ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಬಳ್ಳಾಪುರ ಸ್ಫೋಟ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ನಿರಾಣಿ

|
Google Oneindia Kannada News

ಚಿಕ್ಕಬಳ್ಳಾಪುರ, ಫೆಬ್ರವರಿ.23: "ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೆನಾಗವಳ್ಳಿಯಲ್ಲಿ ನಡೆದ ಸಂಭವಿಸಿದ ಸ್ಫೋಟಕ್ಕೆ 5 ಜನರು ಸಾವನ್ನಪ್ಪಿರುವ ಸುದ್ದಿ ಕೇಳಿ ನನ್ನ ಮನಸ್ಸಿಗೆ ತೀವ್ರ ಆಘಾತವಾಯಿತು. ಅವರ ಆತ್ಮಕ್ಕೆ ಚಿರಶಾಂತಿ‌ ಸಿಗಲಿ. ಹಾಗೂ ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪಗಳು" ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಟ್ವೀಟ್ ಮಾಡಿದ್ದಾರೆ.

"ಶಿವಮೊಗ್ಗ ಸ್ಫೋಟದ ನಂತರ ಇಂತಹ ಘಟನೆ ನಡೆದಿರುವುದು ತುಂಬಾ ದುರದೃಷ್ಟಕರ. ಸರ್ಕಾರ ಸೂಕ್ತ ತನಿಖೆ ನಡೆಸಿ ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ. ಇದರಲ್ಲಿ ಯಾರೇ ಭಾಗಿಯಾದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಜರಿಗುಸುತ್ತೇವೆ. ಎಷ್ಟೇ ಪ್ರಭಾವಿಗಳಗಾಗಿದ್ದರೂ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ" ಎಂದು ಟ್ವಿಟರ್ ಮೂಲಕ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಫೋಟದಲ್ಲಿ ಐವರು ಸಾವು, ಓರ್ವನಿಗೆ ಗಾಯ ಚಿಕ್ಕಬಳ್ಳಾಪುರದ ಜಿಲೆಟಿನ್ ಸ್ಫೋಟದಲ್ಲಿ ಐವರು ಸಾವು, ಓರ್ವನಿಗೆ ಗಾಯ

ಚಿಕ್ಕಬಳ್ಳಾಪುರ ಜಿಲ್ಲೆ ಮಂಡಿಕಲ್ ಹೋಬಳಿಯ ಹಿರೇನಾಗವಲ್ಲಿ ಗ್ರಾಮದಲ್ಲಿ ಸಂಭವಿಸಿರುವ ಜಿಲೆಟಿನ್ ಸ್ಫೋಟದಿಂದಾಗಿ ಆರು ಮಂದಿ ಮೃತಪಟ್ಟಿದ್ದಾರೆ. ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟವರನ್ನು ಕ್ರಷರ್ ಇಂಜಿನಿಯರ್ ಉಮಾಕಾಂತ್, ಕಂಪ್ಯೂಟರ್ ಆಪರೇಟರ್ ಆರ್. ಗಂಗಾಧರ್, ವೇಯರ್ ಆಗಿರುವ ಮುರುಳಿ, ಅಭಿ, ವಾಚ್ ಮೆನ್ ಮಹೇಶ್ ಹಾಗೂ ಸ್ಥಳೀಯ ರಾಮು ಎಂದು ಗುರುತಿಸಲಾಗಿದೆ.

ಟಾಟಾ ಏಸ್ ಚಾಲಕ ರಿಯಾಜ್ ಬಚಾವ್

ಟಾಟಾ ಏಸ್ ಚಾಲಕ ರಿಯಾಜ್ ಬಚಾವ್

ಭ್ರಮರವಾಸಿನಿ ಕ್ರಷರ್ ನಿಂದ ಒಂದೂವರೆ ಕಿಲೋ ಮೀಟರ್ ದೂರದಲ್ಲಿರುವ ಅರಣ್ಯಕ್ಕೆ ಒಬ್ಬ ಬೈಕ್ ನಲ್ಲಿ ತೆರಳಿದರೆ ಅದನ್ನು ಹಿಂಬಾಲಿಸಿಕೊಂಡು ಐವರು ಟಾಟಾ ಏಸ್ ವಾಹನದಲ್ಲಿ ತೆರಳಿದ್ದರು. ಟಾಟಾ ಏಸ್ ಚಾಲಕ ರಿಯಾಜ್ ಒಬ್ಬರನ್ನು ಹೊರತುಪಡಿಸಿದ ಉಳಿದವರು ಅರಣ್ಯದೊಳಗೆ ಇಟ್ಟಿದ್ದ ಜಿಲೆಟಿನ್ ಹೊತ್ತು ತೆರಳಿದ್ದರು. ಈ ವೇಳೆ ಸಂಭವಿಸಿದ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದು, ಟಾಟಾ ಏಸ್ ವಾಹನದಲ್ಲಿ ಕುಳಿತಿದ್ದ ಚಾಲಕ ರಿಯಾಜ್ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ರಿಯಾಜ್ ಎಂಬುವವರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಫೋಟದ ಸ್ಥಳಕ್ಕೆ ಸಚಿವ ಡಾ. ಸುಧಾಕರ್ ಭೇಟಿ, ಪರಿಶೀಲನೆ

