ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಶ್ವವಿಖ್ಯಾತ ನಂದಿ ಗಿರಿಧಾಮಕ್ಕೆ ರೋಪ್ ವೇ: ಪ್ರಾತ್ಯಕ್ಷಿಕ ವಿಡಿಯೋ

|
Google Oneindia Kannada News

ಚಿಕ್ಕಬಳ್ಳಾಪುರ, ಜುಲೈ 15: ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ರೋಪ್‌ವೇ ನಿರ್ಮಾಣ ಮಾಡಲು ಜುಲೈ 23ರಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಸ್ಥಳ ಪರಿಶೀಲನೆ ನಡೆಸಲಿದ್ದಾರೆ.

ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಸಿ.ಪಿ. ಯೋಗೇಶ್ವರ್ ನೇತೃತ್ವದಲ್ಲಿ ಬೆಂಗಳೂರಿನ ಕುಮಾರಕೃಪ ಅತಿಥಿ ಗೃಹದಲ್ಲಿ ಗುರುವಾರ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ನಂದಿ ಗಿರಿಧಾಮಕ್ಕೆ ಹೋಗುವ ಪ್ರವಾಸಿಗರ ಗಮನಕ್ಕೆ ನಂದಿ ಗಿರಿಧಾಮಕ್ಕೆ ಹೋಗುವ ಪ್ರವಾಸಿಗರ ಗಮನಕ್ಕೆ

ಸಭೆಯಲ್ಲಿ ಮಾತನಾಡಿದ ಸಚಿವ ಯೋಗೇಶ್ವರ್, "ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ನಂದಿ ಗಿರಿಧಾಮ ರೋಪ್‌ವೇ ಯೋಜನೆಗೆ ತ್ವರಿತವಾಗಿ ಚಾಲನೆ ನೀಡಬೇಕು. ಜುಲೈ 23ರಂದು ಸ್ಥಳ ಪರಿಶೀಲನೆ ಮಾಡಿ ಅತೀ ಶೀಘ್ರದಲ್ಲಿ ಟೆಂಡರ್ ಕರೆದು ಕಾಮಗಾರಿಗೆ ಚಾಲನೆ ನೀಡಬೇಕು,'' ಎಂದು ಅಧಿಕಾರಿಗಳಿಗೆ ಸೂಚಿಸಿದರು.

Chikkaballapur: Ropeway Construction In World Famous Nandi Hill Station

"ರೋಪ್‌ವೇ ನಿರ್ಮಾಣದಲ್ಲಿ AARCON INFRA ಸಂಸ್ಥೆಗೆ 51 ವರ್ಷಗಳ ಅನುಭವವಿದ್ದು, ದೇಶ ವಿದೇಶ ಹಾಗೂ ನಮ್ಮ ರಾಷ್ಟ್ರದ ವಿವಿಧ ರಾಜ್ಯಗಳಲ್ಲಿ 64 ರೋಪ್‌ವೇ ಗಳನ್ನು ನಿರ್ಮಾಣ ಮಾಡಿದ್ದಾರೆ. ರಾಜ್ಯದ ಪ್ರಪ್ರಥಮ ರೋಪ್ ವೇಯನ್ನು ಪ್ರವಾಸಿಗರಿಗೆ ಒದಗಿಸಲು ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ,'' ಸಚಿವರು ಸಭೆಯಲ್ಲಿ ತಿಳಿಸಿದರು.

Chikkaballapur: Ropeway Construction In World Famous Nandi Hill Station

ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕಿ ಸಿಂಧೂ ರೂಪೇಶ್, ಅರಣ್ಯ ಮತ್ತು ವಸತಿ ವಿಹಾರಧಾಮ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಷ್ಕರ್, ಕೆಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ವಿಜಯ್ ಶರ್ಮ ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು.

Recommended Video

ಚಂದ್ರನ ಮೇಲೆ ಮನೆ ಕಟ್ಟಲು ನಾಸಾದಿಂದ ಕಾಂಟ್ರ್ಯಾಕ್ಟ್ | Oneindia Kannada

English summary
Tourism Minister C.P Yogeshwar will conduct the inspection On July 23 in Nandi Hill Station for Rope way construction.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X