ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ವಿತರಿಸಿದ ಸಚಿವ ಸುಧಾಕರ್

ಚಿಕ್ಕಬಳ್ಳಾಪುರ, ಆಗಸ್ಟ್ 05: "ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಪ್ರಮಾಣ ನಿಯಂತ್ರಣದಲ್ಲಿದ್ದು, ಮೂರನೇ ಅಲೆಯ ಆತಂಕವಿಲ್ಲ,'' ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ತಮ್ಮ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ಶ್ರೀ ಸಾಯಿ ಕೃಷ್ಣ ಚಾರಿಟಬಲ್ ಟ್ರಸ್ಟ್‌ನಿಂದ 'ಆಸರೆ' ಕಾರ್ಯಕ್ರಮದಡಿ 1 ಲಕ್ಷ ರೂ. ಸಹಾಯಧನ ವಿತರಣೆ ಕಾರ್ಯಕ್ರಮದಲ್ಲಿ ಸಚಿವ ಡಾ.ಕೆ. ಸುಧಾಕರ್ ಮಾತನಾಡಿದರು. ಕೋವಿಡ್‌ನಿಂದ ನೊಂದ ಕುಟುಂಬಗಳ ಮನೆಗೆ ಭೇಟಿ ನೀಡಿ, ಪರಿಹಾರದ ಮೊತ್ತವನ್ನು ವಿತರಿಸಿ ಸಾಂತ್ವನ ಹೇಳಿದರು.

ನಂತರ ಮಾತನಾಡಿದ ಅವರು, "ಚಿಕ್ಕಬಳ್ಳಾಪುರ ಜನತೆಯ ಆಶೀರ್ವಾದದಿಂದ ಎರಡನೇ ಬಾರಿ ಸಚಿವನಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತಿದೆ. ಮೊದಲ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಕೋವಿಡ್ ನಿಯಂತ್ರಿಸುವ ಜವಾಬ್ದಾರಿ ವಹಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕುರಿತು ಸಭೆ ನಡೆಸಲಾಗಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಚಿಕ್ಕಬಳ್ಳಾಪುರದಲ್ಲಿ ಕೋವಿಡ್ ನಿಯಂತ್ರಣದಲ್ಲಿದೆ. ಕಳೆದ 14 ದಿನಗಳಿಂದ ಪಾಸಿಟಿವಿಟಿ ದರ ಎರಡಂಕಿಯನ್ನೂ ದಾಟಿಲ್ಲ. ಮೂರನೇ ಅಲೆ ಆರಂಭದ ಮುನ್ಸೂಚನೆ ಕೆಲ ಜಿಲ್ಲೆಗಳಲ್ಲಿ ಕಂಡುಬರುತ್ತಿದೆ. ಆದರೆ ಅಂತಹ ಆತಂಕ ಪರಿಸ್ಥಿತಿ ಚಿಕ್ಕಬಳ್ಳಾಪುರದಲ್ಲಿ ಇಲ್ಲ,'' ಎಂದು ತಿಳಿಸಿದರು.

 ಶೇ.90 ರಷ್ಟು ವೈದ್ಯರ ಕೊರತೆ ನೀಗಿದೆ

ಶೇ.90 ರಷ್ಟು ವೈದ್ಯರ ಕೊರತೆ ನೀಗಿದೆ

"ಜಿಲ್ಲೆಯ ಗುಡಿಬಂಡೆ, ಬಾಗೇಪಲ್ಲಿ, ಚಿಂತಾಮಣಿ, ಗೌರಿಬಿದನೂರು, ಶಿಡ್ಲಘಟ್ಟ ತಾಲೂಕು ಕೇಂದ್ರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಆಕ್ಸಿಜನ್ ಘಟಕ ನಿರ್ಮಿಸಲಾಗಿದೆ. ಜಿಲ್ಲಾ ಕೇಂದ್ರದ ಹೊಸ ಆಸ್ಪತ್ರೆ ಹಾಗೂ ಹಳೆ ಆಸ್ಪತ್ರೆಯಲ್ಲಿ ಒಟ್ಟು ಎರಡು ಘಟಕ ಆರಂಭಿಸಲಾಗುತ್ತಿದೆ. ಅದೇ ರೀತಿ ಮಕ್ಕಳ ವಿಶೇಷ ನಿಗಾ ಘಟಕವನ್ನು ಜಿಲ್ಲೆಯಲ್ಲಿ ಆರಂಭಿಸಲು ಸಿದ್ಧತೆ ನಡೆದಿದ್ದು, ಅದಕ್ಕೆ ಬೇಕಾದ ವೆಂಟಿಲೇಟರ್‌ಗಳನ್ನು ಒಂದೆರಡು ದಿನಗಳಲ್ಲಿ ನೀಡಲಾಗುವುದು. ವೈದ್ಯರ ನೇರ ನೇಮಕಾತಿ ಮಾಡಿರುವುದರಿಂದ ಶೇ.90 ರಷ್ಟು ವೈದ್ಯರ ಕೊರತೆ ನೀಗಿದೆ,'' ಎಂದರು.

