಜನ ತೀರ್ಮಾನ ಮಾಡಿದ್ದಾರೆ ಎಂದರು.

ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಅಭ್ಯರ್ಥಿ ರಾಧಾಕೃಷ್ಣ ಅವರನ್ನು ಗೆಲ್ಲಿಸಿ, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದಾರೆ, ರಾಧಾಕೃಷ್ಣ ಮಂತ್ರಿಯಾಗಲಿದ್ದಾರೆ ಎಂದು ಭರವಸೆ ನೀಡಿದರು. ರೈತ ಪರವಾದ ಜೆಡಿಎಸ್ ನ್ನು ಮತ್ತೆ ಅಧಿಕಾರಕ್ಕೆ ತರು ಎಲ್ಲರು ಶ್ರಮಿಸಬೇಕೆಂದರು.

Kumaraswamy CM Again After Sankranti.?

ಕುಮಾರಸ್ವಾಮಿ ಈ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆ. ಆದರೆ ಸುಧಾಕರ್ ಅವರು ಸರಿಯಾಗಿ ಬಳಸಿಕೊಳ್ಳಲಿಲ್ಲ ಎಂದು ಆರೋಪಿಸಿದರು. ೧೭ ಜನ ಶಾಸಕರು ಅನರ್ಹಗೊಂಡಿದ್ದಾರೆ. ಅವರನ್ನು ಸೋಲಿಸಬೇಕು ಎಂದರು. ಈ ಕ್ಷೇತ್ರದ ಜನರಿಗೆ ದ್ರೋಹ ಮಾಡಿ ಬಿಜೆಪಿಗೆ ಹೋಗಿದ್ದಾರೆ. ಸುಖಾಸುಮ್ಮನೆ ಕುಮಾರಸ್ವಾಮಿಯವರ ಮೇಲೆ ಆರೋಪ ಹೊರಿಸಿದರು ಎಂದರು.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕೆ.ಸುಧಾಕರ್ ಸ್ಪರ್ಧಿಸುತ್ತಿದ್ದಾರೆ, ಕಾಂಗ್ರೆಸ್ ನಿಂದ ಎಂ. ಅಂಜಿನಪ್ಪ ಇದ್ದರೆ, ಜೆಡಿಎಸ್ ನಿಂದ ರಾಧಾಕೃಷ್ಣ ಅಭ್ಯರ್ಥಿಯಾಗಿದ್ದಾರೆ. ಡಿಸೆಂಬರ್ 05 ರಂದು ಉಪ ಚುನಾವಣೆ ನಡೆಯಲಿದ್ದು, ಡಿಸೆಂಬರ್ 09 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+