ಅಕ್ರಮ ನಡೆಯದಂತೆ ಸಿಸಿ ಕ್ಯಾಮೆರಾ ಕಣ್ಗಾವಲು: ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಟ್ಟೆಚ್ಚರ, ನಾನಾ ಕ್ರಮ
ಚಿಕ್ಕಬಳ್ಳಾಪುರ ಮಾರ್ಚ್ 25: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದು (ಮಾ.25) ಆರಂಭಗಿದೆ. ಜಿಲ್ಲಾದ್ಯಂತ ಸುಗಮವಾಗಿ ಪರೀಕ್ಷೆ ನಡೆಸಲು ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ. ವಿಶೇಷವಾಗಿ ಈ ಬಾರಿ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆ ಮಾಡಿದ್ದು, ಯಾವುದೇ ಅಕ್ರಮ ನಡೆಯದಂತೆ ಎಚ್ಚರ ವಹಿಸಲಾಗಿದೆ.
ಜಿಲ್ಲಾದ್ಯಂತ ಒಟ್ಟು 302 ಶಾಲೆಯ 15,993 ವಿದ್ಯಾರ್ಥಿಗಳು ಪ್ರಪ್ರಥಮವಾಗಿ ಪರೀಕ್ಷೆ ಬರೆಯುತ್ತಿದ್ದು, 492 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 16,485 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 302 ಶಾಲೆಯ ವಿದ್ಯಾರ್ಥಿಗಳಿಗೆ ಜಿಲ್ಲಾದ್ಯಂತ 52 ಹರಿಹಾಳೆ ಕೇಂದ್ರಗಳನ್ನು ತೆರೆಯಲಾಗಿದೆ. ವಿಶೇಷ ಎಂದರೆ ಈ ಬಾರಿ ಹಿಂದಿನಂತೆ ಖಾಸಗಿ ಶಾಲೆ ಮಕ್ಕಳಿಗೆ ಪ್ರತ್ಯೇಕ ಪರೀಕ್ಷಾ ಕೇಂದ್ರ ವ್ಯವಸ್ಥೆಯಿಲ್ಲ. ಸರಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳ ಜತೆಯೇ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ.

ಸಿಸಿ ಕ್ಯಾಮೆರಾ ಕಣ್ಗಾವಲು:
ಜಿಲ್ಲೆಯ 52 ಪರೀಕ್ಷೆ ಕೇಂದ್ರಗಳಲ್ಲೂ ಮೂಲ ಸೌಕರ್ಯಗಳ ಜತೆಗೆ ಸಿಸಿ ಕ್ಯಾಮೆರಾ ಕಣ್ಗಾವಲು ಇರಲಿದೆ. ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂಮಧ್ಯದಲ್ಲಿ ಅಡಚಣೆಯಾಗದಂತೆ ಕ್ರಮ ವಹಿಸಬೇಕು. ಜಿಲ್ಲಾ ಪಂಚಾಯಿತಿ ಮತ್ತು ಶಿಕ್ಷಣ ಇಲಾಖೆಯಲ್ಲಿ ಸಿಸಿ ಕ್ಯಾಮೆರಾ ಪರಿಶೀಲನೆಗೆ ವ್ಯವಸ್ಥೆ ಮಾಡಲಾಗಿದೆ. ಇಲ್ಲೇ ಇರುವ ಪರೀಕ್ಷಾ ಕೇಂದ್ರಗಳಲ್ಲೂ ತಾತ್ಕಾಲಿಕವಾಗಿ ಸಿಸಿ ಕ್ಯಾಮೆರಾ ಅಳವಡಿಸಲು ಸೂಚನೆ ನೀಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಹೇಗೆ ಪರೀಕ್ಷೆ ನಡೆಯುತ್ತಿದೆ ಎಂಬುದನ್ನು ಸೂಕ್ಷ್ಮವಾಗಿ ಪರಿಶೀಲಿಸಲು ವ್ಯವಸ್ಥೆ ಮಾಡಲಾಗಿದೆ.
