ರಾಜಕೀಯ ಪ್ರಚಾರಕ್ಕಾಗಿ ಬಸ್‌ಗಳ ಬಳಕೆ, ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಮೀಣ ವಿದ್ಯಾರ್ಥಿಗಳ ಪರದಾಟ
ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಗ್ರಾಮಗಳ ಮಾರ್ಗಗಳಲ್ಲಿ ಸಾರಿಗೆ ಬಸ್‌ಗಳ ಕೊರತೆ ಇದ್ದು, ಬೇರೆಡೆಗೆ ಕೆಲಸಕ್ಕೆ ತೆರಳುವ ಜನರು ಹಾಗೂ ದೂರದ ಊರುಗಳಲ್ಲಿನ ಶಾಲೆಗೆ ತೆರಳುವ ವಿದ್ಯಾರ್ಥಿಗಳು ಇದೀಗ ಆತಂಕಕ್ಕೆ ಒಳಗಾಗಿದ್ದಾರೆ.
ಚಿಕ್ಕಬಳ್ಳಾಪುರ, ಫೆಬ್ರವರಿ, 07: ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಿಂದ ಸಾರ್ವಜನಿಕರು ನಿತ್ಯ ಸಂಜೆ ಮನೆಗೆ ತೆರಳಲು ಸಮರ್ಪಕವಾಗಿ ಬಸ್ ವ್ಯವಸ್ಥೆಯಿಲ್ಲದೆ ಪರದಾಡುವಂತಾಗಿದೆ. ಕೆಲಸ ಕಾರ್ಯಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ತೆರಳುವ ಸಾರ್ವಜನಿಕರು, ಶಾಲಾ- ಕಾಲೇಜು ವಿದ್ಯಾರ್ಥಿಗಳು, ವಿವಿಧ ಕಾರ್ಖಾನೆಗಳಿಗೆ ಹೋಗುವ ಕಾರ್ಮಿಕರು ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸುತ್ತಾರೆ. ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹೋಗಬೇಕು. ಇಲ್ಲದಿದ್ದರೆ ಮೇಲಾಧಿಕಾರಿಗಳು ಬಳಿ ಪ್ರತಿನಿತ್ಯ ಬಯ್ಯುತ್ತಾರೆ. ಇನ್ನು ಸಂಜೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳಲು ಬಸ್‌ಗಳು ಸಕಾಲಕ್ಕೆ ಲಭ್ಯವಾಗುತ್ತಿಲ್ಲ ಎಂದು ಇಲ್ಲಿನ ಸ್ಥಳೀಯರು ಅಳು ತೋಡಿಕೊಂಡಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳು ಸಕಾಲಕ್ಕೆ ಬರುತ್ತವೆ ಎಂಬ ನಂಬಿಕೆಯಿಂದ ಬಂದರೆ ಅದು ಕೂಡ ಲಭ್ಯವಾಗುವುದಿಲ್ಲ. ಇನ್ನು ಖಾಸಗಿ ಬಸ್‌ಗಳನ್ನು ಕೂಡ ನಂಬಿಕೊಳ್ಳುವ ಹಾಗಿಲ್ಲ. ಖಾಸಗಿ ಬಸ್‌ಗಳು ಪ್ರಯಾಣಿಕರ ಆಧಾರದ ಮೇಲೆ ಮಾರ್ಗದಲ್ಲಿ ಸಂಚರಿಸುತ್ತವೆ. ಆದರೆ ಸಾರಿಗೆ ಸಂಸ್ಥೆಯ ಬಸ್‌ಗಳು ಮಾರ್ಗದಲ್ಲಿ ಸಮಯಕ್ಕೆ ಸಂಚರಿಸದಿದ್ದರೆ ಹೇಗೆ?. ಚಾಲಕರು ಮತ್ತು ನಿರ್ವಾಹಕರು ಸಂಜೆ ಮನೆಗಳಿಗೆ ತೆರಳುವ ಕಾತುರದಿಂದ ಬಸ್‌ಗಳು ಈ ಮಾರ್ಗಗಳಲ್ಲಿ ಸಂಚರಿಸುವುದೇ ಕಡಿಮೆ ಆಗಿದೆ ಎಂದು ಅಳಲು ತೋಡಿಕೊಂಡರು.

ಜಿಲ್ಲೆಯಲ್ಲಿ ಸಾರಿಗೆ ಬಸ್‌ಗಳ ಕೊರತೆ
ದ್ವಿತೀಯ ಪಿಯು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಸಮೀಪಿಸುತ್ತಿದ್ದು, ಖಾಸಗಿ ಹಾಗೂ ಸರ್ಕಾರಿ ಕಾಲೇಜುಗಳಲ್ಲಿ ಬೆಳಗ್ಗೆ ಮತ್ತು ತರಗತಿಗಳು ಮುಗಿದ ನಂತರ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ಸಂಜೆ ವಿಶೇಷ ತರಗತಿ ಮುಗಿಸಿಕೊಂಡು ಮನೆಗಳಿಗೆ ತೆರಳಲು ಬಸ್ ನಿಲ್ದಾಣಕ್ಕೆ ಬಂದಾಗ ಬಸ್ ಇರುವುದಿಲ್ಲ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚಾಗಿ ಇರುವುದರಿಂದ ನಗರದ ವಿವಿಧ ವೃತ್ತಗಳಲ್ಲಿ ನಿಂತು ವಾಹನಗಳಿಗಾಗಿ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಂತ ವಿದ್ಯಾರ್ಥಿಗಳು ಯಾವುದೇ ಪರ್ಯಾಯ ದಾರಿಯಿಲ್ಲದೆ ನಗರದಿಂದ ಗ್ರಾಮಗಳಿಗೆ ತೆರಳುವ ಖಾಸಗಿ ವಾಹನಗಳನ್ನು ಅವಲಂಬಿಸಬೇಕಾಗಿದೆ.

ರಾಜಕೀಯ ಪ್ರಚಾರಕ್ಕಾಗಿ ಬಸ್‌ಗಳ ಬಳಕೆ
ಜಿಲ್ಲೆಯಲ್ಲಿ ಒಟ್ಟು 6 ಸಾರಿಗೆ ಸಂಸ್ಥೆಯ ಬಸ್ ಘಟಕಗಳು ಇದ್ದು, 500 ಕ್ಕೂ ಹೆಚ್ಚು ಬಸ್‌ಗಳು ಅಂತರಾಜ್ಯ, ಅಂತರ್ ಜಿಲ್ಲೆ, ತಾಲೂಕು ಕೇಂದ್ರ ಸೇರಿದಂತೆ ಗ್ರಾಮೀಣ ಭಾಗದ ಮಾರ್ಗಗಳಲ್ಲಿ ಸಂಚರಿಸುತ್ತವೆ. ಇನ್ನು ಇತ್ತೀಚೆಗೆ ರಾಜಕೀಯ ಪಕ್ಷಗಳ ಟಿಕೆಟ್ ಅಕಾಂಕ್ಷಿಗಳು ಓಂಶಕ್ತಿ ಮಾಲೆಧಾರಿಗಳನ್ನು ಪ್ರವಾಸ ಕಳುಹಿಸಿಕೊಡಲು ಸಾರಿಗೆ ಬಸ್‌ಗಳನ್ನು ಬಾಡಿಗೆಗೆ ಪೆಡೆಯುತ್ತಿದ್ದಾರೆ. ಹಾಗೆಯೇ ರಾಜಕೀಯ ಸಮಾವೇಶಗಳಿಗೆ ಜನರನ್ನು ಕರೆದೊಯ್ಯಲು ಸಾರಿಗೆ ಬಸ್‌ಗಳನ್ನು ಮುಂಗಡವಾಗಿ ಬುಕ್ ಮಾಡುತ್ತಿದ್ದಾರೆ. ಇದರಿಂದಾಗಿ ಬಸ್‌ಗಳ ಕೊರತೆ ಉಂಟಾಗಿ ಸಾರ್ವಜನಿಕರು, ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಜನರ ಮನವಿಗೆ ಕ್ಯಾರೆ ಅನ್ನದ ಅಧಿಕಾರಿಗಳು
ಚಿಕ್ಕಬಳ್ಳಾಪುರದಿಂದ ಗುಡಿಬಂಡೆ, ಗೌರಿಬಿನೂರು, ಬೆಂಗಳೂರು, ಬಾಗೇಪಲ್ಲಿ, ಚಿಂತಾಮಣಿ, ಶಿಡ್ಲಘಟ್ಟ ಹಾಗೂ ಆಂಧ್ರದ ಹಿಂದೂಪುರ, ಅನಂತಪುರ, ಚಿಂತಾಮಣಿಯಿಂದ ಶ್ರೀನಿವಾಸಪುರ, ಕೋಲಾರ, ಮದನಪಲ್ಲಿ, ಗೌನಪಲ್ಲಿ, ರಾಯಲ್ಪಾಡು ಹಾಗೂ ಇತರೆ ತಾಲೂಕು ಕೇಂದ್ರಗಳಿಂದ ಜನ ಗ್ರಾಮಗಳಿಗೆ ತೆರಳಲು ಸಮರ್ಪಕವಾಗಿ ಬಸ್ ವ್ಯವಸ್ಥೆ ಇಲ್ಲದಂತಾಗಿದೆ. ಮಹಾಮಾರಿ ಕೋವಿಡ್ ಹಾವಳಿಯಿಂದ ಸ್ಥಗಿತಗೊಂಡಿದ್ದ ಗ್ರಾಮೀಣ ಮಾರ್ಗಗಳಿಗೆ ಬಸ್‌ಗಳನ್ನು ನಿಯೋಜಿಸಬೇಕು ಎಂದು ಗ್ರಾಮೀಣ ಭಾಗದ ಜನರು ಒತ್ತಾಯಿಸಿದ್ದಾರೆ.
