ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಂದಿ ಗಿರಿಧಾಮದಲ್ಲಿ ಪ್ರವಾಸಿಗರಿಗೆ ತಡೆ, ಪ್ರತಿಭಟನೆ

|
Google Oneindia Kannada News

ಚಿಕ್ಕಬಳ್ಳಾಪುರ, ಮಾರ್ಚ್ 21: ಬೆಂಗಳೂರು ನಗರದ ಸಮೀಪದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮದಲ್ಲಿ ಪ್ರವಾಸಿಗರಿಗೆ ತಡೆ ಹಾಕಲಾಗಿದೆ. ಅಧಿಕಾರಿಗಳ ಕಾರ್ಯ ವೈಖರಿ ಖಂಡಿಸಿ ಪ್ರವಾಸಿಗರು ಪ್ರತಿಭಟನೆ ನಡೆಸಿದರು.

ಭಾನವಾರ ನಂದಿ ಗಿರಿಧಾಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ಆದರೆ ಅವರ ಭೇಟಿಗೆ ಅವಕಾಶ ನೀಡದೆ ಅಧಿಕಾರಿಗಳು ವಾಪಸ್ ಕಳಿಸಿದರು. ಇದರಿಂದಾಗಿ ಅಧಿಕಾರಿಗಳ ವಿರುದ್ಧ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ದಸರಾ ಮಾದರಿಯಲ್ಲೇ ನಂದಿ ಗಿರಿಧಾಮದಲ್ಲಿ ಶಿವೋತ್ಸವ ಮೈಸೂರು ದಸರಾ ಮಾದರಿಯಲ್ಲೇ ನಂದಿ ಗಿರಿಧಾಮದಲ್ಲಿ ಶಿವೋತ್ಸವ

ಕರ್ನಾಟಕದಲ್ಲಿ ಕೋವಿಡ್ ಮಾರ್ಗಸೂಚಿಗಳ ಅನ್ವಯ ನಿರ್ಬಂಧವನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ. ಆದರೆ ಹೆಚ್ಚು ಜನ ಸಂದಣಿ ಸೇರಿದ್ದರಿಂದ ಅಧಿಕಾರಿಗಳು ನಂದಿ ಗಿರಿಧಾಮದ ಮೇಲೆ ಪ್ರವಾಸಿಗರನ್ನು ತಡೆದಿದ್ದಾರೆ.

ನಂದಿ ಬೆಟ್ಟದಲ್ಲಿ ಸಿಲುಕಿದ್ದ ಯುವಕ, ಹೆಲಿಕಾಪ್ಟರ್ ಮೂಲಕ ರಕ್ಷಣೆ ನಂದಿ ಬೆಟ್ಟದಲ್ಲಿ ಸಿಲುಕಿದ್ದ ಯುವಕ, ಹೆಲಿಕಾಪ್ಟರ್ ಮೂಲಕ ರಕ್ಷಣೆ

Nandi Hills Visitors Entry Banned Protest By Tourists

ವಾರಾಂತ್ಯದ ಎರಡು ದಿನ ನಂದಿ ಗಿರಿಧಾಮನದಲ್ಲಿ ಕೊಠಡಿಗಳನ್ನು ಕಾಯ್ದಿರಿಸಿದವರಿಗೆ ಮಾತ್ರ ಪ್ರವೇಶ ನೀಡಲಾಗಿದೆ. ಸಾಮಾನ್ಯ ಪ್ರವಾಸಿಗರನ್ನು ಅಧಿಕಾರಿಗಳು ವಾಪಸ್ ಕಳಿಸಿದ್ದಾರೆ. ಇದು ಪ್ರವಾಸಿಗರ ಆಕ್ರೋಶಕ್ಕೆ ಕಾರಣವಾಯಿತು.