ಪ್ರಶ್ನೆ ಪತ್ರಿಕೆ ಬಗ್ಗೆ ಕಟ್ಟೆಚ್ಚರ:
ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಪ್ರಶ್ನೆ ಪತ್ರಿಕೆಗಳ ಗೌಪ್ಯತೆ ಅತಿ ಮುಖ್ಯ. ಹೀಗಾಗಿ ಪ್ರಶ್ನೆ ಪತ್ರಿಕೆಗಳನ್ನು ಪೊಲೀಸ್ ರಕ್ಷಣೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಯಾಗಲಿದೆ. ಅಲ್ಲದೇ ಯಾವುದೇ ಜೆರಾಕ್ಸ್ ಅಂಗಡಿಗಳು ತೆರೆಯದಂತೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆರೋಗ್ಯ ಸೇವೆಗೆ, ಸಾರಿಗೆ ವ್ಯವಸ್ಥೆ ವಿದ್ಯುತ್ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ನಿರಂತರ ವಿದ್ಯುತ್‌ಗೆ ಸೂಚನೆ:
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವವೇಳೆ ಎಲ್ಲೆಡೆ ಸಿಸಿಕ್ಯಾಮೆರಾ ಅಳವಡಿಸಲಾಗಿದೆ. ಅಲ್ಲದೇ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ಬೆಳಕಿನ ಸಮಸ್ಯೆಯೂ ಇರಲಿದೆ. ಇನ್ನೊಂದೆಡೆ ಮಿತಿಮೀರಿದ ಬಿಸಿಲಿರುವ ಹಿನ್ನೆಲೆಯಲ್ಲಿ ಫ್ಯಾನ್‌ಗಳ ಅವಶ್ಯಕತೆ ಇದೆ. ಹೀಗಾಗಿ ಪರೀಕ್ಷೆ ನಡೆಯುವ ಅವಧಿಯಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಸಂಪರ್ಕ ಕಡಿತಗೊಳಿಸದಂತೆ ಸೂಚನೆ ನೀಡಲಾಗಿದೆ. ಅಲ್ಲದೇ ವಿದ್ಯಾರ್ಥಿಗಳ ಆರೋಗ್ಯಕ್ಕೆ ತೊಂದರೆಯಾದರೆ ನೆರವಿಗಾಗಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಆಗಮಿಸಲು ಸಾರಿಗೆ ವ್ಯವಸ್ಥೆ ಮಾಡುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಬೋರ್ಡ್ ಗೆ ಬೆನ್ನು ಹಾಕಿ ಕೂತು ಪರೀಕ್ಷೆ:
ವಿಶೇಷ ಎಂದರೆ ಈ ಬಾರಿ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯಲ್ಲಿ ಬೋರ್ಡ್‌ಗೆ ಹಿಮ್ಮುಖವಾಗಿ ಕೂತು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಹಿಂದೆಲ್ಲಾ ಬೋರ್ಡ್ ಕಡೆ ಮುಖ ಮಾಡಿ ಕುಳಿತುಕೊಳ್ಳುತ್ತಿದ್ದ ಸಂದರ್ಭದಲ್ಲಿ ಸಾಕಷ್ಟು ಅಧಿಕಾರಿಗಳು, ಬೇರೆ ಪರೀಕ್ಷಾ ಚಟುವಟಿಕೆಗಳು ನಡೆಯುವ ವೇಳೆಯೂ ವಿದ್ಯಾರ್ಥಿಗಳಿಗೆ ತೊಂದರೆ ಯಾಗುತ್ತಿತ್ತು. ಅಲ್ಲದೇ ಕೆಲವರು ಬೋರ್ಡ್ ಮೂಲಕವೂ ನಕಲು ಮಾಡುವ ಸಾಧ್ಯತೆ ಇತ್ತು. ಹೀಗಾಗಿ ಈ ಬಾರಿ ಬೋರ್ಡ್ ಬೆನ್ನು ಹಾಕಿ ಕೂರುವ ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳ ಏಕಾಗ್ರತೆಗೆ ಭಂಗ ಬಾರದಂತೆ ವ್ಯವಸ್ಥೆ ಮಾಡಲಾಗಿದೆ.
