ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣದಲ್ಲಿ ನಮ್ಮ ಮಾವನ ಮಕ್ಕಳು ಯಾರೂ ಇಲ್ಲ: ಸಚಿವ ಸುಧಾಕರ್

|
Google Oneindia Kannada News

ಚಿಕ್ಕಬಳ್ಳಾಪುರ, ಫೆಬ್ರವರಿ 25: ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ ಕಲ್ಲುಕ್ವಾರಿಯಲ್ಲಿ ಜಿಲೆಟಿನ್ ಸ್ಪೋಟ ಪ್ರಕರಣದಲ್ಲಿ ನಮ್ಮ‌ ಮಾವನ ಮಕ್ಕಳು ಯಾರೂ ಇಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಪ್ರಸಿದ್ಧ ಗಿರಿಧಾಮ ನಂದಿ ಬೆಟ್ಟದ ಅಭಿವೃದ್ಧಿ ವಿಚಾರವಾಗಿ ಅಧಿಕಾರಿಗಳ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತಾನಾಡಿದ ಅವರು, ಸ್ಪೋಟಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಕೆ.ಸುಧಾಕರ್ ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟದ ಪ್ರಮುಖ ಆರೋಪಿ ನಾಗರಾಜ್ ಬಂಧನಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟದ ಪ್ರಮುಖ ಆರೋಪಿ ನಾಗರಾಜ್ ಬಂಧನ

ಈಗಾಗಲೇ 24 ಗಂಟೆ ಒಳಗೆ ಆರೋಪಿಗಳನ್ನು ಬಂಧಿಸಲಾಗಿದ್ದು, ಜಿಲೆಟಿನ್ ಸ್ಪೋಟದ ಘಟನೆಯಲ್ಲಿ ಅಧಿಕಾರ ನಿರ್ಲಕ್ಷ್ಯದ ಆರೋಪದ ಮೇರೆಗೆ ಇಬ್ಬರು ಪೊಲೀಸರನ್ನು ಸಹ ಅಮಾನತು ಮಾಡಲಾಗಿದೆ. ಪೊಲೀಸ್ ತನಿಖೆಯಲ್ಲಿ ಇನ್ನಷ್ಟು ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ಮೇಲೆಯೂ ಕ್ರಮ ಕೈಗೊಳ್ಳುವುದಾಗಿ ಸಚಿವ ಕೆ.ಸುಧಾಕರ್ ಭರವಸೆ ನೀಡಿದರು.

Chikkaballapur: Minister K Sudhakar Reacted About Hirenagavalli Gelatin Blast Case

Recommended Video

ಮತ್ತೆ ಜನಸಾಮಾನ್ಯರಿಗೆ ಅನಿಲಾಘಾತ- ಅಡುಗೆ ಅನಿಲ ದರ 25 ರೂಪಾಯಿ ಹೆಚ್ಚಳ..! | Oneindia Kannada

ಸದ್ಯ ರಾಜ್ಯದಲ್ಲಿ ಪೊಲೀಸರ ನಿರಂತರ ದಾಳಿಯಿಂದ ಕ್ರಷರ್​ ಮಾಲೀಕರಿಗೆ ಭಯ ಶುರುವಾಗಿದ್ದು, ಸ್ಫೋಟ ಪ್ರಕರಣದಲ್ಲಿ ನಮ್ಮ ಮಾವನ ಮಕ್ಕಳು ಯಾರೂ ಇಲ್ಲ. ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲ. ತಪ್ಪಿತಸ್ಥ ಎಲ್ಲರ ಮೇಲಿಯೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

English summary
Minister K Sudhakar said that action will be taken against the accused in connection with the Hirenagavalli blast case in Chikkaballapur district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X