ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುವುದು ಸಂವಿಧಾನಕ್ಕೆ ಮಾಡುವ ಅಪಚಾರ- ಕೆ ಸುಧಾಕರ್
ಚಿಕ್ಕಬಳ್ಳಾಪುರ ಆಗಸ್ಟ್ 14: ರಾಜ್ಯ ಕಾಂಗ್ರೆಸ್ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡುವುದು ಸಂವಿಧಾನಕ್ಕೆ ಮಾಡುವ ಅಪಚಾರ. ಜೊತೆಗೆ ಸರ್ಕಾರ ಚಿಕ್ಕಬಳ್ಳಾಪುರ ನಗರಸಭಾಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಜಾತಿ-ಮಹಿಳೆಗೆ ಮೀಸಲಿಡದೆ ವಂಚಿಸಿದೆ ಎಂದು ಸಂಸದ ಡಾ.ಕೆ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಯಾವುದೇ ಚುನಾವಣೆ ಬೇಕಿಲ್ಲ. ಲೋಕಸಭೆ ಚುನಾವಣಾ ಫಲಿತಾಂಶದಿಂದ ಭಯಗೊಂಡು ಪಂಚಾಯಿತಿ ಚುನಾವಣೆ ಮುಂದೂಡಿದ್ದಾರೆ. ಬಿಬಿಎಂಪಿ ಚುನಾವಣೆ ಮುಂದೂಡುವ ಉದ್ದೇಶದಿಂದ ಅದನ್ನು ವಿಭಜನೆ ಮಾಡಲಾಗಿದೆ. ನಗರಸಭಾ ಸದಸ್ಯರಿಂದ ಅಧಿಕಾರ ಮೊಟಕಾಗುವ ಆತಂಕದಿಂದ ಶಾಸಕರು ಹೀಗೆ ಮಾಡಿರಬಹುದು. ಆದರೆ ಇದು ಸಂವಿಧಾನಕ್ಕೆ ಅಪಚಾರವೆಸಗುವ ಕೆಲಸ. ಸ್ಥಳೀಯ ಆಡಳಿತದಲ್ಲಿ ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಯಬೇಕಿದ್ದರೂ, ಆ ವ್ಯವಸ್ಥೆಗೆ ವಿರುದ್ಧವಾಗಿ ಕಾಂಗ್ರೆಸ್ ಸರ್ಕಾರ ವರ್ತಿಸಿದೆ ಎಂದು ದೂರಿದರು.

ಚಿಕ್ಕಬಳ್ಳಾಪುರ ನಗರಸಭಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗಕ್ಕೆ ಮೀಸಲು ಬಂದಿದೆ. ಆದರೆ 30 ವರ್ಷದಿಂದ ಪರಿಶಿಷ್ಟ ಜಾತಿ-ಮಹಿಳೆಗೆ ಈವರೆಗೆ ಅವಕಾಶ ಸಿಕ್ಕಿಲ್ಲ. ಸಾಮಾಜಿಕ ನ್ಯಾಯದ ಬಗ್ಗೆ, ಅಹಿಂದ ಬಗ್ಗೆ ಕಾಂಗ್ರೆಸ್ ಮಾತಾಡುತ್ತದೆ. ಕಾಂಗ್ರೆಸ್ ನಾಯಕರು ಬಾಬಾ ಸಾಹೇಬ್ ಅಂಬೇಡ್ಕರ್ ಬಗ್ಗೆ ಮಾತಾಡುತ್ತಾರೆ. ನಗರಾಭಿವೃದ್ಧಿ ಇಲಾಖೆಯ ಕರಡಿನಲ್ಲಿದ್ದುದನ್ನು ಬದಲಿಸಿ ಹುನ್ನಾರ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬೆಂಬಲಿತ ಅಭ್ಯರ್ಥಿಗೆ ಎಲ್ಲರೂ ಬೆಂಬಲಿಸಬೇಕು. ಚಿಕ್ಕಬಳ್ಳಾಪುರದಲ್ಲಿ ಯಾವುದೇ ಆಭಿವೃದ್ಧಿ ಕಾರ್ಯ ನಡೆದಿಲ್ಲ. ಅಭಿವೃದ್ಧಿಗೆ ಎಲ್ಲರೂ ಮತ ನೀಡುತ್ತಾರೆ ಎಂದರು.
ಜನವಿರೋಧಿ ಕ್ರಮ
ಪಿಎಂ ಜನ ಔಷಧಿ ಕೇಂದ್ರಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ಬಂಧ ಮಾಡುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿರುವುದು ಜನ ವಿರೋಧಿ ನಿಲುವಾಗಿದ್ದು, ಇದನ್ನು ಉಗ್ರವಾಗಿ ಖಂಡಿಸುತ್ತೇನೆ. ನಾನು ಸಚಿವನಾಗಿದ್ದಾಗ ರಾಜ್ಯದಲ್ಲಿ 1 ಸಾವಿರಕ್ಕೂ ಅಧಿಕ ಕೇಂದ್ರಗಳನ್ನು ಆರಂಭಿಸಲು ಕ್ರಮ ವಹಿಸಿದ್ದೆ. ಬಿಪಿ, ಶುಗರ್ ರೋಗಿಗಳಿರುವ ಕುಟುಂಬಕ್ಕೆ 3-4 ಸಾವಿರ ರೂ. ಉಳಿತಾಯವಾಗುತ್ತಿದೆ. ಅಂತಹ ಮಳಿಗೆ ಮುಚ್ಚುವುದು ಬಡವರ ವಿರೋಧಿ ನಿಲುವು. ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ಆಸ್ಪತ್ರೆಗಳಲ್ಲಿ ಇನ್ನೂ ಎರಡು ಜನ ಔಷಧಿ ಕೇಂದ್ರಗಳಿಗೆ ಅವಕಾಶ ನೀಡಿ ಎಂದು ಆಗ್ರಹಿಸಿದರು.