 ಬೊಮ್ಮಾಯಿ ದೂರದೃಷ್ಟಿಯ ನಾಯಕ

ಬೊಮ್ಮಾಯಿ ದೂರದೃಷ್ಟಿಯ ನಾಯಕ

"ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೂರದೃಷ್ಟಿಯ ನಾಯಕತ್ವ ಗುಣ ಹೊಂದಿದ್ದು, ರಾಜ್ಯವನ್ನು ಎಲ್ಲಾ ಆಯಾಮಗಳಲ್ಲಿ ಅಭಿವೃದ್ಧಿಪಡಿಸುವ ಕನಸನ್ನು ಬಿಚ್ಚಿಟ್ಟಿದ್ದಾರೆ. ಇದಕ್ಕೆ ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪನವರು ಸ್ಫೂರ್ತಿಯಾಗಿದ್ದಾರೆ. ಈ ಸರ್ಕಾರದಿಂದ ಆರೋಗ್ಯ, ಶಿಕ್ಷಣ, ಕೈಗಾರಿಕೆಯ ಅಭಿವೃದ್ಧಿ, ಬಡವರ ಕಲ್ಯಾಣ, ಉದ್ಯೋಗ ಸೃಷ್ಟಿಯಾಗಲಿದೆ. ಮೊದಲ ದಿನ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ಘೋಷಿಸಿರುವುದೇ ಮುಖ್ಯಮಂತ್ರಿಗಳ ರೈತಪರ ಕಾಳಜಿ ತೋರಿಸಿದೆ. ಅದೇ ರೀತಿ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರ ವೇತನ ಹೆಚ್ಚಳದಿಂದ ಸಾಮಾಜಿಕ ಭದ್ರತೆ ದೊರೆತಿದೆ,'' ಎಂದು ಸಚಿವ ಕೆ.ಸುಧಾಕರ್ ಹೇಳಿದರು.

 ಪರಿಶಿಷ್ಟ ಪಂಗಡದ ಜನರಿಗಾಗಿ ವಿಶೇಷ ಸಚಿವಾಲಯ

ಪರಿಶಿಷ್ಟ ಪಂಗಡದ ಜನರಿಗಾಗಿ ವಿಶೇಷ ಸಚಿವಾಲಯ

"ಅಕ್ಕಿ ನೀಡಿದರೆ ಊಟ ಮಾಡಬಹುದು, ಆದರೆ ಮೀನು ಕೊಡುವ ಬದಲು ಮೀನುಗಾರಿಕೆಯನ್ನು ಕಲಿಸಬೇಕು ಎಂಬ ಮಾತಿದೆ. ಹಾಗೆಯೇ ನಮ್ಮ ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡಿ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿದೆ. ಈ ರೀತಿ ಉನ್ನತ ಶಿಕ್ಷಣಕ್ಕೆ 1 ಸಾವಿರ ಕೋಟಿ ರೂ. ವಿದ್ಯಾರ್ಥಿವೇತನ ನೀಡಿದ್ದಾರೆ, ಇಂತಹ ಉದಾಹರಣೆ ಬೇರೆ ಕಡೆ ಸಿಗಲ್ಲ. ಪರಿಶಿಷ್ಟ ಪಂಗಡದ ಜನರಿಗಾಗಿ ವಿಶೇಷ ಸಚಿವಾಲಯ ಸ್ಥಾಪಿಸಬೇಕೆಂಬ ಬೇಡಿಕೆ ಇದ್ದು, ಅದನ್ನು ಆರಂಭಿಸಲು ಬುಧವಾರ ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ,'' ಎಂದು ತಿಳಿಸಿದರು.

