Draupadi Murmu visit Chikkaballapur: ಚಿಕ್ಕಬಳ್ಳಾಪುರಕ್ಕಿಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ
ಚಿಕ್ಕಬಳ್ಳಾಪುರ ಜುಲೈ 3: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ( ಜುಲೈ 3) ಚಿಕ್ಕಮಗಳೂರಿಗೆ ಭೇಟಿ ನೀಡಲಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೆನಹಳ್ಳಿಯ ಸತ್ಯಸಾಯಿ ಗ್ರಾಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಲಿದ್ದು, ನಂದಿಗಿರಿಧಾಮ, ಸ್ಕಂದಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಭದ್ರತೆಯ ದೃಷ್ಟಿಯಿಂದ ನಂದಿಗಿರಿಧಾಮ ಮತ್ತು ಸ್ಕಂದಗಿರಿ ಬೆಟ್ಟಗಳಿಗೆ ಸಾರ್ವಜನಿಕ ಪ್ರವೇಶವನ್ನು ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ)ಕಲಂ 114(3)ರ ಅಡಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸಾರ್ವಜನಿಕರ ಬೇಟಿಯನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ದೆಹಲಿಯಿಂದ ಐಎಎಫ್‌ಎಂಐ-17 ವಿಶೇಷ ವಿಮಾನದ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು ಮಧ್ಯಾಹ್ನ 3.55ಕ್ಕೆ ಹೆಲಿಕಾಪ್ಟರ್ ಮೂಲಕ ಮುದ್ದೇನಹಳ್ಳಿಗೆ ತೆರಳುತ್ತಾರೆ.
ಸತ್ಯಸಾಯಿ ಯೂನಿವರ್ಸಿಟಿ ಫಾರ್ ಹ್ಯೂಮನ್ ಎಕ್ಸಲೆನ್ಸ್ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕ್ರೀಡೆ ಮತ್ತು ದೇಹದಾರ್ಢ್ಯತೆ ವಿಭಾಗದಲ್ಲಿ ಪುಲ್ಲೇಲ ಗೋಪಿಚಂದ್, ಆರೋಗ್ಯ ವಿಭಾಗದಲ್ಲಿ ಡಾ.ಪ್ರತಿಮಾ ಮೂರ್ತಿ, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಪ್ರೊ.ಅಜಯ್ ಕೆ.ಸೂದ್, ಶಿಕ್ಷಣ ವಿಭಾಗದಲ್ಲಿ ಪ್ರೊ.ವಿಜಯ್ ಶಂಕರ್ ಶುಕ್ಲಾ, ಸಂಗೀತ ಮತ್ತು ಕಲೆ ವಿಭಾಗದಲ್ಲಿ ಡಾ.ಆರ್.ಕೆ.ಪದ್ಮನಾಭ, ಸಮಾಜಸೇವೆ ವಿಭಾಗದಲ್ಲಿ ತುಳಸಿಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ.

ಹೀಗಾಗಿ ಭದ್ರತಾ ದೃಷ್ಟಿಯಿಂದ ಜುಲೈ 2ರ ಬೆಳಗ್ಗೆ 6 ಗಂಟೆಯಿಂದ ಜುಲೈ 3ರ ಸಂಜೆ 6 ಗಂಟೆಯ ವರೆಗೆ ನಂದಿಗಿರಿಧಾಮ ಮತ್ತು ಸ್ಕಂದಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಇನ್ನೂ ಚಿಕ್ಕಬಳ್ಳಾಪುರದಲ್ಲಿ ದ್ರೌಪದಿ ಮುರ್ಮು ಭೇಟಿ ಹಿನ್ನಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
60 ಪಿಎಸ್‌ಐಗಳು, ಕೆಎಸ್ಆರ್‌ಪಿಯ 3 ತುಕಡಿ, 3 ಎಸ್ಪಿಗಳು, 10 ಡಿವೈಎಸ್ಪಿಗಳು, 28 ಪೊಲೀಸ್ ಇನ್ಸ್ಪೆಕ್ಟರ್, 700 ಪೊಲೀಸ್ ಸಿಬ್ಬಂದಿಯನ್ನು ನಿಯೋಜನ ಮಾಡಲಾಗಿದೆ.












Click it and Unblock the Notifications