ನೀರಿನ ಸಮಸ್ಯೆ ಬಗ್ಗೆ ಚರ್ಚೆ
ಬಯಲುಸೀಮೆಗೆ ಕಾವೇರಿ ನೀರು ಸಿಗುವುದಿಲ್ಲ. ಬೇರೆ ನೀರಾವರಿ ಯೋಜನೆಗಳಲ್ಲೂ ಈ ಪ್ರದೇಶದ ಜನರಿಗೆ ನೀರು ಸಿಕ್ಕಿಲ್ಲ. ಇಲ್ಲಿನ ಜನರು ಇದೇ ರಾಜ್ಯದಲ್ಲಿದ್ದಾರೆ. ಕೃಷ್ಣಾ ನದಿಯಿಂದ 5-10 ಟಿಎಂಸಿ ನೀರು ಪಡೆದು, ಉಳಿದ ನೀರನ್ನು ನಾರಾಯಣಪುರ ಜಲಾಶಯದಿಂದ ಆಂಧ್ರಕ್ಕೆ ಹರಿಸಿದರೆ ಸಹಾಯಕವಾಗಲಿದೆ. ಇದಕ್ಕೆ ರಾಜಕೀಯ ಇಚ್ಛಾಶಕ್ತಿ ಬೇಕಿದೆ. ಬೇರೆ ನೀರಾವರಿ ಯೋಜನೆಗಳ ಶೇ.10 ರಷ್ಟನ್ನು ಇಲ್ಲಿಗೆ ಖರ್ಚು ಮಾಡಿದರೆ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರಕ್ಕೆ ನೀರು ಸಿಗಲಿದೆ. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಗಮನಹರಿಸಬೇಕು ಎಂದು ಒತ್ತಾಯಿಸಿದರು.
ಧಾರಾಕಾರ ಮಳೆಯಿಂದಾಗಿ ಹೂ ಬೆಳೆಗಾರರಿಗೆ ನಷ್ಟವಾಗಿದ್ದು, ಇದರ ಬಗ್ಗೆ ರಾಜ್ಯ ಸರ್ಕಾರ ಗಮನಹರಿಸಿಲ್ಲ. ಇದಕ್ಕಾಗಿ ಕೇಂದ್ರ ಸರ್ಕಾರ 14 ಸಾವಿರ ರೂ. ವಿಮೆ ಯೋಜನೆ ತಂದಿದೆ. ಬೆಳೆಗಾರರಿಗೆ ಈ ಬಗ್ಗೆ ಸರಿಯಾಗಿ ಮಾಹಿತಿ ತಲುಪಬೇಕು ಎಂದರು.
ಜಿಲ್ಲೆಯಲ್ಲಿ ಗೋಮಾಳ ಜಮೀನನ್ನು ಹಿಂಬಾಲಕರಿಗೆ ನೀಡಲಾಗುತ್ತಿದೆ. ನಂದಿ ಗ್ರಾಮದ ಭಾಗದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಭೂಮಿ ಕಬಳಿಸಲಾಗುತ್ತಿದೆ. ಅಧಿಕಾರಿಗಳು ಜನಪ್ರತಿನಿಧಿಗಳ ಮಾತು ಕೇಳಿ ಈ ರೀತಿ ಮಾಡಿದರೆ ಕಂಬಿ ಎಣಿಸಬೇಕಾಗುತ್ತದೆ. ಜಂಗಮಕೋಟೆಯಲ್ಲಿ ಫಲವತ್ತಾದ ಭೂಮಿ ಇದ್ದು, ಅಲ್ಲಿ ಕೈಗಾರಿಕೆ ಮಾಡಲು ಸಾಧ್ಯವಿಲ್ಲ. ಮಂಚೇನಹಳ್ಳಿಯಲ್ಲಿ 2 ಸಾವಿರ ಎಕರೆ ಭೂಮಿ ನಿಗದಿ ಮಾಡಿದ್ದು, ಅಲ್ಲಿ ಕೈಗಾರಿಕೆ ಮಾಡುತ್ತಿಲ್ಲ. ಫಲವತ್ತಾದ ಭೂಮಿಯಲ್ಲಿ ಏಕೆ ಕೈಗಾರಿಕೆ ಮಾಡಬೇಕು? ಇದು ರೈತರ ಹೊಟ್ಟೆ ಮೇಲೆ ಹೊಡೆಯುವ ಕೆಲಸ. ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರು ಸತ್ಯ ಹರಿಶ್ಚಂದ್ರನಂತೆ ವರ್ತಿಸುತ್ತಿದ್ದಾರೆ. ಭೂ ಸ್ವಾಧೀನ ಎಂದರೆ ಹಣ ಮಾಡುವ ಹೊಸ ವಿಧಾನವಾಗಿದೆ ಎಂದು ದೂರಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications