ಚಿಕ್ಕಬಳ್ಳಾಪುರದಲ್ಲಿ ಕುಡಿಯುವ ನೀರಿಗೆ ವಿಷ ಬೆರೆಸಿದ ದುಷ್ಕರ್ಮಿಗಳು

ಬೆಂಗಳೂರು, ಮಾರ್ಚ್ 25: ಕುಡಿಯುವ ನೀರಿನ ಪೈಪ್‌ ಒಳಗೆ ವಿಷ ಬೆರೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಅದೃಷ್ಟ ವಶಾತ್ ನೀರು ವಾಸನೆ ಬರುತ್ತಿದ್ದ ಕಾರಣ ಅನುಮಾನ ಬಂದು ನೀರು ಕುಡಿಯದಿರುವ ಕಾರಣ 1100ಕ್ಕೂ ಹೆಚ್ಚು ಮಂದಿ ಪ್ರಾಣ ಉಳಿದಿದೆ. ಯಾದಗಿರಿ ಜಿಲ್ಲೆ ಸುರಪುರದಲ್ಲಿ ಕುಡಿಯುವ ನೀರು ಪೂರೈಕೆ ಪೈಪ್‌ಗೆ ಕ್ರಿಮಿನಾಶಕ ಬೆರೆಸಿ ವೃದ್ಧರೊಬ್ಬರು ಮೃತಪಟ್ಟು 20 ಮಂದಿ ಅಸ್ವಸ್ಥರಾಗಿದ್ದ ಘಟನೆ ಮಾಸುವ ಮುನ್ನವೇ ಇಂಥದ್ದೊಂದು ಘಟನೆ ನಡೆದಿದೆ.

ಸುಮಾರು 300 ಮನೆ, 1100 ಜನಸಂಖ್ಯೆ ಇರುವ ತಾಳಹಳ್ಳಿ ಗ್ರಾಮಕ್ಕೆ ಎಂದಿನಂತೆ ವಾಟರ್ ಮ್ಯಾನ್ ನೀರು ಬಿಟ್ಟಿದ್ದಾರೆ. ರಸ್ತೆಯ ಅಕ್ಕಪಕ್ಕ ಇರುವ ನಲ್ಲಿಯಲ್ಲಿ ಮಹಿಳಯರು ನೀರು ವಾಸನೆ ಬರುತ್ತಿರುವುದನ್ನು ಗಮನಿಸಿದ್ದಾರೆ.

poison mixed water luckily everyoe escaped from tragedy

ದ್ರಾಕ್ಷಿ ತೋಟಗಳಿಗೆ ಹಾಕುವ ಕೀಟ ನಾಶಕದ ವಾಸನೆ ಬಂದಿರುವುದರಿಂದ ಗ್ರಾಮಸ್ಥರು ಕೂಡಲೇ ವಾಟರ್‌ ಮ್ಯಾನ್‌ಗೆ ವಿಷಯ ತಿಳಿಸಿ ನೀರನ್ನು ನಿಲ್ಲಿಸಿದ್ದಾರೆ.

ನಂತರ ಗ್ರಾಮದಲ್ಲಿರುವ ಓವರ್ ಹೆಡ್ ಟ್ಯಾಂಕಿನಲ್ಲಿ ಶೇಖರಣೆಯಾಗಿದ್ದ ನೀರು ಪರಿಶೀಲನೆ ಮಾಡಿದ್ದಾರೆ. ಆದರೆ ಟ್ಯಾಂಕ್‌ನಲ್ಲಿರುವ ನೀರಿಗೆ ವಿಷ ಬೆರೆಸಿಲ್ಲ ಆದರೆ ಊರಿನ ಸಮೀಪವಿರುವ ಗೇಟ್‌ವಾಲ್ ಮುಚ್ಚುಳ ತೆಗೆದು ಅದರೊಳಗೆ ವಿಷ ಬೆರೆಸಿದ್ದಾರೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+