ಮಳೆಗಾಗಿ ಹಳೆಯ ಸಂಪ್ರದಾಯದ ಮೊರೆ ಹೋದ ಜನ: ಚಿಕ್ಕಬಳ್ಳಾಪುರದಲ್ಲಿ ಮಕ್ಕಳ ಮದುವೆ

ಚಿಕ್ಕಬಳ್ಳಾಪುರ, ಆಗಸ್ಟ್‌ 31: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈಗಾಗಲೇ ವಾಡಿಕೆ ಮಳೆಗಿಂತ ಕಡಿಮೆಯಾಗಿದೆ. ಮಳೆಗಾಗಿ ಎಲ್ಲೆಡೆ ಜನಸಾಮಾನ್ಯರು ವಿವಿಧ ಸಂಪ್ರದಾಯಗಳ ಮೊರೆಹೋಗಿದ್ದು, ಎಲ್ಲೆಡೆ ಮಳೆಗಾಗಿ ಮಕ್ಕಳ ಅಣಕು ಮದುವೆ ಮಾಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಗಳಕೊಪ್ಪೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಮಗಳಕೊಪ್ಪೆ ಗ್ರಾಮದಲ್ಲಿ ತಡರಾತ್ರಿ ನಡೆದ ಮಕ್ಕಳ ಅಣಕು ಮದುವೆಯು ಅಪ್ಪಟ ಸಂಪ್ರದಾಯ ಬದ್ದವಾಗಿ ನಡೆದಿದ್ದು, ನೋಡುಗರನ್ನು ನಿಬ್ಬೆರಗಾಗಿಸುವಂತೆ ನಡೆದಿದೆ. ಸದರಿ ಗ್ರಾಮದ ಇಬ್ಬರು ಬಾಲಕರಲ್ಲಿ ಒಬ್ಬ ಹುಡುಗನಿಗೆ ವಧು ವೇಷ ಹಾಕಿ ಮತ್ತೋರ್ವ ಹುಡುಗನಿಗೆ ವರನ ಪೋಷಾಕು ಹಾಕಿ ಶಾಸ್ತ್ರೋಕ್ತವಾಗಿ ಅರ್ಚಕರ ನೇತೃತ್ವದಲ್ಲಿ ಅಣಕು ಮದುವೆ ಮಾಡುವ ಮೂಲಕ ಮಳೆಗಾಗಿ ಗ್ರಾಮಸ್ಥರು ಮೊರೆಯಿಟ್ಟಿದ್ದಾರೆ.

People Turn To Old Tradition For Rain In Chikkaballapur

ಗ್ರಾಮದ ಮಧ್ಯಭಾಗದ ಬೀದಿಯಲ್ಲಿ ಮಹಿಳೆಯರೆಲ್ಲ ಕೂತು ಜಾನಪದ ಹಾಗೂ ಸೋಬಾನೆ ಗೀತೆ ಹಾಡಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಚಿಕ್ಕ ಬಾಲಕರು ಥೇಟ್ ವರ-ವಧುವಿನಂತೆ ಬಿಳಿ ವಸ್ತ್ರಗಳಲ್ಲಿ ಕಂಗೊಳಿಸಿದ್ದಾರೆ. ವರನ ಪೋಷಾಕುನಲ್ಲಿದ್ದ ಬಾಲಕ ವಧು ವೇಷದಲ್ಲಿದ್ದ ಮತ್ತೋರ್ವ ಬಾಲಕನಿಗೆ ಅರಿಶಿನ ಕೊಂಬು (ತಾಳಿ) ಕಟ್ಟುವ ಮೂಲಕ ಮದುವೆ ನೆರವೇರಿಸಲಾಗಿದೆ.

ಹಿಂದಿನ ಕಾಲದಿಂದ ನಡೆದು ಬಂದ ಸಂಪ್ರದಾಯದಂತೆ ಮಳೆ ಬಾರದ ಸಂದರ್ಭದಲ್ಲಿ ಈ ರೀತಿ ಊರಿನವರೆಲ್ಲ ಸೇರಿ ಮಕ್ಕಳಿಗೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದರೆ ಮಳೆ ಬರುತ್ತದೆ ಎನ್ನುವ ನಂಬಿಕೆ ಜನರದ್ದಾಗಿದೆ. ಹೀಗಾಗಿ ಮಕ್ಕಳ ಮದುವೆ ಮಾಡಿಸಲಾಗಿದೆ ಎಂದು ಗ್ರಾಮದ ಹಿರಿಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

People Turn To Old Tradition For Rain In Chikkaballapur

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಬಾರಿ ನೀರಿಕ್ಷಿಸಿದಷ್ಟು ಮಳೆ ಬಾರದೆ ಇದ್ದುದರಿಂದ ರಾಗಿ, ಮೆಕ್ಕೆಜೋಳ, ಅವರೆ, ತೊಗರಿ ಸೇರಿದಂತೆ ಮಳೆಯಾಶ್ರಿತ ಬೆಳೆಗಳೆಲ್ಲವೂ ಒಣಗಿ ಬಾಡಿ ಹೋಗುತ್ತಿವೆ. ಹೀಗಾಗಿ ಅನ್ನದಾತರು ಆಕಾಶ ದತ್ತ ಮುಖ ಮಾಡಿ ಮಳೆ ಯಾವಾಗ ಬರುತ್ತದೆ ಎಂದು ಕಾದು ನೋಡುವಂತಾಗಿದೆ. ಮಳೆಗಾಗಿ ಹಾತೊರೆಯುತ್ತಿರುವ ಜನರು ಹಳೆಯ ಸಂಪ್ರದಾಯಗಳ ಮೊರೆ ಹೋಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+