ಸ್ಫೋಟದ ಸ್ಥಳಕ್ಕೆ ಸಚಿವ ಡಾ. ಸುಧಾಕರ್ ಭೇಟಿ, ಪರಿಶೀಲನೆ

ಚಿಕ್ಕಬಳ್ಳಾಪುರದಲ್ಲಿ ಯಾವುದೇ ರೀತಿ ಅಕ್ರಮ ಗಣಿಗಾರಿಕೆ ನಡೆಯುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ. ಜಿಲೆಟಿನ್ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಬಳಿಕ ಅವರು ಮಾತನಾಡಿದ್ದಾರೆ. ಕಳೆದ ಕೆಲವೇ ಕೆಲವು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭ್ರಮರವಾನಿಸಿ ಕ್ರಷರ್ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ನಿಯಮ ಉಲ್ಲಂಘಿಸಿರುವುದು ಕಂಡು ಬಂದ ಹಿನ್ನೆಲೆ ಅದನ್ನು ಬಂದ್ ಮಾಡಿಸಲಾಗಿತ್ತು. ಅದಾಗಿಯೂ ಇಂಥದೊಂದು ಘಟನೆ ನಡೆಸಿರುವುದು ಬೇಸರ ತಂದಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಆರೋಪಿಗಳ ಬಂಧಿಸಲು ಪೊಲೀಸ್ ತಂಡ ರಚನೆ

ಆರೋಪಿಗಳ ಬಂಧಿಸಲು ಪೊಲೀಸ್ ತಂಡ ರಚನೆ

ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಮರವಾಸಿನಿ ಕ್ರಷರ್ ಮಾಲೀಕ ಹಾಗೂ ಸ್ಥಳೀಯ ಬಿಜೆಪಿ ಮುಖಂಡರೂ ಆಗಿರುವ ನಾಗರಾಜು, ಆಂಧ್ರ ಪ್ರದೇಶ ಮೂಲದ ಶಿವಾರೆಡ್ಡಿ ಹಾಗೂ ರಾಘವೇಂದ್ರ ರೆಡ್ಡಿ ಎಂದು ತಿಳಿದು ಬಂದಿದೆ. ಭ್ರಮರವಾಸಿನಿ ಕ್ರಷರ್ ಕಂಪನಿಯ ಮೂವರು ಮಾಲೀಕರ ಬಂಧನಕ್ಕೆ ಸಂಬಂಧಿಸಿದಂತೆ ತಂಡ ರಚಿಸಲಾಗಿದ್ದು, ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುತ್ತದೆ ಎಂದು ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

Recommended Video

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ | Oneindia Kannada
ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ತರುವ ಯತ್ನ

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ತರುವ ಯತ್ನ

ಭ್ರಮರವಾಸಿನಿ ಕ್ರಷರ್ ನಿಂದ ಒಂದೂವರೆ ಕಿಲೋ ಮೀಟರ್ ದೂರದಲ್ಲಿ ಇರುವ ಅರಣ್ಯದಲ್ಲಿ ಅಕ್ರಮವಾಗಿ ಅಡಗಿಸಿಟ್ಟಿದ್ದ ಜಿಲೆಟಿನ್ ಮತ್ತು ಎಲೆಕ್ಟ್ರಿಕ್ ಡಿಟೋನೇಟರ್ಸ್ ಅನ್ನು ಹೊತ್ತು ತರಲು ಒಬ್ಬರು ಬೈಕ್ ನಲ್ಲಿ ಮುಂದೆ ಸಾಗಿದರೆ ನಾಲ್ವರು ಟಾಟಾ ಏಸ್ ನಲ್ಲಿ ತೆರಳಿದ್ದರು. ಈ ವೇಳೆ ಮೊಬೈಲ್ ಆನ್ ಮಾಡಿರುವ ಸಂದರ್ಭದಲ್ಲಿ ಜಿಲೆಟಿನ್ ಸ್ಫೋಟ ಸಂಭವಿಸಿರುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.

English summary
Murugesh Nirani Minister Of Mines And Geology Reaction To Dynamite Blast In Chikkaballapur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X