ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಂದಿಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ

|
Google Oneindia Kannada News

ಚಿಕ್ಕಬಳ್ಳಾಪುರ, ಫೆಬ್ರವರಿ 25: ಚಿಕ್ಕಬಳ್ಳಾಪುರದ ಜನಪ್ರಿಯ ನಂದಿ ಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಂದಿಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಂದಿಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶ ಆಕರ್ಷಕವಾಗಿದೆ. ಇದಕ್ಕೆ ಐತಿಹಾಸಿಕ, ಧಾರ್ಮಿಕ ಪ್ರಾಮುಖ್ಯವಿದ್ದು, ವಿಶೇಷವಾದ ಸಸ್ಯಸಂಪತ್ತು ಇದೆ. ಇವೆಲ್ಲವನ್ನೂ ಗಮನಿಸಿ ಪ್ರವಾಸೋದ್ಯಮ ಕ್ಷೇತ್ರವಾಗಿಸಬಹುದು. ಇದಕ್ಕಾಗಿ ನಮ್ಮ ಸರ್ಕಾರ ಈಗಾಗಲೇ 10 ಕೋಟಿ ರೂ. ಅನುದಾನ ನೀಡಿದೆ ಎಂದು ಮಾಹಿತಿ ನೀಡಿದರು.

ನನಸಾಗುವತ್ತ ಶಂಕರನಾಗ್ ಕನಸು, ನಂದಿ ಬೆಟ್ಟಕ್ಕೆ ರೋಪ್ ವೇ!ನನಸಾಗುವತ್ತ ಶಂಕರನಾಗ್ ಕನಸು, ನಂದಿ ಬೆಟ್ಟಕ್ಕೆ ರೋಪ್ ವೇ!

ಕಳೆದ 15 ವರ್ಷಗಳಿಂದ ರೋಪ್ ವೇ ಬೇಕು ಎಂದು ಜನರು ಬೇಡಿಕೆ ಇಡುತ್ತಿದ್ದಾರೆ. ಅಂತಾರಾಷ್ಟ್ರೀಯ ಕಂಪನಿಯೊಂದು ಇದನ್ನು ಮಾಡಲು ಮುಂದಾಗಿ ನಂತರ ಕಾರಣಾಂತರದಿಂದ ಯೋಜನೆ ಕೈ ಬಿಟ್ಟಿತ್ತು. ಈಗ ಆ ಕನಸು ನನಸಾಗಲಿದೆ. ಇಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು 10 ಎಕರೆಗೂ ಹೆಚ್ಚು ಜಾಗವನ್ನು ಪಡೆಯಲು ಪ್ರಯತ್ನಿಸಲಾಗಿದೆ. ಈ ರೀತಿ ಮಾಸ್ಟರ್ ಪ್ಲಾನ್ ಮಾಡಿ ಅನುಷ್ಠಾನಗೊಳಿಸಲಾಗುವುದು. ಮೂರ್ನಾಲ್ಕು ತಿಂಗಳಲ್ಲಿ ಕಾಮಗಾರಿ ಮುಗಿಯಬಹುದು ಎಂದರು.

ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮ

ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮ

ತಕ್ಷಣದಲ್ಲಿ ಟೆಂಡರ್ ಆಗಿ ಎಲ್ಲ ಬಗೆಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ನಂದಿಬೆಟ್ಟವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ರೂಪುಗೊಳಿಸಬೇಕಿದೆ. ಈ ತಾಣವು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 30 ಕಿ.ಮೀ. ದೂರದಲ್ಲಿದೆ. ಬೆಂಗಳೂರು ನಗರದಿಂದ ಒಂದು ಗಂಟೆಯಲ್ಲಿ ಬರಬಹುದು. ಈ ಪ್ರದೇಶವನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಎಲ್ಲ ಸಹಕಾರ ನೀಡಲಾಗುವುದು ಎಂದು ಉತ್ತೇಜಿಸಿದ್ದಾರೆ ಎಂದರು.

