ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮರಳಿ ಪಡೆಯಲು ಕಾನೂನು ಹೋರಾಟ-ಕೆ ಸುಧಾಕರ್
ಚಿಕ್ಕಬಳ್ಳಾಪುರ ಮಾರ್ಚ್ 12: ಕಾಂಗ್ರೆಸ್ ಸರ್ಕಾರ ರಾಜಕೀಯ ದುರುದ್ದೇಶದಿಂದ ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು ರದ್ದುಪಡಿಸಿ ರೈತರಿಗೆ ಅಪಮಾನ ಮಾಡಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರೈತರು ಕಾಂಗ್ರೆಸ್ ವಿರುದ್ಧ ಸೇಡು ತೀರಿಸಿಕೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಚಿಕ್ಕಬ್ಳಾಪುರದಲ್ಲಿ ನಡೆದ ನೂತನ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ರೈತರಿಗೆ ಹೈನುಗಾರಿಕೆ ಉಪ ಕಸುಬಾಗಿದ್ದು, ಇದು ಲಾಭದಾಯಕವಾಗಿಸಬೇಕೆಂಬುದು ನಮ್ಮೆಲ್ಲರ ಬಯಕೆ. ಆದರೆ ಕಾಂಗ್ರೆಸ್ ಸರ್ಕಾರ ಚಿಕ್ಕಬಳ್ಳಾಪುರದ ಹೈನುಗಾರರಿಗೆ ದೊಡ್ಡ ಪೆಟ್ಟು ಕೊಟ್ಟಿದೆ. ಬಿಜೆಪಿ ಸರ್ಕಾರ ತಂದ ಪ್ರತ್ಯೇಕ ಹಾಲು ಒಕ್ಕೂಟ ಒಂದೂವರೆ ವರ್ಷ ಕೆಲಸ ಮಾಡಿದ್ದು, ಅದನ್ನು ಈಗಿನ ಸರ್ಕಾರ ರದ್ದುಪಡಿಸಿದೆ. ಈ ಜಿಲ್ಲೆಯ ರೈತರು 5 ಲಕ್ಷ ಲೀಟರ್ ಹಾಲನ್ನು ಒಕ್ಕೂಟಕ್ಕೆ ನೀಡುತ್ತಿದ್ದು, ಅಂತಹ ರೈತರ ಪರವಾಗಿರಬೇಕಾದ ಹೃದಯವಂತಿಕೆಯನ್ನು ಕಾಂಗ್ರೆಸ್ ನಾಯಕರು ಕಳೆದುಕೊಂಡಿದ್ದಾರೆ ಎಂದು ದೂರಿದರು.

ಈಗ ಹಾಲು ಒಕ್ಕೂಟಕ್ಕೆ ಹೋಗಿ ಮಾತಾಡಬೇಕೆಂದರೆ ರೈತರು 100 ಕಿ.ಮೀ. ಪ್ರಯಾಣಿಸಿ ಕೋಲಾರಕ್ಕೆ ಹೋಗಬೇಕು. ಇದು ತಾಂತ್ರಿಕ ಅಲ್ಲ, ರಾಜಕೀಯ ದುರುದ್ದೇಶದಿಂದ ಮಾಡಿರುವ ತೀರ್ಮಾನ. ನನ್ನ ಮೇಲೆ ಸೇಡು ತೀರಿಸಿಕೊಳ್ಳಲು ರೈತರಿಗೆ ಮಾಡಿದ ಅಪಮಾನ. ಆದರೆ ಈ ಲೋಕಸಭಾ ಚುನಾವಣೆಯಲ್ಲಿ ರೈತರು ಕಾಂಗ್ರೆಸ್ ಮೇಲೆ ಸೇಡು ತೀರಿಸಿಕೊಳ್ಳಲಿದ್ದಾರೆ ಎಂದರು.
