ಚಿಕ್ಕಬಳ್ಳಾಪುರ ಸ್ಫೋಟ: ಮೃತರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಚಿಕ್ಕಬಳ್ಳಾಪುರ, ಫೆಬ್ರವರಿ.23: ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೆನಾಗವಳ್ಳಿಯಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟದಿಂದ ಮೃತಪಟ್ಟವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಸಿದ್ದು, ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

Recommended Video

      ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ದುರಂತಕ್ಕೆ ಪ್ರಧಾನಿ ಮೋದಿ ಸಂತಾಪ | Oneindia Kannada

      ಚಿಕ್ಕಬಳ್ಳಾಪುರ ಜಿಲ್ಲೆ ಮಂಡಿಕಲ್ ಹೋಬಳಿಯ ಹಿರೇನಾಗವಲ್ಲಿ ಗ್ರಾಮದಲ್ಲಿ ಸಂಭವಿಸಿರುವ ಜಿಲೆಟಿನ್ ಸ್ಫೋಟದಿಂದಾಗಿ ಆರು ಮಂದಿ ಮೃತಪಟ್ಟಿದ್ದಾರೆ. ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟವರನ್ನು ಕ್ರಷರ್ ಇಂಜಿನಿಯರ್ ಉಮಾಕಾಂತ್, ಕಂಪ್ಯೂಟರ್ ಆಪರೇಟರ್ ಆರ್. ಗಂಗಾಧರ್, ವೇಯರ್ ಆಗಿರುವ ಮುರುಳಿ, ಅಭಿ, ವಾಚ್ ಮೆನ್ ಮಹೇಶ್ ಹಾಗೂ ಸ್ಥಳೀಯ ರಾಮು ಎಂದು ಗುರುತಿಸಲಾಗಿದೆ.

      ಭ್ರಮರವಾಸಿನಿ ಕ್ರಷರ್ ನಿಂದ ಒಂದೂವರೆ ಕಿಲೋ ಮೀಟರ್ ದೂರದಲ್ಲಿರುವ ಅರಣ್ಯಕ್ಕೆ ಒಬ್ಬ ಬೈಕ್ ನಲ್ಲಿ ತೆರಳಿದರೆ ಅದನ್ನು ಹಿಂಬಾಲಿಸಿಕೊಂಡು ಐವರು ಟಾಟಾ ಏಸ್ ವಾಹನದಲ್ಲಿ ತೆರಳಿದ್ದರು. ಟಾಟಾ ಏಸ್ ಚಾಲಕ ರಿಯಾಜ್ ಒಬ್ಬರನ್ನು ಹೊರತುಪಡಿಸಿದ ಉಳಿದವರು ಅರಣ್ಯದೊಳಗೆ ಇಟ್ಟಿದ್ದ ಜಿಲೆಟಿನ್ ಹೊತ್ತು ತೆರಳಿದ್ದರು. ಈ ವೇಳೆ ಸಂಭವಿಸಿದ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದು, ಟಾಟಾ ಏಸ್ ವಾಹನದಲ್ಲಿ ಕುಳಿತಿದ್ದ ಚಾಲಕ ರಿಯಾಜ್ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ರಿಯಾಜ್ ಎಂಬುವವರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

      PM Modi Reaction To Dynamite Blast In Chikkaballapur; Offer Condolences To The Bereaved Families


      ಅಕ್ರಮ ಗಣಿಗಾರಿಕೆ ನಡೆಯುತ್ತಿಲ್ಲ ಎಂದ ಸಚಿವರು:

      ಚಿಕ್ಕಬಳ್ಳಾಪುರದಲ್ಲಿ ಯಾವುದೇ ರೀತಿ ಅಕ್ರಮ ಗಣಿಗಾರಿಕೆ ನಡೆಯುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ. ಜಿಲೆಟಿನ್ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಬಳಿಕ ಅವರು ಮಾತನಾಡಿದ್ದಾರೆ. ಕಳೆದ ಕೆಲವೇ ಕೆಲವು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭ್ರಮರವಾನಿಸಿ ಕ್ರಷರ್ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ನಿಯಮ ಉಲ್ಲಂಘಿಸಿರುವುದು ಕಂಡು ಬಂದ ಹಿನ್ನೆಲೆ ಅದನ್ನು ಬಂದ್ ಮಾಡಿಸಲಾಗಿತ್ತು. ಅದಾಗಿಯೂ ಇಂಥದೊಂದು ಘಟನೆ ನಡೆಸಿರುವುದು ಬೇಸರ ತಂದಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+