5 ಬೆಟ್ಟಗಳಿಗೆ ಚಾರಣ ದಾರಿಗಳು

5 ಬೆಟ್ಟಗಳಿಗೆ ಚಾರಣ ದಾರಿಗಳು

ಇದರ ಜೊತೆಗೆ ಎಕೋ-ಟೂರಿಸಂ, ಸುತ್ತಮುತ್ತಲಿನ 5 ಬೆಟ್ಟಗಳಿಗೆ ಚಾರಣ ದಾರಿಗಳು, ಪುರಾತತ್ವ ಸ್ಮಾರಕಗಳು, ನೆಲ್ಲಿಕಾಯಿ ಬಸವಣ್ಣ ಮತ್ತು ಮಂಟಪಗಳು ಸಂರಕ್ಷಣೆ, ಸುಂದರೀಕರಣ ಸೇರಿದಂತೆ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಮುಖ್ಯಮಂತ್ರಿಗಳು ಮಂಡಿಸಲಿರುವ ಆಯವ್ಯಯದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಿದ್ದಾರೆ. ರಾಜ್ಯದಲ್ಲಿ ವಿಶಿಷ್ಟವಾದ ಪ್ರವಾಸಿ ತಾಣಗಳಿವೆ ಎಂದರು.

ಶಂಕರ್ ನಾಗ್ ಕನಸು ಕಂಡಿದ್ದು ನಮಗಾಗಿ

ನಂದಿಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ

ನಂದಿಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ

ನಂದಿಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಸಂಪೂರ್ಣ ನಿಷೇಧಿಸಲು ತೀರ್ಮಾನಿಸಲಾಗಿದೆ. ಯಾವುದೇ ರೀತಿಯ ಪ್ಲಾಸ್ಟಿಕ್ ಒಳಗೆ ತೆಗೆದುಕೊಂಡು ಹೋಗಲು ಅವಕಾಶ ನೀಡದಿರಲು ನಿರ್ಧರಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಪ್ರಕೃತಿಗೆ ಸಮಸ್ಯೆ ಆಗದ ರೀತಿಯಲ್ಲಿ ಪರಿಸರ, ಕಾಡು ಪ್ರಾಣಿಗಳು ಸೇರಿದಂತೆ ಪ್ರಕೃತಿ ರಕ್ಷಣೆ ಜತೆಗೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದರು.

ಕುದುವತಿ ಗ್ರಾಮದಿಂದ ಯೋಗನಂದೀಶ್ವರ ದೇವಸ್ಥಾನದವರೆಗೆ

ಕುದುವತಿ ಗ್ರಾಮದಿಂದ ಯೋಗನಂದೀಶ್ವರ ದೇವಸ್ಥಾನದವರೆಗೆ

ನಂದಿಬೆಟ್ಟದ ಕೆಳಭಾಗದಲ್ಲಿರುವ ಕುದುವತಿ ಗ್ರಾಮದಿಂದ ಯೋಗನಂದೀಶ್ವರ ದೇವಸ್ಥಾನದವರೆಗೆ 1.6 ಕಿಲೋಮೀಟರ್ ದೂರಕ್ಕೆ ರೋಪ್ ವೇ ನಿರ್ಮಾಣವಾಗಲಿದೆ. ಟಿಪ್ಪು ಡ್ರಾಪ್ ನಿಂದ ದೇವಸ್ಥಾನವು ಕೆಲವೇ ಮೀಟರ್ ನಷ್ಟು ದೂರವಿದೆ. ಅಂದಹಾಗೆ, ಈ ರೋಪ್ ವೇ ನಿರ್ಮಾಣಕ್ಕೆ ಅಂದಾಜು ಮೂವತ್ತು ಕೋಟಿ ರುಪಾಯಿ ಖರ್ಚಾಗಬಹುದು

ನಂದಿಬೆಟ್ಟದಲ್ಲಿ ರಸ್ತೆ ಒಂದು ಬಿಟ್ಟು, ಉಳಿದ ಅಭಿವೃದ್ಧಿಯೇ ಶೂನ್ಯನಂದಿಬೆಟ್ಟದಲ್ಲಿ ರಸ್ತೆ ಒಂದು ಬಿಟ್ಟು, ಉಳಿದ ಅಭಿವೃದ್ಧಿಯೇ ಶೂನ್ಯ

