Doddaballapur: ರೆಸ್ಟೋರೆಂಟ್ ಪರವಾನಗಿ ನವೀಕರಿಸಲು ಲಂಚ: ಪಂಚಾಯತಿ ಅಧಿಕಾರಿ ಲೋಕಾಯುಕ್ತ ಬಲೆಗೆ
ದೊಡ್ಡಬಳ್ಳಾಪುರ ಮೇ 8: ರೆಸ್ಟೋರೆಂಟ್ ಪರವಾನಗಿ ನವೀಕರಿಸಲು ₹5 ಲಕ್ಷಕ್ಕೆ ಬೇಡಿಕೆ ಇಟ್ಟು, ₹3.50 ಲಕ್ಷ ಲಂಚ ಪಡೆಯುವಾಗ ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ ಪಿಡಿಒ ಎಂ.ಜಿ.ನಿರಂಜನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ತಾಲೊಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ರೆಸ್ಟೋರೆಂಟ್ ಜನರಲ್ ಲೈಸನ್ಸ್ ಹೊಂದಿರುವ ನರಸಿಂಹಮೂರ್ತಿ ಎಂಬುವವರು ಪರವಾನಗಿ ನವೀಕರಣಕ್ಕೆ ಪಿಡಿಒ ಬಳಿ ಹೋಗಿದ್ದರು.

ಪರವಾನಗಿ ನವೀಕರಿಸಿಕೊಡಲು ₹5 ಲಕ್ಷ ಲಂಚದ ಹಣಕ್ಕೆ ಪಿಡಿಒ ಬೇಡಿಕೆ ಇಟ್ಟಿದ್ದರು. ಕೊನೆಗೂ ₹3.50 ಲಕ್ಷಕ್ಕೆ ಮಾತುಕತೆಯಾಗಿತ್ತು. ನರಸಿಂಹಮೂರ್ತಿ ಅವರು ನೀಡಿದ ದೂರಿನ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಂಗಳವಾರ ಪಿಡಿಒ ನಿರಂಜನ್ ಅವರು ದೊಡ್ಡಬಳ್ಳಾಪುರ ತಾಲೂಕು ಪಂಚಾಯ್ತಿ ಆವರಣದಲ್ಲಿರುವ ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕರ ಕೊಠಡಿಯಲ್ಲಿ ₹3.50 ಲಕ್ಷ ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಮಾತನಾಡಿದ ದೂರುದಾರ ನರಸಿಂಹಮೂರ್ತಿ, ನನಗೆ ಹೃದಯ ಶಸ್ತ್ರ ಚಿಕಿತ್ಸೆಯಾಗಿದೆ, ಬಾರ್ ವ್ಯವಹಾರ ಬಿಟ್ಟರೆ ನನಗೆ ಬೇರೆ ಉದ್ಯೋಗ ಗೊತ್ತಿಲ್ಲ, ಇದ್ದ ಜಮೀನು ಮಾರಾಟ ಮಾಡಿ ಬಾರ್ ಪರವಾನಗಿ ಪಡೆದಿದ್ದೇನೆ. ಅರಳುಮಲ್ಲಿಗೆ ಪಂಚಾಯ್ತಿ ಪಿಡಿಒ ನನ್ನ ಕೆಲಸ ಮಾಡಲು ಕಳೆದ ಎರಡು ವರ್ಷಗಳಿಂದ ಸತಾಯಿಸುತ್ತಿದ್ದಾನೆ. ಕ್ಷೇತ್ರದ ಶಾಸಕರು, ತಾಲ್ಲೂಕು ಪಂಚಾಯಿತಿ ಅಧಿಕಾರಿ ಇಒ ಸೇರಿದಂತೆ ಯಾರೇ ಹೇಳಿದರು ಕೆಲಸ ಮಾಡುವುದಿಲ್ಲ ಎಂದು ಆರೋಪಿಸಿದರು.

ಪಿಡಿಓ ನನ್ನ ಬಾರ್ ಪರವಾನಗಿಗೆ ಸಂಬಂದಿಸಿದಂತೆ ಈವರೆಗೆ ವಾಣಿಜ್ಯ ಪೇಪರ್ ನೀಡಲು ಮೂರು ಲಕ್ಷ, ರೆಸ್ಟೋರೆಂಟ್ ಪರವಾನಗಿಗೆ 2.50 ಲಕ್ಷ ತಗೊಂಡಿದ್ದಾನೆ. ಈಗ ನವೀಕರಣ ಮಾಡಿಕೊಡಲು ಐದು ಲಕ್ಷ ಕೇಳಿದ್ದ ಎಂದು ಆರೋಪಿಸಿದ ಅವರು, ಚೌಕಾಸಿ ಮಾಡಿದ್ದಕ್ಕೆ 3.50 ಲಕ್ಷ ಕೊಡಬೇಕು ಎಂದು ಕೇಳಿದ್ದರು. ಇಂದು ಲೋಕಾಯುಕ್ತರ ಮೂಲಕ ಹಣ ತಂದು ಕೊಟ್ಟಿದ್ದೇನೆ, ಅಧಿಕಾರಿಗಳು ದಾಳಿ ನಡೆಸಿ ಹಣದ ಸಮೇತ ಪಿಡಿಒ ಅವರನ್ನು ಹಿಡಿದುಕೊಂಡಿದ್ದಾರೆ ಎಂದರು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications