Get Updates
Get notified of breaking news, exclusive insights, and must-see stories!

ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ: ಪ್ರತಿ ವರ್ಷ ಈ ಸೇವೆ ಒದಗಿಸಲು ನಿರ್ಧಾರ: ಸಂದೀಪ್ ಬಿ ರೆಡ್ಡಿ

2023-24 ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 60 ಕ್ಕಿಂತ ಹೆಚ್ಚು ಅಂಕ ಪಡೆದ ಚಿಕ್ಕಬಳ್ಳಾಪುರ ತಾಲೂಕಿನ ಪರಿಶಿಷ್ಟ ಪಂಗಡ ಮತು ಪರಿಶಿಷ್ಟ ಜಾತಿಯ ಸುಮಾರು 300 ವಿದ್ಯಾರ್ಥಿಗಳಿಗೆ ಸ್ಪಂದನ ವಿದ್ಯಾರ್ಥಿ ವೇತನ ವಿತರಿಸಲಾಯಿತು.

ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿದ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ್, ನಿಮ್ಮ ಮಕ್ಕಳು ಉತ್ತಮ ಸಾಧನೆ ಮಾಡಿರುವುದಕ್ಕೆ ಪೋಷಕರಿಗೆ ಹೆಮ್ಮೆ ಇರಲಿ, ಜೀವನದಲ್ಲಿ ಶೈಕ್ಷಣಿಕ ಗುರಿಯೊಂದಿಗೆ ಭವಿಷ್ಯ ರೂಪಿಸಿಕೊಳ್ಳವಲ್ಲಿ ವಿದ್ಯಾರ್ಥಿಗಳು ವಿಚಲಿತರಾಗಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

Scholarship for students Decision to provide this service every year Sandeep B Reddy

ಜೀವನದಲ್ಲಿ ಸಾಧನೆ ಬಹು ಮುಖ್ಯ. ಸಾಧನೆ ಮಾಡಲು ಛಲ ಇರಬೇಕು. ಇದಕ್ಕಾಗಿ ವಿದ್ಯಾರ್ಥಿ ಜೀವನದಿಂದಲೇ ಶಿಸ್ತು, ಸಂಯಮ ರೂಢಿಸಿಕೊಳ್ಳಬೇಕು. ಗುರು ಹಿರಿಯರಿಗೆ ಗೌರವಿಸಬೇಕು. ಉನ್ನತ ಶಿಕ್ಷಣದತ್ತ ಸದಾ ತಮ್ಮ ಚಿತ್ತ ಇರಬೇಕು. ಪ್ರತಿ ವಿದ್ಯಾರ್ಥಿ ಒಬೊಬ್ಬ ಭಗತ್ ಸಿಂಗ್ ಆಗಿ ಈ ಸಮಾಜ ಕಟ್ಟುವ ಕೆಲಸ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಹೇಳಿದರು.

ಮನೆಯಲ್ಲಿನ ಕಷ್ಟ ಕಾರ್ಪಣ್ಯಗಳಿಂದಾಗಿ ವಿದ್ಯಾಭ್ಯಾಸವನ್ನು ಮೊಟಕುಗೊಳಿಸುವ ಹಂತಕ್ಕೆ ತಲುಪಿದ್ದರೆ ಇದು ನಿಜಕ್ಕೂ ದುರ್ದೈವ ಅಂತಹ ವಿದ್ಯಾರ್ಥಿಗಳು ದಾನಿಗಳು ನೀಡುವ ಸವಲತ್ತನ್ನು ಬಳಸಿಕೊಂಡು ವಿದ್ಯಾರ್ಥಿ ಜೀವನವನ್ನು ಉನ್ನತ ಮಟ್ಟಕ್ಕೆ ಏರುವ ಗುರಿಯನ್ನು ಇಟ್ಟುಕೊಂಡು ಚಿಕ್ಕಬಳ್ಳಾಪುರ ಮುನ್ನಡೆಯಬೇಕು ನಗರದಲ್ಲಿ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಟ್ರಸ್ಟ್‌ನ ಸಂದೀಪ್.ಬಿ.ರೆಡ್ಡಿ ನೀಡುತ್ತಿರುವ ವಿದ್ಯಾರ್ಥಿವೇತನ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ ಬಿ.ರೆಡ್ಡಿ ಮಾತನಾಡಿ ವಿದ್ಯೆ ಒಂದು ಅಧ್ಬುತವಾದ ಆಯುಧವಾಗಿದ್ದು, ವಿದ್ಯಾರ್ಥಿಗಳು ವಿದ್ಯೆಯೊಂದಿಗೆ ಜ್ಞಾನವಂತರಾಗಿ ಸಮಾಜದಲ್ಲಿ ಉನ್ನತ ಮಟ್ಟದ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

