ಚಿಕ್ಕಬಳ್ಳಾಪುರದಿಂದ ಅಮಿತ್ ಶಾರಿಂದ ಚುನಾವಣ ಪ್ರಚಾರ ಆರಂಭ
Recommended Video

ಚಿಕ್ಕಬಳ್ಳಾಪುರ, ಫೆಬ್ರವರಿ 11: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದ ಬಳಿಕ ರಾಜ್ಯ ಬಿಜೆಪಿಯಲ್ಲಿ ಉತ್ಸಾಹ ಇಮ್ಮಡಿಯಾಗಿದೆ. ಹುಬ್ಬಳ್ಳಿಯಲ್ಲಿ ಭಾನುವಾರದಂದು ನಡೆದ ಸಮಾವೇಶ ಸಂಪೂರ್ಣ ಯಶಸ್ವಿಯಾಗಿದ್ದು, ಈಗ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ರಾಜ್ಯ ಪ್ರವಾಸಕ್ಕೆ ಸಿದ್ಧತೆ ಜೋರಾಗಿ ನಡೆದಿದೆ.
ಅಮಿತ್ ಶಾ ಅವರ ರಾಜ್ಯ ಪ್ರವಾಸ ನಿಗದಿಯಾಗಿದ್ದು, ಫೆಬ್ರವರಿ 14ರಂದು ಚಿಕ್ಕಬಳ್ಳಾಪುರದಲ್ಲಿ ರಣಕಹಳೆ ಮೊಳಗಿಸಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಸಭೆ, ಸಮಾವೇಶ ನಡೆಸಲಿದ್ದಾರೆ.
ಇದು ದೊಡ್ಡ ಮಟ್ಟದ ಸಮಾವೇಶಕ್ಕೆ ಪೂರ್ವಭಾವಿ ಸಭೆ ಎಂದೇ ಭಾವಿಸಲಾಗಿದೆ. ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಸಂಸತ್ ಕ್ಷೇತ್ರಗಳ ಪ್ರತಿ ಬೂತ್ ಮಟ್ಟದ ಕನಿಷ್ಠ 10 ಪ್ರಮುಖ ಕಾರ್ಯಕರ್ತರನ್ನು ಸಭೆಗೆ ಆಹ್ವಾನಿಸಲಾಗಿದೆ.

ಕಾರ್ಯಕರ್ತರ ಸಭೆಯಲ್ಲಿ ಚುನಾವಣೆ ಸಂದರ್ಭದಲ್ಲಿ ಮತದಾರರನ್ನು ಸೆಳೆಯುವುದು ಹೇಗೆ? ಸಾಮಾಜಿಕ ಜಾಲ ತಾಣಗಳ ಸದ್ಬಳಕೆ ಹೇಗೆ? ಸಾರ್ವಜನಿಕರಿಗೆ ಸಹಾಯವಾಣಿಯಾಗಿ ಹೇಗೆ ಕಾರ್ಯ ನಿರ್ವಹಿಸುವುದು? ಮುಂತಾದ ವಿಷಯಗಳ ಬಗ್ಗೆ ಅಮಿತ್ ಶಾ ಅವರು ಸಲಹೆ, ಸೂಚನೆ, ಮಾರ್ಗದರ್ಶನ ನೀಡಲಿದ್ದಾರೆ.
ಮೋದಿ ಅವರು ಫೆಬ್ರವರಿ ತಿಂಗಳಲ್ಲಿ ಇನ್ನೆರಡು ಸಮಾವೇಶಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಈ ನಡುವೆ ಇನ್ನಷ್ಟು ರಾಷ್ಟ್ರಮಟ್ಟದ ನಾಯಕರು ಪೂರ್ವ ಭಾವಿ ಸಭೆಗಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯೂ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.












Click it and Unblock the Notifications