ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ರಾಜ್ಯದಲ್ಲಿ ಹೊಸ ಕೊರೊನಾ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆ

|
Google Oneindia Kannada News

ಚಿಕ್ಕಬಳ್ಳಾಪುರ, ಮಾರ್ಚ್ 21: ಕರ್ನಾಟಕ ರಾಜ್ಯದಲ್ಲಿ ಮತ್ತೊಂದು ಕೊರೊನಾ ಕೇಸ್ ದೃಢಪಟ್ಟಿದೆ. ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ, ಮೆಕ್ಕಾ ಪ್ರವಾಸದಿಂದ ಹಿಂತಿರುಗಿದ್ದ 32 ವರ್ಷದ ವ್ಯಕ್ತಿಯೊಬ್ಬರಿಗೆ #Covid19 ಸೋಂಕು ದೃಡಪಟ್ಟಿದೆ.

Recommended Video

Corona inspection done by a tumkur officer goes viral | Tumkur | Checking

ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16ಕ್ಕೆ ಏರಿದೆ. ಈ ಮಾಹಿತಿಯನ್ನು ಖುದ್ದು ಆರೋಗ್ಯ ಸಚಿವ ಶ್ರೀರಾಮುಲು ನೀಡಿದ್ದು, ಟ್ವಿಟ್ಟರ್ ಮೂಲಕ ಖಚಿತಪಡಿಸಿದ್ದಾರೆ.ಈಗಾಗಲೇ ಆ ವ್ಯಕ್ತಿಯನ್ನು ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ನಾಗರಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ ಎಂದು ಆರೋಗ್ಯ ಸಚಿವರು ವಿನಂತಿಸಿಕೊಂಡಿದ್ದಾರೆ.

New Corona Case Find In Karnataka


ಇದೀಗ, ಜಿಲ್ಲಾವಾರು ಸೋಂಕಿತರು ಸಂಖ್ಯೆ ಬೆಂಗಳೂರು 11, ಕಲಬುರಗಿ 3 (ಒಂದು ಸಾವು ಸೇರಿ) ಮಡಿಕೇರಿ 1, ಚಿಕ್ಕಬಳ್ಳಾಪುರ 1 ಆಗಿದೆ. ಜಿಲ್ಲೆಯ ಗೌರಿಬಿದನೂರಿನಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ವೈರಸ್ ಹರಡದಂತೆ ಮುಂಜಾಗ್ರತೆ ಕ್ರಮವಾಗಿ ನಿಷೇದಾಜ್ಞೆ ಆದೇಶ ಮಾಡಲಾಗಿದೆ ಎಂದು ಗೌರಿಬಿದನೂರು ತಾಲ್ಲೂಕು ತಹಸೀಲ್ದಾರ್ ಎಂ ರಾಜಣ್ಣ ಮಾಹಿತಿ ನೀಡಿದ್ದಾರೆ.

ಗೌರಿಬಿದನೂರಿನ 31 ವರ್ಷದ ವ್ಯಕ್ತಿ ಒಂದು ವಾರದ ಹಿಂದೆ ಮೆಕ್ಕಾ ಪ್ರವಾಸ ಮುಗಿಸಿ ವಾಪಸ್ ಬಂದಿದ್ದರು. ಕಳೆದ ಭಾನುವಾರ ತೀವ್ರ ಜ್ವರ ಕಾಣಿಸಿಕೊಂಡ ವೇಳೆ ನಗರದ ಕ್ಲೀನಿಕ್‌ನಲ್ಲಿ ಚಿಕಿತ್ಸೆ ಪಡೆದುಕೊಂಡರು.

ಆದರೆ, ಚೇತರಿಕೆ ಕಾಣದ ಹಿನ್ನೆಲೆ ಬೆಂಗಳೂರಿನ ಬಿಜಿಎಸ್‌ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ರಕ್ತದ ಪರೀಕ್ಷೆಯಲ್ಲಿ ಕೊರೊನಾ ಸೋಂಕು ಪಾಸಿಟಿವ್ ಬಂದಿದೆ. ನಂತರ ಅವರನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ರವಾನಿಸಿ ಐಸೋಲೇಶನ್ ವಾರ್ಡ್‌ನಲ್ಲಿರಿಸಿ ನಿವಾವಹಿಸಲಾಗಿದೆ.ಆತನ ಜೊತೆ ಸಂಪರ್ಕದಲ್ಲಿದ್ದ ತಂದೆ, ತಾಯಿ ಮತ್ತು ಇಬ್ಬರು ಸಂಬಂಧಿರನ್ನು ಪ್ರತ್ಯೇಕವಾಗಿರಿಸಿ ಅವರ ಮೇಲೆಯೂ ನಿಗಾ ವಹಿಸಲಾಗಿದೆ.

ಇನ್ನು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ, ಸರ್ಕಾರಿ ಕಛೇರಿಗಳು ಹಾಗೂ ಮುಖ್ಯ ಸ್ಥಳಗಳಲ್ಲಿ ಥರ್ಮಲ್ ಟೆಸ್ಟ್ ಸಿಸಿ ಕ್ಯಾಮೆರಾಗಳ ಅಳವಡಿಕೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

English summary
Karnataka Update: New covid 19 cases found in gauribidanur. 35 year old person reported positive of covid19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X