ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಘಟನಾ ಸ್ಥಳಕ್ಕೆ ಸಚಿವ ಮುರುಗೇಶ್ ನಿರಾಣಿ ಭೇಟಿ, ಅಧಿಕಾರಿಗಳಿಗೆ ಖಡಕ್ ಅದೇಶ!

|
Google Oneindia Kannada News

ಚಿಕ್ಕಬಳ್ಳಾಪುರ, ಫೆ. 23: ಕಲ್ಲು ಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ಸ್ಪೋಟಕ ವಸ್ತುಗಳನ್ನು ಯಾರಾದರೂ ಸಂಗ್ರಹಿಸಿಟ್ಟಿದ್ದರೆ, ತಕ್ಷಣವೇ ಪತ್ತೆ ಹಚ್ಚಬೇಕೆಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮಂಗಳವಾರ ರಾತ್ರಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಿರೇನಾಗವಲ್ಲಿಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ನಾನಾ ಭಾಗಗಳಲ್ಲಿ ಕಲ್ಲುಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ಸ್ಟೋಟಕ ವಸ್ತುಗಳನ್ನು ಸಂಗ್ರಹಿಸಿರುವ ಬಗ್ಗೆ ಸಾರ್ವಜನಿಕರಿಂದ ನನಗೆ ದೂರುಗಳು ಬಂದಿವೆ ಎಂದರು.

ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನಚರಿಕೆ ಕ್ರಮಗಳನ್ನುತೆಗೆದುಕೊಳ್ಳಲಾಗುವುದು.ಇಲಾಖೆಯಿಂದ ಅನುಮತಿ ಪಡೆಯದೆ, ಸ್ಟೋಟಕ ವಸ್ತುಗಳನ್ನು ಬಳಸಿದರೆ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದೆಂದು ಸಚಿವ ನಿರಾಣಿ ಎಚ್ಚರಿಸಿದರು.

Murugesh Nirani issued directive to authorities to immediately detect explosives in mining areas

ಸ್ಟೋಟಕ ವಸ್ತುಗಳನ್ನು ಬಳಕೆ ಮಾಡಬೇಕಾದರೆ, ಸರಕಾರದಿಂದ ಲೈಸೆನ್ಸ್ ಪಡೆದಿರಬೇಕು.ಇನ್ನು ಮುಂದೆ ಇಂತಹ ಘಟನೆಗಳಿಗೆ ಕಾರಣರಾದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಸಾರಿಗೆ ಹಾಗೂ ಗೃಹ ಇಲಾಖೆಯ ಸಹಭಾಗಿತ್ವದಲ್ಲಿ ರಾಜ್ಯದ ಪ್ರತಿಯೊಂದು ಚಕ್ ಪೋಸ್ಟ್‌ಗಳಲ್ಲಿ ಬಿಗಿಯಾದ ತಪಾಸಣೆ ನಡೆಸಲಾಗುವುದು. ಹೊರರಾಜ್ಯಗಳಿಂದ ಬರುವ ಹಾಗೂ ಇಲ್ಲಿಂದ ಹೋಗುವ ವಾಹನಗಳ ಮೇಲೆ ನಿಗಾ ಇಡಲಾಗುವುದು. ಮುಂದಿನ ದಿನಗಳಲ್ಲಿ ಸ್ಟೋಟಕ ವಸ್ತುಗಳನ್ನು ಬಳಕೆಯನ್ನು ಅನುಮತಿ ಪಡೆದವರು ಮಾತ್ರ ಬಳಸಬೇಕೆಂಬ ಕಾನೂನು ಜಾರಿಮಾಡಲಿದ್ದೇವೆ. ಇದರಿಂದ ಇಂತಹ ಅನಾಹುತಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಸಚಿವ ನಿರಾಣಿ ಅವರು ಅಭಿಪ್ರಾಯಪಟ್ಟರು.

Murugesh Nirani issued directive to authorities to immediately detect explosives in mining areas

Recommended Video

Jaipur Literature Festival | Night of the Restless Spirits | Oneindia Kannada

ರಾಜ್ಯದಲ್ಲಿ ಪುನಃ ಪುನಃ ಇಂತಹ ಘಟನೆಗಳು ನಡೆಯುತ್ತಿರುವುದು ಅತ್ಯಂತ ದುರದೃಷ್ಟಕರ. ತಕ್ಷಣವೇ ಅಧಿಕಾರಿಗಳು ಎಚ್ಚೆತ್ತುಕೊಂಡು ಅನಾಹುತ ತಡೆಯದಿದ್ದರೆ, ಅಂತಹವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಸಚಿವ ನಿರಾಣಿ ಎಚ್ಚರಿಕೆ ಕೊಟ್ಟಿದ್ದಾರೆ. ಸ್ಟೋಟಕ ವಸ್ತುಗಳನ್ನು ಸಾಗಾಣಿಕೆ ಮಾಡುವ ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು ಎಂದು ಅಧಿಕಾರಿಗಳಿಗೆ ನಿರಾಣಿ ಸೂಚಿಸಿದ್ದಾರೆ.

English summary
Mines and Geology Minister Murugesh Nirani has issued a directive to the authorities to immediately detect explosives in the quarry and mining areas. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X