ಚಿಕ್ಕಬಳ್ಳಾಪುರಕ್ಕೆ ಮರಳಿ ಪ್ರತ್ಯೇಕ ಹಾಲು ಒಕ್ಕೂಟ ಪಡೆಯಲು ಕಾನೂನು ಹೋರಾಟ ನಡೆಸಲಾಗುವುದು. ಈಗಿನ ಒಕ್ಕೂಟದಲ್ಲಿ ನಿಯಮ ಮೀರಿ ಟೆಂಡರ್ ಕರೆಯಲಾಗಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಭ್ರಷ್ಟಾಚಾರಿಗಳ ಮೇಲೆ ದಾಳಿ ನಡೆಸಿದ್ದಾರೆ. ಇದರಲ್ಲಿ ರೈತರ ಮಕ್ಕಳಿಗೆ ಅನ್ಯಾಯವಾಗಿದೆ. ಒಕ್ಕೂಟ ಆರಂಭವಾದಾಗಿನಿಂದ ಈವರೆಗೆ ಇಂತಹ ಹಗರಣ ನಡೆದಿಲ್ಲ. ಈ ನೇಮಕಾತಿಯನ್ನು ರದ್ದುಪಡಿಸಿ ಅಥವಾ ತನಿಖೆ ಮಾಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದರೂ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಎಚ್.ಎನ್.ವ್ಯಾಲಿಯಡಿ ತೃತೀಯ ಹಂತದ ಸಂಸ್ಕರಣೆ ಮಾಡಿ ಎಂದರೆ ಅದನ್ನು ಕೂಡ ಮಾಡಿಲ್ಲ. ಚಿಕ್ಕಬಳ್ಳಾಪುರ ಮಾತ್ರವಲ್ಲದೆ ರಾಜಧಾನಿ ಬೆಂಗಳೂರಿನಲ್ಲೂ ಈಗ ನೀರಿಲ್ಲ ಎಂದರು.
ಒಟ್ಟು ಹಾಲಿನ ಡೇರಿಗಳ ಪೈಕಿ 122 ಬಿಜೆಪಿ ಬೆಂಬಲಿತ ಅಧ್ಯಕ್ಷರಿದ್ದಾರೆ. ಅದರಲ್ಲಿ ಕೆಲವರು ಬೇರೆ ಪಕ್ಷಕ್ಕೆ ಬೆಂಬಲ ನೀಡಿದರೆ ಅದು ಆತ್ಮದ್ರೋಹದ ಕೆಲಸವಾಗುತ್ತದೆ. ಕಾಂಗ್ರೆಸ್ ಕೊಡುವ ಹಣದಿಂದ ಮಕ್ಕಳ ಭವಿಷ್ಯ ರೂಪಿಸಲು ಸಾಧ್ಯವಿಲ್ಲ. ಅದಕ್ಕಾಗಿ ನಮ್ಮತನವನ್ನು ಕಳೆದುಕೊಳ್ಳಬಾರದು. ಸ್ಥಳೀಯವಾಗಿ ನಡೆಯುವ ಎಲ್ಲ ಚುನಾವಣೆಗಳಲ್ಲಿ ಪಕ್ಷ ಬಲವಾಗಿರಬೇಕು. ಮುಖಂಡರ ನಡುವೆ ಉತ್ತಮ ಸಂಬಂಧ ಇರಬೇಕು ಎಂದು ಕಿವಿಮಾತು ಹೇಳಿದರು.
ಪ್ರಧಾನಿ ಭೇಟಿ:-
ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 15 ರಂದು ದೇವನಹಳ್ಳಿಗೆ ಬರಲಿದ್ದಾರೆ. ಕಾರ್ಯಕರ್ತರು ಹಾಗೂ ರೈತರು ಉತ್ಸಾಹದಿಂದ ಅವರನ್ನು ಬರಮಾಡಿಕೊಳ್ಳಲಿದ್ದಾರೆ ಎಂದರು.
ನಂದಿ ಕ್ಷೇತ್ರದಲ್ಲಿ ಕೆಲವರು ನನ್ನ ಹೆಸರನ್ನು ಹರಕೆ ಕಟ್ಟಿ ಅಭ್ಯರ್ಥಿಯಾಗುವಂತೆ ಪ್ರಾರ್ಥಿಸಿದ್ದಾರೆ. ಅವರಿಗೆ ನಾನು ಋಣಿಯಾಗಿದ್ದೇನೆ. ಕಳೆದೊಂದು ವರ್ಷದಿಂದ ಚಿಕ್ಕಬಳ್ಳಾಪುರ ಅಭಿವೃದ್ಧಿ ವಂಚಿತವಾಗಿದೆ. ಬಿಜೆಪಿ ನನಗೆ ಅವಕಾಶ ನೀಡಿದರೆ ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡಲಿದ್ದಾರೆ. ಹಿಂದಿನ ಲೋಪವನ್ನು ಸರಿಪಡಿಸಲು ನಾನು ದಿಟ್ಟ ಉತ್ತರ ನೀಡುತ್ತೇನೆ. ಬಿಜೆಪಿ ವರಿಷ್ಠರು ಅವಕಾಶ ನೀಡಿದರೆ ಸ್ಪರ್ಧಿಸುತ್ತೇನೆ.
ನರೇಂದ್ರ ಮೋದಿಯವರ ಪರವಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಧ್ವನಿಯಾಗಿ ಕೆಲಸ ಮಾಡುತ್ತೇನೆ. ಬಯಲುಸೀಮೆಯ ಮೂರು ಜಿಲ್ಲೆಗಳಲ್ಲಿ ಇನ್ನಷ್ಟು ಪಕ್ಷ ಸಂಘಟನೆ ಮಾಡುತ್ತೇನೆ. ಜೆಡಿಎಸ್ ಮೈತ್ರಿಯೂ ಇರುವುದರಿಂದ ಬಿಜೆಪಿಗೆ ಹೆಚ್ಚು ಬಲ ಬಂದಿದೆ ಎಂದರು. ಬಿಜೆಪಿ ಮರುಭೂಮಿಯಾಗಿರುವ ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ಪಕ್ಷವನ್ನು ಕಟ್ಟಲು ಶ್ರಮಿಸಲಿದ್ದೇನೆ ಎಂದರು.
ದೇಶದಲ್ಲಿ ಎರಡು ಸಂವಿಧಾನ ಇರಬಾರದು. ಆದರೆ ಜಮ್ಮು-ಕಾಶ್ಮೀರದಲ್ಲಿ ಪ್ರತ್ಯೇಕ ಸಂವಿಧಾನದಿಂದಾಗಿ ಜಮೀನು ಖರೀದಿಸಲು ಕೂಡ ಸಾಧ್ಯವಿರಲಿಲ್ಲ. ಕಾಂಗ್ರೆಸ್ ನಾಯಕರು ತುಷ್ಟೀಕರಣ ರಾಜಕಾರಣ ಮಾಡಿ ಒಂದೇ ಸಮುದಾಯಕ್ಕೆ ಅನುಕೂಲ ಮಾಡಿಕೊಟ್ಟಿತ್ತು. ಆದರೆ ಪ್ರಧಾನಿ ಮೋದಿ ಎಲ್ಲರನ್ನೂ ಸಮಾನವಾಗಿ ಕಂಡು ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಆಡಳಿತ ಪಾತಾಳಕ್ಕೆ ಹೋಗಿದೆ. ಶಕ್ತಿ ಕೇಂದ್ರವಾದ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೇಳಿಬಂದಿದೆ. ಆದರೆ ಆ ರಾಜ್ಯಸಭಾ ಸದಸ್ಯರು, ಕಾಂಗ್ರೆಸ್ ನಾಯಕರು ಕ್ಷಮೆ ಕೇಳಿಲ್ಲ ಎಂದರು.
ಕುಕ್ಕರ್‌ನಲ್ಲಿ ಬಾಂಬ್ ಇಟ್ಟವರನ್ನು ಬ್ರದರ್‌ಗಳು ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಪಾಕಿಸ್ತಾನಕ್ಕೆ ಜೈಕಾರ ಹಾಕಿಲ್ಲ ಎಂದೇ ಈ ನಾಯಕರು ವಾದ ಮಾಡಿದ್ದರು. ಒಂದು ಕಡೆ ಬರ, ಮತ್ತೊಂದು ಕಡೆ ಬೆಲೆ ಏರಿಕೆ, ಇನ್ನೊಂದು ಕಡೆ ಅಭಿವೃದ್ಧಿ ಶೂನ್ಯವಾಗಿದೆ. ಕಾಂಗ್ರೆಸ್ ಸರ್ಕಾರದ ಇಂತಹ ಅನ್ಯಾಯಗಳಿಗೆ ಉತ್ತರ ನೀಡಲು ಲೋಕಸಭಾ ಚುನಾವಣೆಯೇ ಸರಿಯಾದ ಸಮಯ ಎಂದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications