ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಭೀತಿ: ಒಂದು ವಾರ ನಂದಿ ಬೆಟ್ಟಕ್ಕೆ ಪ್ರವೇಶವಿಲ್ಲ

|
Google Oneindia Kannada News

ಬೆಂಗಳೂರು, ಮಾರ್ಚ್ 14: ಇಂದಿನಿಂದ ಒಂದು ವಾರಗಳ ಕಾಲ ನಂದಿಬೆಟ್ಟಕ್ಕೆ ನಿರ್ಬಂಧ ಹೇರಲಾಗಿದೆ ಎಂದು ವಿಶೇಷಾಧಿಕಾರಿ ತಿಳಿಸಿದ್ದಾರೆ.

ದೇಶದಲ್ಲಿ ಕೊರೊನಾ ವೈರಸ್‌ಗೆ ಇದುವರೆಗೆ ಇಬ್ಬರು ಬಲಿಯಾಗಿದ್ದು, ಶಾಲಾ, ಕಾಲೇಜು, ಮಾಲ್, ಚಿತ್ರ ಮಂದಿರದ ಜೊತೆಗೆ ಪ್ರವಾಸಿ ತಾಣಗಳನ್ನು ಸುರಕ್ಷಿತವಾಗಿಡುವ ಅಗತ್ಯವಿದೆ. ಹೀಗಾಗಿ ಒಂದು ವಾರಗಳ ಕಾಲ ನಂದಿಬೆಟ್ಟ ಪ್ರವೇಶವನ್ನು ನಿಷೇಧಿಸಲಾಗಿದೆ.

ಕೊರೊನಾ ಭೀತಿಯಿಂದ ಎಚ್ಚೆತ್ತಿರುವ ಜಿಲ್ಲಾಡಳಿತ ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿದೆ. ಹೀಗಾಗಿ ನಂದಿಗಿರಿಧಾಮಕ್ಕೆ ಬರೋ ಪ್ರವಾಸಿಗರು ಒಂದು ವಾರ ನಂದಿಬೆಟ್ಟದ ಕಡೆ ಬಾರದೆ ಇರುವುದು ಒಳಿತು. ಸಾಮಾನ್ಯವಾಗಿ ಬೆಂಗಳೂರಿಗೆ ಕೂಗಳತೆ ದೂರದ ನಂದಿ ಬೆಟ್ಟಕ್ಕೆ ವಾರಾಂತ್ಯದಲ್ಲಿ ಬೆಂಗಳೂರಿಗರು ಅದರಲ್ಲೂ ಟೆಕ್ಕಿಗಳು ಜಾಸ್ತಿ ಆಗಮಿಸುತ್ತಾರೆ.

No Entry For Nandi Hills For A Week

ಇಂದು ಬೆಳಿಗ್ಗೆಯಿಂದಲೇ ಗೇಟ್ ಬಂದ್ ಮಾಡಲಾಗುವುದು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರನ್ನ ಸಹ ನಿಯೋಜಿಸಲಾಗಿದೆ. ಹೀಗಾಗಿ ನಂದಿಬೆಟ್ಟದತ್ತ ಪ್ರವಾಸಿಗರ ಬರಬಾರದು ಅಂತ ನಂದಿಗಿರಿಧಾಮ ವಿಶೇಷಾಧಿಕಾರಿ ಗೋಪಾಲ್ ಮನವಿ ಮಾಡಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಬಂದಿದ್ದ ಎಲ್ಲಾ ಪ್ರವಾಸಿಗರನ್ನ ವಾಪಸ್ ಕಳುಹಿಸಲಾಗಿದೆ.

ಇಂದಿನಿಂದ ಒಂದು ವಾರ ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶವನ್ನ ನಿರ್ಬಂಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಇಂದಿನಿಂದಲೇ ನಂದಿಗಿರಿಧಾಮದ ಬಾಗಿಲು ಸಂಪೂರ್ಣ ಬಂದ್ ಆಗಿದೆ.

ಅಂದಹಾಗೆ ವಿಕೇಂಡ್‍ನಲ್ಲಿ 6 ರಿಂದ 7 ಸಾವಿರ ಮಂದಿ ಪ್ರವಾಸಿಗರು ನಂದಿಗಿರಿಧಾಮಕ್ಕೆ ಭೇಟಿ ನೀಡುತ್ತಿದ್ದರು. ಶಾಲಾ ಕಾಲೇಜುಗಳಿಗೆ ರಜೆ ಇರುವ ಕಾರಣ ನಂದಿಗಿರಿಧಾಮಕ್ಕೆ ಬರುವವರ ಸಂಖ್ಯೆಯೂ ಹೆಚ್ಚಾಗುವ ಸಾಧ್ಯತೆ ಇತ್ತು.

English summary
Coronavirus Scare No entry For Nnadi hills for a week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X