Scholarship for students Decision to provide this service every year Sandeep B Reddy

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಎಲ್ಲಾ ಸಮಾಜದ ದೇವರು. ಅವರು ಮಾಡಿದ ದೊಡ್ಡ ಸಾಧನೆಯಿಂದಲೇ ಇಂದು ಪ್ರತಿಯೊಬ್ಬರು ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಬೆಳೆಯಲು ಅವಕಾಶ ಸಿಕ್ಕಿದೆ. ಇದನ್ನು ಅರಿತು ವಿದ್ಯಾರ್ಥಿಗಳು ದೊಡ್ಡ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

ಮಹಾತ್ಮ ಗಾಂಧೀಜಿ, ಭಗತ್ ಸಿಂಗ್ ಸೇರಿದಂತೆ ಹಲವು ಮಹನೀಯರು ತಮ್ಮ ಕಾಲಘಟ್ಟದಲ್ಲಿ ಅವರದೇ ಆದ ರೀತಿಯಲ್ಲಿ ಈ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ. ಅಂತವರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡು ಅವರಂತೆ ಬೆಳೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್.ಎಸ್. ಎಲ್.ಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿದ ಎಸ್. ಸ್ಸಿ ಮತ್ತು ಎಸ್ ಟಿ ವಿದ್ಯಾರ್ಥಿಗಳಿಗೆ ತಲಾ 10 ಸಾವಿರ ರೂ. ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದವರಿಗೆ ತಲಾ 5 ಸಾವಿರ ರೂ. ಜತೆಗೆ ಪುಸ್ತಕ ಹಾಗೂ ಫಲಕವನ್ನು ನೀಡಿ ಗೌರವಿಸಲಾಯಿತು.

Scholarship for students Decision to provide this service every year Sandeep B Reddy

ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯರೆಡ್ಡಿ ಮಾತನಾಡಿ, ಮಕ್ಕಳ ವಿದ್ಯಾಭ್ಯಾಸಕ್ಕೆ ಪೋಷಕರು ಉತ್ತಮ ವಾತಾವರಣ ನಿರ್ಮಿಸಬೇಕು. ಮಕ್ಕಳ ಮೇಲೆ ಒತ್ತಡ ಹೇರಬಾರದು, ಓದಿನ ವಿಷಯದಲ್ಲಿ ಅವರ ಇಚ್ಛೆಯಂತೆ ಸ್ವಾತಂತ್ರ್ಯ ನೀಡಬೇಕು ಎಂದು ವಿದ್ಯಾರ್ಥಿ ಪೋಷಕರಿಗೆ ಮನವಿ ಮಾಡಿದರು.

ಸಂದೀಪ್ ಬಿ ರೆಡ್ಡಿ ಅವರು ಶಿಕ್ಷಣ ಕ್ಷೇತ್ರಕ್ಕೆ ತಮ್ಮದೇ ಆದ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಮತ್ತಷ್ಟು ಶಕ್ತಿ ಸಿಕ್ಕಿದರೆ ಇನ್ನಷ್ಟು ಸೇವೆ ಸಲ್ಲಿಸಲು ಸಹಕಾರಿಯಾಗಲಿದೆ. ಅವರಿಗೆ ಮತ್ತಷ್ಟು ಶಕ್ತಿ ತುಂಬುವ ಕೆಲಸ ಎಲ್ಲರಿಂದ ಆಗಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಡಾ.ಎಂ. ಶಿವಾನಂದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿವಿಆರ್ ರಾಜೇಶ್, ದಸಂಸ ಮುಖಂಡರಾದ ಸುಧಾ ವೆಂಕಟೇಶ್, ಗಂಗರೇಕಾಲುವೆ ಮೂರ್ತಿ, ಗವಿರಾಯಪ್ಪ, ಹೈಕೋರ್ಟ್ ವಕೀಲ ರಾಜೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣಮುರ್ತಿ, ತಾ.ಪಂ.ಮಾಜಿ ಸದಸ್ಯ ತಿರುಮಲಪ್ಪ, ತಿಪ್ಪೇನಹಳ್ಳಿ ಗ್ರಾ.ಪಂ ಅಧ್ಯಕ್ಷ ಶ್ರೀನಿವಾಸ್, ಪೋಶೆಟ್ಟಿಹಳ್ಳಿ ಗ್ರಾ.ಪಂ. ಅಧ್ಯಕ್ಷ ಶ್ರೀನಿವಾಸ್, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ರಾಜೇಂದ್ರ ಬಾಬು, ಜಯಕುಮಾರ್ ಇದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+