ಯೋಗ ದಿನಾಚರಣೆಯಲ್ಲಿ ಉಸ್ತುವಾರಿ ಸಚಿವ, ಚಿಕ್ಕಬಳ್ಳಾಪುರ ಸಂಸದ ಭಾಗಿ: ಸ್ಥಳೀಯ ಶಾಸಕ ಪ್ರದೀಪ್ ಈಶ್ವರ್ ಗೈರು!
ಚಿಕ್ಕಬಳ್ಳಾಪುರ ಜೂನ್ 21: ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಇಂದು ನಡೆದ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ಸಂಸದ ಡಾ.ಕೆ.ಸುಧಾಕರ್ ಅವರು ಚಾಲನೆ ನೀಡಿದರು. ಆದರೆ ಈ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ ಗೈರಾಗಿದ್ದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯೋಗ ಸಂಸ್ಥೆಗಳ ಸಹಯೋಗದೊಂದಿಗೆ 10 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.

ಡಾ.ಕೆ.ಸುಧಾಕರ್ ಅವರು ಸಂಸದರಾದ ಬಳಿಕ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ಮೂಲಕ ಜಿಲ್ಲೆಯಲ್ಲಿ ಪ್ರಥಮ ಸರ್ಕಾರಿ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರೊಂದಿಗೆ ವೇದಿಕೆ ಹಂಚಿಕೊಂಡರು. ಅಲ್ಲದೇ ಇಬ್ಬರು ಅಕ್ಕಪಕ್ಕದಲ್ಲಿ ನಿಂತು ಯೋಗಭ್ಯಾಸ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದು ವಿಶೇಷವಾಗಿತ್ತು.
ಶಾಸಕ ಪ್ರದೀಪ್ ಗೈರು:
ಕ್ಷೇತ್ರದಲ್ಲಿ ಕೇವಲ ಬೆರಳಣಿಕೆಯಷ್ಟೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವ ಶಾಸಕ ಪ್ರದೀಪ್ ಈಶ್ವರ್ ಇಂದು ನಡೆದ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಗೈರಾಗಿದ್ದು ಸಾರ್ವಜನಿಕವಾಗಿ ಚರ್ಚೆಗೆ ಗ್ರಾಸವಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, ಯೋಗ ಮಾಡುವುದರಿಂದ ದೇಹ ಆರೋಗ್ಯವಾಗಿರುವುದಲ್ಲದೇ, ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಶಕ್ತಿ ಯೋಗಕ್ಕಿದೆ. ಮಾನಸಿಕ ಚೈತನ್ಯಕ್ಕೆ ಯೋಗವೇ ಮದ್ದು. ಯೋಗಭ್ಯಾಸ ಪ್ರಚಾರ ಪಡಿಸುವ ಉದ್ದೇಶದಿಂದ ಜೂನ್ 21ಕ್ಕೆ ವಿಶ್ವ ಯೋಗದಿನ ಆಚರಿಸಲಾಗುತ್ತದೆ. ಕಾಯಿಲೆ ಹತ್ತಿರ ಸುಳಿಯದಂತೆ ಚೈತನ್ಯ ತುಂಬುವ, ಮನಸ್ಸು ಸದೃಢಗೊಳಿಸಬಲ್ಲ ಶಕ್ತಿ ಯೋಗಕ್ಕಿದೆ ಎಂದರು.
ಚಿಕ್ಕಬಳ್ಳಾಪುರ ಸಂಸದ ಡಾ ಕೆ ಸುಧಾಕರ್ ಮಾತನಾಡಿ, 150 ಕ್ಕೂ ಹೆಚ್ಚು ದೇಶಗಳಲ್ಲಿ ಯೋಗ ದಿನ ಆಚರಣೆ ಮಾಡಲಾಗುತ್ತಿದೆ, ಸುಮಾರು ಏಳು ಸಾವಿರ ಪ್ರತಿನಿಧಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿಜಿ ಅವರು ಇಂದು ಯೋಗಭ್ಯಾಸದಲ್ಲಿ ನಿರತರಾಗಿದ್ದಾರೆ ಇದು ನಮ್ಮ ಹೆಮ್ಮೆ. ಸಮಾಜದ ಸ್ವಾಸ್ತ್ಯ ಕಾಪಾಡಲು ಯೋಗಾಭ್ಯಾಸ ಬಹು ಮುಖ್ಯ ಎಂದರು.
ಧ್ಯಾನವು ಯೋಗದ ಮಹತ್ವದ ಭಾಗವಾಗಿದೆ. ಚಲನೆಯಿಂದ ನಿಶ್ಚಲತೆಗೆ, ಶಬ್ದದಿಂದ ನಿಶ್ಯಬ್ದಕ್ಕೆ, ಧ್ಯಾನವಾಗಿದೆ. ನಾವೆಲ್ಲರೂ ಶಾಂತ, ಪ್ರಶಾಂತ, ಆಹ್ಲಾದಕರ ಮತ್ತು ಸುಂದರವಾದ ಭೂಮಿಯನ್ನು ಪಡೆದುಕೊಂಡಿದ್ದೇವೆ. ಧ್ಯಾನವು ಈ ಶಾಂತ ಜಾಗದಲ್ಲಿ ನಮ್ಮ ಗಮನವನ್ನು ಕೇಂದ್ರೀಕರಿಸುವುದನ್ನು ಒಳಗೊಂಡಿರುತ್ತದೆ. ಈ ನಿಶ್ಚಲತೆಯಿಂದ ಮನಸ್ಸನ್ನು ಶುದ್ಧೀಕರಿಸಲಾಗುತ್ತದೆ. ಯೋಗದಿಂದ ಕೇವಲ ದೈಹಿಕ ಪ್ರಯೋಜನಗಳಲ್ಲದೆ ಆಧ್ಯಾತ್ಮಿಕ ಪ್ರಯೋಜನಗಳೂ ಇವೆ ಎಂದು ಹೇಳಿದರು.
ಕಾರ್ಯಕ್ರಮದ ಉದ್ಘಾಟನೆಗೂ ಮುನ್ನ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಚಿಕ್ಕಬಳ್ಳಾಪುರ ಸಂಸದ ಡಾ. ಕೆ ಸುಧಾಕರ್, ಜಿಲ್ಲಾಧಿಕಾರಿ ಪಿಎನ್.ರವೀಂದ್ರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿಎಲ್ ನಾಗೇಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜ ಇಮಾಮ್ ಖಾಸಿಮ್, ಅಶ್ವಿನಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಬೈಲಾಜಿನಪ್ಪ ಜಿಲ್ಲಾ ಆಯುಷ್ ಅಧಿಕಾರಿ ಡಾ. ಸಬಿ ಬಾಬಾನ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಶಾಲಾ ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡಿದರು. ಯೋಗಭ್ಯಾಸದ ವಿವಿಧ ಆಸನಗಳ ಬಗ್ಗೆ ಪತಂಜಲಿ ಯೋಗ ಸಮಿತಿಯ ಲೋಕನಾಥ್, ಜಿ ಗೋವಿಂದ, ವೀಣಾ ಮತ್ತು ಶ್ರೀ ಪತಂಜಲಿಯ ನಾಗರಾಜ್ ಅವರು ವಿವರಿಸಿದರು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications