ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಬಳ್ಳಾಪುರಕ್ಕೆ ಅಚ್ಚರಿಯ ಅಭ್ಯರ್ಥಿ ಶಿಫಾರಸು ಮಾಡಿದ ಜೆಡಿಎಸ್!

|
Google Oneindia Kannada News

ಚಿಕ್ಕಬಳ್ಳಾಪುರ, ಫೆಬ್ರವರಿ 28 : ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಲೋಕಸಭಾ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಯುವುದು ಖಚಿತವಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರಕ್ಕೂ ಅಚ್ಚರಿಯ ಹೆಸರನ್ನು ಜೆಡಿಎಸ್ ಶಿಫಾರಸು ಮಾಡುವ ಸಾಧ್ಯತೆ ಇದೆ.

ಹೌದು, ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ವಿ.ಗೋಪಾಲಗೌಡ ಅವರು ಚಿಕ್ಕಬಳ್ಳಾಪುರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಹಾಲಿ ಈ ಕ್ಷೇತ್ರ ಕಾಂಗ್ರೆಸ್ ವಶದಲ್ಲಿದ್ದು, ಎಂ.ವೀರಪ್ಪ ಮೊಯ್ಲಿ ಸಂಸದರು.

ಚಿಕ್ಕಬಳ್ಳಾಪುರ ಜೆಡಿಎಸ್‌ಗೆ : ವೀರಪ್ಪ ಮೊಯ್ಲಿ ಹೇಳುವುದೇನು?ಚಿಕ್ಕಬಳ್ಳಾಪುರ ಜೆಡಿಎಸ್‌ಗೆ : ವೀರಪ್ಪ ಮೊಯ್ಲಿ ಹೇಳುವುದೇನು?

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯನ್ನು ಎದುರಿಸುತ್ತಿವೆ. ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಬಿಟ್ಟುಕೊಡುವಂತೆ ಜೆಡಿಎಸ್ ಬೇಡಿಕೆ ಇಟ್ಟಿದೆ. ಕ್ಷೇತ್ರ ಬಿಟ್ಟುಕೊಟ್ಟರೆ ಅಭ್ಯರ್ಥಿ ಅಂತಿಮಗೊಳಿಸಲಾಗುತ್ತದೆ. ಕಳೆದ ಬಾರಿ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ ಅವರು ಕಣಕ್ಕಿಳಿದಿದ್ದರು.

ಕೋಲಾರದಿಂದ ಎಚ್.ಸಿ.ಮಹದೇವಪ್ಪ ಕಣಕ್ಕೆ?, ಗೌಡರ ತಂತ್ರ!ಕೋಲಾರದಿಂದ ಎಚ್.ಸಿ.ಮಹದೇವಪ್ಪ ಕಣಕ್ಕೆ?, ಗೌಡರ ತಂತ್ರ!

ಹಾಲಿ ಕಾಂಗ್ರೆಸ್‌ನ ಸಂಸದರು ಇರುವ ಕ್ಷೇತ್ರವನ್ನು ಬಿಟ್ಟುಕೊಡಬಾರದು ಎಂದು ಕಾಂಗ್ರೆಸ್ ನಾಯಕರು ಈಗಾಗಲೇ ಒತ್ತಾಯಿಸುತ್ತಿದ್ದಾರೆ. ಆದರೆ, ಉಭಯ ಪಕ್ಷಗಳ ನಡುವೆ ಸೀಟು ಹಂಚಿಕೆ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ....

ಲೋಕಸಭಾ ಚುನಾವಣೆ : ಜೆಡಿಎಸ್ ಬೇಡಿಕೆ ಇಟ್ಟಿರುವ ಕ್ಷೇತ್ರಗಳ ಪಟ್ಟಿಲೋಕಸಭಾ ಚುನಾವಣೆ : ಜೆಡಿಎಸ್ ಬೇಡಿಕೆ ಇಟ್ಟಿರುವ ಕ್ಷೇತ್ರಗಳ ಪಟ್ಟಿ

ದೇವೇಗೌಡರ ಲೆಕ್ಕಚಾರವೇನು?

ದೇವೇಗೌಡರ ಲೆಕ್ಕಚಾರವೇನು?

ವಿ.ಗೋಪಾಲಗೌಡ ಅವರನ್ನು ಜೆಡಿಎಸ್‌ನಿಂದ ಕಣಕ್ಕೆ ಇಳಿಸಿದರೆ ಬಿಜೆಪಿಯ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಅವರನ್ನು ಸೋಲಿಸಬಹುದು ಎಂಬುದು ದೇವೇಗೌಡರ ಲೆಕ್ಕಾಚಾರವಾಗಿದೆ. ಆದರೆ, ಕಾಂಗ್ರೆಸ್ ಇದಕ್ಕೆ ಒಪ್ಪಿಗೆ ನೀಡಲಿದೆಯೇ? ಎಂದು ಕಾದು ನೋಡಬೇಕಿದೆ.

ಒಕ್ಕಲಿಗರ ಮತ

ಒಕ್ಕಲಿಗರ ಮತ

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಒಕ್ಕಲಿಗರ ಮತ ನಿರ್ಣಾಯಕವಾಗಿವೆ. ವಿ.ಗೋಪಾಲಗೌಡ ಅವರು ಅಭ್ಯರ್ಥಿಯಾದರೆ ಜಾತಿ ಬಲ, ಜನಪ್ರಿಯತೆ ಸಹಾಯಕವಾಗಬಹುದು ಎಂಬ ಲೆಕ್ಕಾಚಾರವಾಗಿದೆ. ರೈತರು, ಕ್ಷೇತ್ರದ ಮತದಾರರು, ಪಕ್ಷದ ಕೆಲವು ನಾಯಕರು ಈಗಾಗಲೇ ಗೋಪಾಲಗೌಡರ ಜೊತೆ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿಯೂ ಹಬ್ಬಿದೆ.

2014ರ ಚುನಾವಣೆ

2014ರ ಚುನಾವಣೆ

2014ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಎಂ.ವೀರಪ್ಪ ಮೊಯ್ಲಿ ಅವರು 424800 ಮತಗಳನ್ನು ಪಡೆದು ಜಯಗಳಿಸಿದ್ದರು. ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ ಎಚ್.ಡಿ.ಕುಮಾರಸ್ವಾಮಿ ಅವರು 346339 ಮತ ಪಡೆದಿದ್ದರು. ಕ್ಷೇತ್ರದಲ್ಲಿ ಜೆಡಿಎಸ್ ಪ್ರಾಲಬ್ಯವಿದ್ದು, ಸ್ವಲ್ಪ ಶ್ರಮ ಹಾಕಿದರೆ ಗೆಲುವು ಸಾಧಿಸಬಹುದು ಎಂಬುದು ದೇವೇಗೌಡರ ಲೆಕ್ಕಾಚಾರವಾಗಿದೆ.

ಕ್ಷೇತ್ರ ಬಿಟ್ಟುಕೊಡುವುದಿಲ್ಲ

ಕ್ಷೇತ್ರ ಬಿಟ್ಟುಕೊಡುವುದಿಲ್ಲ

ಕೆಲವು ದಿನಗಳ ಹಿಂದೆ ಮಾತನಾಡಿದ್ದ ಸಂಸದ ವೀರಪ್ಪ ಮೊಯ್ಲಿ ಅವರು, 'ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಹಾಲಿ ಸಂಸದರು ಇರುವ ಕ್ಷೇತ್ರವನ್ನು ಕಾಂಗ್ರೆಸ್ ಬಿಟ್ಟುಕೊಡುವುದಿಲ್ಲ. ದೇವೇಗೌಡರು ಸೇರಿದಂತೆ ಯಾರೇ ಕಣಕ್ಕಿಳಿದರೂ ಕಾಂಗ್ರೆಸ್‌ನಿಂದ ನಾನು ಕಣಕ್ಕಿಳಿಯುವೆ' ಎಂದು ಹೇಳಿದ್ದರು.

English summary
V.Gopala Gowda retired judge of the Supreme Court of India may contest for Lok Sabha Elections 2019 from Chikkaballapur seat as JD(S) candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X