ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವೃದ್ಧೆ ಮೃತಪಟ್ಟಿದ್ದ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್

Google Oneindia Kannada News

ಚಿಕ್ಕಬಳ್ಳಾಪುರ, ಏಪ್ರಿಲ್ 8: ಕೊರೊನಾದಿಂದ ಈಗಾಗಲೇ ಚಿಕ್ಕಬಳ್ಳಾಪುರದಲ್ಲಿ ಓರ್ವ ವೃದ್ಧೆ ಮೃತಪಟ್ಟಿದ್ದು ಅಲ್ಲೇ ಮತ್ತೊಂದು ಪ್ರಕರಣ ಪಾಸಿಟಿವ್ ಬಂದಿದೆ.

ಸೋಂಕಿತರ ಸಂಖ್ಯೆ 11ಕ್ಕೆ ಏರಿದೆ. ಅಂದಹಾಗೆ ಈಗಾಗಲೇ ಗೌರಿಬಿದನೂರು ನಗರದ 10 ಮಂದಿಗೆ ಸೋಂಕು ದೃಢವಾಗಿ ಓರ್ವ ವೃದ್ಧೆ ಮೃತಪಟ್ಟಿದ್ದರು.

ಕೊವಿಡ್ 19 ಪರೀಕ್ಷೆಯನ್ನು ಉಚಿತವಾಗಿ ನಡೆಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ ಕೊವಿಡ್ 19 ಪರೀಕ್ಷೆಯನ್ನು ಉಚಿತವಾಗಿ ನಡೆಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ತನ್ನ ಮನೆಗೆ ಬಂದು ತನ್ನ ತಾಯಿ ಜೊತೆ ವಾಸವಾಗಿದ್ದ ಯುವಕನ ಮನೆಗೆ ಈತನ ಅಕ್ಕ-ಭಾವ ಹಾಗೂ ಇಬ್ಬರು ಮಕ್ಕಳ ಸಹ ಬಂದು ಹೋಗಿದ್ದಾರೆ. ಮತ್ತೊಂದೆಡೆ ಈತ ತನ್ನ ಸ್ನೇಹಿತನ ಜೊತೆಗೂಡಿ ಆಂಧ್ರದ ಹಿಂದೂಪುರಕ್ಕೆ ನಾಲ್ಕೈದು ಬಾರಿ ಹೋಗಿ ಬಂದಿದ್ದಾನೆ. ದೆಹಲಿಯ ನಿಜಾಮುದ್ದೀನ್ ಪ್ರಕರಣ ಬಯಲಾದ ನಂತರ ಈತನನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಇಂದು ಈತನ ವರದಿ ಲಭ್ಯವಾಗಿದ್ದು ಪಾಸಿಟಿವ್ ಬಂದಿದೆ.

One More Corona Positive Case Found In Chikkaballapur

ಈಗ ದೆಹಲಿಯಿಂದ ವಾಪಸ್ ಆದ 23 ವರ್ಷದ ಯುವಕನಿಗೆ ಕೊರೊನಾ ಸೋಂಕು ತಗುಲಿದ್ದು ಸೋಂಕಿತರ ಸಂಖ್ಯೆ 11ಕ್ಕೆ ಏರಿದೆ. ಈ ಹೊಸ ಪ್ರಕರಣದಿಂದ ಗೌರಿಬಿದನೂರಿನಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ. ಮಾರ್ಚ್ 6 ರಂದು ದೆಹಲಿಯ ನಿಜಾಮುದ್ದೀನ್ ನಿಂದ ರೈಲಿನ ಮೂಲಕ ಗೌರಿಬಿದನೂರು ಗಡಿಭಾಗ ಆಂಧ್ರದ ಹಿಂದೂಪುರಕ್ಕೆ ಆಗಮಿಸಿ, ಅಲ್ಲಿಂದ ಬಸ್ ಮೂಲಕ ಗೌರಿಬಿದನೂರು ನಗರಕ್ಕೆ ಆಗಮಿಸಿದ್ದಾನೆ.

ಕೊರೊನಾ ಗೆದ್ದುಬಂದ ದಾವಣಗೆರೆ ಸಂಸದರ ಮಗಳು ವಿವರಿಸಿದ್ದು ಹೀಗೆ ಕೊರೊನಾ ಗೆದ್ದುಬಂದ ದಾವಣಗೆರೆ ಸಂಸದರ ಮಗಳು ವಿವರಿಸಿದ್ದು ಹೀಗೆ

ಹೀಗಾಗಿ ಯುವಕನ ತಾಯಿ, ಅಕ್ಕ-ಬಾವ ಹಾಗೂ ಅವರ ಇಬ್ಬರು ಮಕ್ಕಳು ಸೇರಿದಂತೆ ಸ್ನೇಹಿತ ಹಾಗೂ ಸ್ನೇಹಿತನ ತಾಯಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಈ ಯುವಕ ಸೇರಿದಂತೆ 8 ಮಂದಿ ದೆಹಲಿಯ ಜಮಾತ್ ಗೆ ಹೋಗಿ ಬಂದಿದ್ದು, ಇವರಲ್ಲಿ ಈತನಿಗೆ ಬಿಟ್ಟು ಬೇರೆ ಯಾರಿಗೂ ಸೋಂಕು ತಗುಲಿಲ್ಲ.

ಹೀಗಾಗಿ ಈತನಿಗೆ ದೆಹಲಿಯಲ್ಲೇ ಸೋಂಕು ತಗಲಿದೆಯಾ ಅಥವಾ ಹಿಂದೂಪುರದಲ್ಲಿ ಸಹ ಸಾಕಷ್ಟು ಪಾಸಿಟಿವ್ ಪ್ರಕರಣಗಳಿದ್ದು ಅಲ್ಲಿ ಏನಾದ್ರೂ ಸೋಂಕು ತಗುಲಿದೆಯಾ ಅನ್ನೋ ಅನುಮಾನ ಜಿಲ್ಲಾಡಳಿತಕ್ಕೆ ಮೂಡಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X