ಕಾರಹಳ್ಳಿ ಕ್ರಾಸ್ ನಿಂದ ಕೇವಲ 500 ಮೀಟರ್ ದೂರದಲ್ಲಿದೆ ಕುದುವತಿ ಗ್ರಾಮ. ಪ್ರವಾಸಿಗರು ಇಲ್ಲಿಗೆ ತಲುಪಲು ಸಹ ಅನುಕೂಲವಿದೆ. ವಾಹನ ನಿಲುಗಡೆ ವ್ಯವಸ್ಥೆ, ಬುಕಿಂಗ್ ಕೌಂಟರ್ ಇತರ ಅನುಕೂಲಗಳನ್ನು ಗ್ರಾಮದಲ್ಲಿ ಮಾಡಲಾಗುತ್ತದೆ

Recommended Video

ಮತ್ತೆ ಜನಸಾಮಾನ್ಯರಿಗೆ ಅನಿಲಾಘಾತ- ಅಡುಗೆ ಅನಿಲ ದರ 25 ರೂಪಾಯಿ ಹೆಚ್ಚಳ..! | Oneindia Kannada
ನಟ ಶಂಕರ್ ನಾಗ್ ಕನಸು

ನಟ ಶಂಕರ್ ನಾಗ್ ಕನಸು

ನಟ ಶಂಕರ್ ನಾಗ್ ಕನಸು ನಂದಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣದ ಕನಸು ಮೊದಲಿಗೆ ಕಂಡವರು ನಟ ಶಂಕರ್ ನಾಗ್. 1980ರ ದಶಕದಲ್ಲೇ ಸರಕಾರದ ಜತೆಗೆ ಮಾತುಕತೆ ನಡೆಸಿ, ತಮ್ಮ ಕನಸನ್ನು ಹಂಚಿಕೊಂಡಿದ್ದರು. ಶಂಕರ್ ಪತ್ನಿ ಅರುಂಧತಿ ಅವರು ಈ ಯೋಜನೆಯ ನಕ್ಷೆ ಕೂಡ ರೂಪಿಸಿದ್ದರು. ಬೆಟ್ಟದ ಮೇಲೊಂದು ಅಮ್ಯೂಸ್ ಮೆಂಟ್ ಪಾರ್ಕ್ ಆರಂಭಿಸುವ ಯೋಜನೆ ಹಾಕಿಕೊಂಡಿದ್ದರು. 1990ರ ಸೆಪ್ಟೆಂಬರ್ ನಲ್ಲಿ ಶಂಕರ್ ನಾಗ್ ಮೃತಪಟ್ಟ ನಂತರ ರೋಪ್ ವೇ ಯೋಜನೆ ತೆರೆಮರೆಗೆ ಸರಿದಿತ್ತು. 2004ರಲ್ಲಿ ತೋಟಗಾರಿಕೆ ಇಲಾಖೆ ಮತ್ತೆ ಈ ಯೋಜನೆಗೆ ಸಂಬಂಧಿಸಿದ ಹಾಗೆ ಸರ್ವೇ ಕಾರ್ಯ ನಡೆಸಿತು. ಆದರೆ ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಯೋಜನೆ ಮತ್ತೆ ನನೆಗುದಿಗೆ ಬಿದ್ದಿತು. ಆ ನಂತರ ಯೋಜನೆಯನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸಲಾಯಿತು.

ನಂದಿ ಬೆಟ್ಟದ ತಪ್ಪಲ್ಲಿನಲ್ಲಿರುವ ಭೋಗ ನಂದೀಶ್ವರ ದೇವಸ್ಥಾನನಂದಿ ಬೆಟ್ಟದ ತಪ್ಪಲ್ಲಿನಲ್ಲಿರುವ ಭೋಗ ನಂದೀಶ್ವರ ದೇವಸ್ಥಾನ

English summary
The department of tourism and Chikkaballapur district administration working towards developing ropeway, Cable Car at Nandi Hills soon it will be on the on the international tourism map said Minister Dr Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X