 ಸೆಪ್ಟೆಂಬರ್ ಅಂತ್ಯಕ್ಕೆ ಐದೂವರೆ ಕೋಟಿ ಲಸಿಕೆ

ಸೆಪ್ಟೆಂಬರ್ ಅಂತ್ಯಕ್ಕೆ ಐದೂವರೆ ಕೋಟಿ ಲಸಿಕೆ

"ಮುಂದಿನ ಒಂದು ತಿಂಗಳಿಗಾಗಿ ಒಂದೂವರೆ ಕೋಟಿ ಕೊರೊನಾ ಲಸಿಕೆಯ ಬೇಡಿಕೆ ಇಡಲಾಗಿತ್ತು. ಈವರೆಗೆ ಕರ್ನಾಟಕದಲ್ಲಿ 3.9 ಕೋಟಿ ಲಸಿಕೆ ನೀಡಿದ್ದು, ಆಗಸ್ಟ್ ಅಂತ್ಯಕ್ಕೆ 4 ಕೋಟಿ ಹಾಗೂ ಸೆಪ್ಟೆಂಬರ್ ಅಂತ್ಯಕ್ಕೆ ಐದೂವರೆ ಕೋಟಿ ಲಸಿಕೆ ನೀಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಲಿದೆ. ಯಾವುದೇ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.5 ಕ್ಕಿಂತ ಹೆಚ್ಚಿಲ್ಲ. ಕೇರಳಕ್ಕೆ ಹೊಂದಿಕೊಂಡ ಜಿಲ್ಲೆಗಳಲ್ಲಿ ಹೆಚ್ಚಿನ ಎಚ್ಚರಿಕೆಯನ್ನು ಅಲ್ಲಿನ ಜಿಲ್ಲಾಡಳಿತಗಳು ವಹಿಸಿದೆ. ಸರ್ಕಾರ ಯಾವ ರೀತಿ ಆಡಳಿತ ನೀಡಲಿದೆ ಎಂದು ಬೇಕಿದ್ದರೆ ವಿರೋಧ ಪಕ್ಷದವರು ವ್ಯಾಖ್ಯಾನ ಮಾಡಲಿ,'' ಎಂದರು.

Recommended Video

    ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣವರ್ ರಾಜಕೀಯ ಪ್ರವೇಶ | Oneindia Kannada
     ನಂದಿ ಬೆಟ್ಟದಲ್ಲಿ ಜನ ಸೇರದಂತೆ ಕ್ರಮ

    ನಂದಿ ಬೆಟ್ಟದಲ್ಲಿ ಜನ ಸೇರದಂತೆ ಕ್ರಮ

    ಜಿಲ್ಲೆಯ ನಂದಿ ಬೆಟ್ಟ ಸೇರಿದಂತೆ ಪ್ರವಾಸಿ ತಾಣಗಳಲ್ಲಿ ಜನ ಸೇರದಂತೆ ಕ್ರಮ ವಹಿಸಲಾಗುವುದು. ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಗೆ ತಾಯಿ ಮತ್ತು ಮಕ್ಕಳ ಎರಡು ಆಸ್ಪತ್ರೆ ಮಂಜೂರಾಗಿದ್ದು, ಮಿನಿ ವಿಧಾನಸೌಧವೂ ಮಂಜೂರಾಗಿದೆ. ಸಚಿವ ಸಂಪುಟ ರಚನೆ ವಿಚಾರವಾಗಿ ಮಾತನಾಡಿ, "ಎಲ್ಲ ಶಾಸಕರಿಗೆ ಸಚಿವರಾಗುವ ಅರ್ಹತೆ ಇದೆ. ಪ್ರಾದೇಶಿಕ ಸಮತೋಲನ ನೋಡಿಕೊಂಡು ಸಂಪುಟ ರಚನೆಯಾಗಿದೆ. ಅವಕಾಶ ವಂಚಿತರಿಗೆ ಮುಂದೆ ಸೂಕ್ತ ಸ್ಥಾನವನ್ನು ಪಕ್ಷ ನೀಡಲಿದೆ,'' ಎಂದು ಹೇಳಿದರು.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+