ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಪ್ರತ್ಯೇಕ ವೆಬ್ ಸೈಟ್ ಲಾಂಚ್ ಮಾಡಿದ ಶಾಸಕ ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರ, ಜುಲೈ 08: ಚಿಕ್ಕಬಳ್ಳಾಪುರದಾದ್ಯಂತ ಮನೆ ಮಾತಗಿರುವ ಶಾಸಕ ಪ್ರದೀಪ್ ಈಶ್ವರ್ ಅವರ ವಿನೂತನ ಕಾರ್ಯಕ್ರಮ 'ನಮಸ್ತೆ ಚಿಕ್ಕಬಳ್ಳಾಪುರʼ ಎಂಬ ಕಾರ್ಯಕ್ರಮದ ಮೂಲಕ ಕ್ಷೇತ್ರದ ಜನರ ಮನೆ ಬಾಗಿಲಿಗೆ ತೆರಳಿ ಸಮಸ್ಯೆಗಳಿಗೆ ಸ್ಪಂದಿಸುವ ವಿನೂತನ ಕಾರ್ಯಕ್ರಮ ಮಾಡಿ ಮಾದರಿಯಾಗಿದ್ದ ಶಾಸಕ ಪ್ರದೀಪ್ ಈಶ್ವರ್ ಈಗ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದು ನಾಡಿನ ಜನತೆ ಕುಳಿತಲ್ಲೆ ತಮ್ಮ ಕಷ್ಟಗಳನ್ನು ತಮ್ಮ ಶಾಸಕರೊಂದಿಗೆ ಹಂಚಿಕೊಳ್ಳುವ ಅವಕಾಶ ಕಲ್ಪಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾಗಿ ಗುರುತಿಸಿಕೊಂಡು ರಾಜ್ಯದ ಮತದಾರರ ಚಿತ್ತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಫಲಿತಾಂಶದ ಕಡೆ ನೆಟ್ಟುವಂತೆ ಮಾಡಿದ್ದ ಪ್ರದೀಪ್ ಈಶ್ವರ್ ಇಂದು ಹೊಸ ಹಾದಿಯಲ್ಲಿ ಮುನ್ನಡೆದಿದ್ದು ಚಿಕ್ಕಬಳ್ಳಾಪುರ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ʻwww.pradeepeshwarmla.comʼ ಎಂಬ ಹೊಸ ವೆಬ್‌ಸೈಟ್ ಆರಂಭಿಸಿದ್ದಾರೆ.

ಕ್ಷೇತ್ರದ ಜನ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ದೂರು ನೀಡಲು ನೇರವಾಗಿ ಶಾಸಕರ ಬಳಿ ತೆರಳಲು ಕೆಲವರಿಗೆ ಸಾಧ್ಯವಾಗುವುದಿಲ್ಲ, ಜೊತೆಗೆ ಸಮಯ ಮತ್ತು ಹಣ ವ್ಯಯ ಮಾಡಿಕೊಂಡು ಶಾಸಕರ ಮನೆಯ ಬಳಿ ಬರುವುದು ಬೇಡ, ಜನರು ತಮ್ಮ ಸಮಸ್ಯೆ ತಿಳಿಸಲಿಕ್ಕೂ ಸಹ ಹಣ ಖರ್ಚು ಮಾಡೋದು ಬೇಡ ಎಂಬ ಸದುದ್ದೇಶದಿಂದ ಈ ವೆಬ್ ಸೈಟ್ ಆರಂಭಿಸಿಲಾಗಿದೆ ಎಂದು ಪ್ರದೀಪ್ ಈಶ್ವರ್ ತಿಳಿಸಿದರು.
ಸಾರ್ವಜನಿಕರು ಅದರಲ್ಲೂ ಕ್ಷೇತ್ರದ ಸುಮಾರು 2 ಲಕ್ಷಕ್ಕೂ ಅಧಿಕ ಜನರನ್ನು ನೇರವಾಗಿ ಭೇಟಿ ಮಾಡಲೂ ಸಾಧ್ಯವಾಗುವುದಿಲ್ಲ. ಈ ದೃಷ್ಟಿಯಿಂದ ತಮ್ಮ ಮೊಬೈಲ್ ಮೂಲಕವೇ ತಮ್ಮ ಸಮಸ್ಯೆಗಳಿಗೆ ದೂರು ಹೇಳಿಕೊಳ್ಳಲು ವೆಬ್‌ಸೈಟ್‌ನಲ್ಲಿ ಬಲಗಡೆ ದೂರು/ಸಲಹೆಗಳು ಎಂಬ ವಿಭಾಗಗಳಿದ್ದು, ಅದರ ಮೇಲೆ ಕ್ಲಿಕ್ ಮಾಡಿದರೆ, ಕಂಪ್ಲೇಟ್ ಬಾಕ್ಸ್ ತೆರೆಯುತ್ತದೆ. ಜನ ಅಲ್ಲಿ ತಮ್ಮ ಅಭಿಪ್ರಾಯ/ದೂರು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ದೂರು ನೀಡುವ ಜನರ ಮೊಬೈಲ್ ನಂಬರ್‌ಗೆ ಕರೆ ಮಾಡಿ ಸ್ಪಂದಿಸಲು ಸಿಬ್ಬಂದಿಯನ್ನ ನೇಮಕ ಮಾಡಿ ಕಚೇರಿ ಸಹ ತೆರೆಯಲಾಗಿದೆ. ದಿನದ 24 ಗಂಟೆಗಳ ಕಾಲ ಸಿಬ್ಬಂದಿ ಜನರಿಗೆ ಸ್ಪಂದಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ನನ್ನ ಕ್ಷೇತ್ರದ ಜನ ಇಂದಿನಿಂದ ತಮ್ಮ ಸಮಯ ವ್ಯರ್ಥ ಮಾಡದೇ ಮೊಬೈಲ್ ಮೂಲಕವೇ ತಮ್ಮ ಮನೆಯಲ್ಲಿರುವ ಮಗ-ಮಗಳು ಯಾರಿಂದಾದರೂ ವೆಬ್‌ಸೈಟ್‌ನಲ್ಲಿ ಸಮಸ್ಯೆ ಹೇಳಿಕೊಳ್ಳಬಹುದು ಎಂದು ಮನವಿ ಮಾಡಿದ್ದಾರೆ. ತಾವು ಸಮಸ್ಯೆಯನ್ನು ತಮ್ಮ ಗಮನಕ್ಕೆ ತಂದನಂತರವೂ ಸಹ ಬಗೆಹರಿಯಲಾಗದ ಸಮಸ್ಯೆ ಆಗಿದ್ದಲ್ಲಿ, ಅದಕ್ಕೂ ಸಹ ಕಾರಣ ತಿಳಿಸಿ 24 ಗಂಟೆಯೊಳಗೆ ನಿಮ್ಮ ಜೊತೆ ಪ್ರತಿಕ್ರಿಯಿಸುವುದಾಗಿ ಶಾಸಕರು ತಿಳಿಸಿದ್ದಾರೆ.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು











Click it and Unblock the Notifications