ಬಸ್ ಸಮಸ್ಯೆಯಾಗಿರುವ ಬಗ್ಗೆ ಗಮನಕ್ಕೆ ಬಂದಿದೆ. ಕೂಡಲೇ ಚಿಂತಾಮಣಿ ಬಸ್ ಘಟಕದ ವ್ಯವಸ್ಥಾಪಕರೊಂದಿಗೆ ಚರ್ಚಿಸಿ ಬಸ್ ಸಮಸ್ಯೆಯಿರುವ ಮಾರ್ಗಗಳಿಗೆ ಸಾರಿಗೆ ವ್ಯವಸ್ಥೆ ಮಾಡಲಾಗುವುದು. ಹಾಗೆಯೇ ಕೋಲಾರ ಘಟಕದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಚಿಕ್ಕಬಳ್ಳಾಪುರ ವಿಭಾಗೀಯ ನಿಯಂತ್ರಣಾಧಿಕಾರಿ ಹಿಮವರ್ಧನ್ ನಾಯ್ಡು ಭರವಸೆ ನೀಡಿದರು.

ಅಧಿಕಾರಿಗಳ ವಿರುದ್ಧ ಜನಾಕ್ರೋಶ
ಕೆಲಸಕ್ಕಾಗಿ ಮಂಡಿಕಲ್‌ನಿಂದ ಚಿಕ್ಕಬಳ್ಳಾಪುರಕ್ಕೆ ಬರುತ್ತೇನೆ. ಆದರೆ ಸಂಜೆ ಸಮಯದಲ್ಲಿ ಮನೆಗೆ ತೆರಳಲು ಸರಿಯಾದ ಸಮಯಕ್ಕೆ ಬಸ್‌ಗಳು ಬರುವುದಿಲ್ಲ. ಶಾಲಾ- ಕಾಲೇಜುಗಳಿಂದ ಗ್ರಾಮೀಣ ಪ್ರದೇಶಗಳಿಗೆ ಹೊರಡುವ ಮಕ್ಕಳು ಸಂಕಷ್ಟ ಪಡುವಂತಾಗಿದೆ. ಸಂಜೆ ನಾಲ್ಕು ಗಂಟೆಗೆ ಬಿಟ್ಟರೆ ಮನೆ ಸೇರುವುದು 7 ಗಂಟೆ ಆಗುತ್ತದೆ. ಈ ಸಮಸ್ಯೆಯನ್ನು ಸರಿಪಡಿಸದೇ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಸ್ಥಳೀಯರಾದ ಸಿ.ಎನ್. ಲಕ್ಷ್ಮೀನಾರಾಯಣ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿಂದ ಗುಡಿಬಂಡೆಗೆ ಬಸ್‌ಗಳೇ ಇಲ್ಲ
ನಂಜುಂಡಪ್ಪ ವರದಿ ಪ್ರಕಾರ ಅತ್ಯಂತ ಹಿಂದುಳಿದ ತಾಲೂಕು ಗುಡಿಬಂಡೆಯಾಗಿದೆ. ತಾಲೂಕು ಅಭಿವೃದ್ಧಿಯಾಗಲು ಸಾರಿಗೆ ವ್ಯವಸ್ಥೆ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ, ಇಲ್ಲಿನ ಸಾರಿಗೆ ಅವ್ಯವಸ್ಥೆಯಿಂದ ಸರ್ಕಾರಿ ಕಚೇರಿಗಳಿಗೆ ಹೋಗಲು ಜನರಿಗೆ ತುಂಬಾ ತೊಂದರೆಯಾಗಿದೆ. ಬೆಂಗಳೂರಿನಿಂದ ಗುಡಿಬಂಡೆಗೆ ಬಸ್‌ಗಳ ವ್ಯವಸ್ಥೆಯೂ ಇಲ್ಲ. ಚಿಕ್ಕಬಳ್ಳಾಪುರದಿಂದ ಗುಡಿಬಂಡೆಗೆ ಬರಲು ಹರಸಾಹಸ ಪಡಬೇಕಾಗಿದೆ. ಖಾಸಗಿ ಬಸ್‌ಗಳ ಮಾಲೀಕರು ಲಾಭ ಇದ್ದರೆ ಮಾತ್ರ ಈ ಮಾರ್ಗದಲ್ಲಿ ಬರುತ್ತಾರೆ. ಇದನ್ನು ಹೊರತುಪಡಿಸಿ ಸೇವೆ ಮಾನೋಭಾವದಿಂದ ಖಾಸಗಿ ಬಸ್‌ಗಳು ಇಲ್ಲಿಗೆ ಬರುವುದಿಲ್ಲ. ಜನ ಖಾಸಗಿ ಬಸ್‌ಗಳನ್ನು ನಂಬಿಕೊಂಡು ಕಾಯುವುದಿಲ್ಲ. ಸಾರ್ವಜನಿಕರ ಹಿತದೃಷ್ಟಿಯಿಂದ ಸಾರಿಗೆ ಸಂಸ್ಥೆಯ ಬಸ್‌ಗಳನ್ನು ಸಮಯಕ್ಕೆ ಸರಿಯಾಗಿ ನಿಯೋಜನೆ ಮಾಡಬೇಕು ಎಂದು ಉಪನ್ಯಾಸಕರಾದ ಬಿ.ಜೆ.ರಾಮಣ್ಣ ಮನವಿ ಮಾಡಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications