ಮಗನಿಂದಲೇ ತಾಯಿಯ ಮೇಲೆ ಅತ್ಯಾಚಾರ? ಹಲ್ಲೆ ನಡೆಸಿ ತಿಪ್ಪೆಗುಂಡಿಗೆ ಎಸೆದು ಹೋಗಿದ್ದ ಪಾಪಿ ಮಗ!
ಗುಡಿಬಂಡೆ ಆಗಸ್ಟ್ 6: ಕುಡಿದ ಅಮಲಿನಲ್ಲಿ ತಾಯಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಆಕೆಯ ಮೇಲೆ ಹಲ್ಲೆ ನಡೆಸಿ ತಿಪ್ಪೆಗುಂಡಿಗೆ ಬಿಸಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಗುಂಡಿಬಂಡೆ ತಾಲ್ಲೂಕಿನ ಉಲ್ಲೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿನ್ನಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದ್ದು, ಘಟನೆ ಸಂಬಂಧಿಸಿದಂತೆ ಗುಂಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಆಶೋಕನನ್ನ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ಥ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರೋಪಿಗೆ ವಿವಾಹವಾಗಿದ್ದು ಆತನ ಪತ್ನಿ ದೂರವಿದ್ದಳು. ಈತ ತಂದೆ ತಾಯಿಯ ಜೊತೆ ವಾಸಿಸುತ್ತಿದ್ದ. ಕಳೆದ ಭಾನುವಾರ ರಾತ್ರಿ ಕುಡಿದು ಮನೆಗೆ ಬಂದಿದ್ದ ಆರೋಪಿ, ತಾಯಿಯನ್ನ ಮೇಲೆ ಹಲ್ಲೆ ಮಾಡಿದ್ದಾನೆ. ತಾಯಿಯ ಮೇಲೆ ಅತ್ಯಾಚಾರ ನಡೆಸಿ ತಿಪ್ಪೆಗುಂಡಿಗೆ ಎಸೆಯಲಾಗಿತ್ತು ಎಂದು ತಿಳಿದು ಬಂದಿದೆ. ನಂತರ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ಗುಂಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಸೋಮವಾರ ರಾತ್ರಿ ಗುಡಿಬಂಡೆ ಠಾಣೆಗೆ ಡಿವೈಎಸ್‌ಪಿ ಶಿವಕುಮಾರ್ ಭೇಟಿ ನೀಡಿ ಪ್ರಕರಣದ ಮಾಹಿತಿ ಪಡೆದರು. ಆಸ್ಪತ್ರೆಗೂ ಭೇಟಿ ನೀಡಿ ಆರೋಪಿಯ ತಂದೆಯಿಂದ ಹಾಗೂ ಸಂತ್ರಸ್ತೆಯಿಂದ ಮಾಹಿತಿ ಕಲೆ ಹಾಕಿದ್ದಾರೆ. ಗುಡಿಬಂಡೆ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.












Click it and Unblock the Notifications