 ವಿಶ್ವವಿಖ್ಯಾತ ನಂದಿ ಬೆಟ್ಟದಲ್ಲಿ ರೋಪ್‌ವೇ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅಸ್ತು ವಿಶ್ವವಿಖ್ಯಾತ ನಂದಿ ಬೆಟ್ಟದಲ್ಲಿ ರೋಪ್‌ವೇ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಅಸ್ತು

ನಂದಿ ಗಿರಿಧಾಮಕ್ಕೆ ವಾರಾಂತ್ಯದಲ್ಲಿ ಸುಮಾರು 10 ರಿಂದ 15 ಸಾವಿರ ಪ್ರವಾಸಿಗರು ಭೇಟಿ ನೀಡುತ್ತಾರೆ. ಗಿರಿಧಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿರುತ್ತದೆ. ಭಾನುವಾರ ಪ್ರವೇಶ ದ್ವಾರದಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ ಕಾವಲು ನಿಂತಿದ್ದರು. ಪ್ರವಾಸಿಗರು ಪೊಲೀಸರ ಜೊತೆ ಮಾತಿನ ಚಕಮಕಿ ನಡೆಸಿದರು.

ಬೇಸಿಗೆ ಸಂದರ್ಭದಲ್ಲಿ ನಂದಿ ಗಿರಿಧಾಮಕ್ಕೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಿದೆ. ಆದರೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಪ್ರವಾಸಿಗರ ಪ್ರವೇಶಕ್ಕೆ ಮಿತಿ ಹೇರಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರಿನ ಗೌತಮ್ ಮಿಶ್ರಾ ಭಾನುವಾರ ಕುಟುಂಬ ಸಮೇತ ನಂದಿ ಗಿರಿಧಾಮಕ್ಕೆ ಹೋಗಿದ್ದರು. ಆದರೆ ಗೇಟ್‌ನಲ್ಲಿಯೇ ಪೊಲೀಸರು ತಡೆದರು. ಗೇಟ್‌ನಲ್ಲಿ ತಡೆಯಲಾದ ಇನ್ನು ಹಲವು ಪ್ರವಾಸಿಗರು ದಿಢೀರ್ ಪ್ರತಿಭಟನೆ ನಡೆಸಿದರು. ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಮುಂಜಾನೆ 4.30ರಿಂದ ಬಂದ ಸುಮಾರು 1000 ಪ್ರವಾಸಿಗರನ್ನು ಗೇಟ್ ಬಳಿಯೇ ಪೊಲೀಸರು ತಡೆದಿದ್ದಾರೆ ಎಂದು ಪ್ರವಾಸಿಗರು ಹೇಳಿದ್ದಾರೆ. ಅವರೆಲ್ಲರೂ ಅಧಿಕಾರಿಗಳ ವಿರುದ್ಧ ದಿಢೀರ್ ಪ್ರತಿಭಟನೆ ನಡೆಸಿದರು.

ಆನ್‌ಲೈನ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಇದ್ದು 2,500 ಟಿಕೆಟ್ ಮಾರಾಟ ಮಾಡಲಾಗುತ್ತಿದೆ. ಬುಕ್ಕಿಂಗ್ ಪೂರ್ಣಗೊಂಡರೂ ಸಹ ಯಾವುದೇ ಮಾಹಿತಿಯನ್ನು ನೀಡುವುದಿಲ್ಲ. ಅಧಿಕಾರಿಗಳು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಪ್ರವಾಸಿಗರು ದೂರಿದರು.

Recommended Video

ಕಡೆಗೂ Naveen ಮೃತದೇಹ ತವರಿಗೆ ತಂದ ಭಾರತೀಯ ಸರ್ಕಾರ | Oneindia Kannada

2021ರ ಆಗಸ್ಟ್‌ನಲ್ಲಿ ನಂದಿ ಗಿರಿಧಾಮದ ಮೇಲೆ ಹೋಗುವ ರಸ್ತೆ ಭಾರೀ ಮಳೆಯ ಕಾರಣ ಕುಸಿದಿತ್ತು. ಸುಮಾರು ನಾಲ್ಕು ತಿಂಗಳ ಬಳಿಕ ಮತ್ತೆ ಪ್ರವಾಸಿಗರ ಭೇಟಿಗೆ ಅವಕಾಶ ನೀಡಲಾಗಿತ್ತು. ಆದರೆ ಈಗ ಪ್ರವಾಸಿಗರ ಸಂಖ್ಯೆಗೆ ನಿರ್ಬಂಧ ಹೇರಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.

English summary
Authorities banned the entry of visitors to Nandi hills to stop overcrowding and reduce pollution on weekends. Tourists protest against the authorities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X