ಈಗ ನಡೆಯುತ್ತಿರುವುದು ಪರೀಕ್ಷೆ-1:
ವಿಶೇಷ ಎಂದರೆ ಇದೇ ಪ್ರಥಮ ಬಾರಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಎರಡು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಇಂದು ಪರೀಕ್ಷೆ-1 ನಡೆಯುತ್ತಿದೆ, ಈ ಪರೀಕ್ಷೆಗೆ ಹಾಜರಾದವರಿಗೆ ಮಾತ್ರ ಪರೀಕ್ಷೆ-2 ಬರೆಯಲು ಅವಕಾಶವಿರಲಿದೆ. ಮೊದಲನೇ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು ತೃಪ್ತಿ ನೀಡದಿದ್ದಲ್ಲಿ ಎರಡನೇ ಪರೀಕ್ಷೆಯನ್ನು ಬರೆಯಬಹುದು. ಬಂದ ಫಲಿತಾಂಶದಲ್ಲಿ ಯಾವುದು ಉತ್ತಮವಾಗಿ ಬರುತ್ತದೆಯೊ ಆ ಅಂಕಗಳನ್ನು ವಿದ್ಯಾರ್ಥಿಗಳಿಗೆ ನೀಡಲಾ ಗುತ್ತಿದೆ. ವಿದ್ಯಾರ್ಥಿಗಳು ಅನುತ್ತೀರ್ಣವಾದ ವಿಷಯದ ಜತೆ ಬೇರೆ ವಿಷಯಗಳ ಅಂಕಗಳನ್ನು ಉತ್ತಮಗೊಳಿಸಲು ಬೇಕಾದರೂ ಪರೀಕ್ಷೆ-2ನ್ನು ಬರೆಯಬಹುದು.
ಬಿಸಿಯೂಟ:
ಇದೇ ಮೊದಲ ಬಾರಿಗೆ ಪರೀಕ್ಷೆಗಳು ಮುಗಿದ ಬಳಿಕ ಮಕ್ಕಳಿಗೆ ಪರೀಕ್ಷಾ ಕೇಂದ್ರಗಳಲ್ಲಿಯೇ ಎಂದಿನಂತೆ ಮಧ್ಯಾಹ್ನದ ಬಿಸಿಯೂಟ ವಿತರಿಸಲಾಗುತ್ತಿದೆ. ಬೇಸಿಗೆ ದಿನಗಳಾಗಿರುವುದರಿಂದ ಹಳ್ಳಿಯಿಂದ ಬರುವ ಮತ್ತು ಸ್ಥಳೀಯ ಮಕ್ಕಳ ಹಿತದೃಷ್ಟಿಯಿಂದ ಬಿಸಿಯೂಟ ನೀಡಲು ನಿರ್ಧರಿಸಲಾಗಿದೆ.
ಉಚಿತ ಬಸ್ ಪ್ರಯಾಣ:-
ಗ್ರಾಮೀಣ ಪ್ರದೇಶಗಳಿಂದ ಸಂಪರ್ಕ ಕಲ್ಪಿಸುವ ಎಲ್ಲಾ ಬಸ್ಗಳನ್ನು ಸಮಯಕ್ಕೆ ಸರಿಯಾಗಿ ಸಂಚಾರ ಮಾಡಲು ಸಿಬ್ಬಂದಿಗೆ ಸೂಚಿಸಲಾಗಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ನೋಂದಣಿ ಪತ್ರ ತೋರಿಸಿ ಪ್ರಯಾಣ ಮಾಡಬಹುದು.
ಎಲ್ಲೆಲ್ಲಿ ಎಷ್ಟು ವಿದ್ಯಾರ್ಥಿಗಳಿಂದ ಪರೀಕ್ಷೆ?
ಚಿಕ್ಕಬಳ್ಳಾಪುರ ಜಿಲ್ಲೇಯ ಬಾಗೇಪಲ್ಲಿ ತಾಲೂಕಿನಲ್ಲಿ ಒಟ್ಟು 42 ಶಾಲೆಗಳಿಂದ 2583 ವಿದ್ಯಾರ್ಥಿಗಳು ಒಟ್ಟು 9 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ನೋಂದಾಯಿಸಿ ಕೊಂಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ 52 ಶಾಲೆಗಳಿಂದ 3058 ವಿದ್ಯಾರ್ಥಿಗಳು 7 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಚಿಂತಾಮಣಿ ತಾಲೂಕಿನ 80 ಶಾಲೆಗಳಲ್ಲಿ ಒಟ್ಟು 3626 ವಿದ್ಯಾರ್ಥಿಗಳು 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಗೌರಿಬಿದನೂರು ತಾಲೂಕಿನ 55 ಶಾಲೆಗಳಿಂದ 3787 ವಿದ್ಯಾರ್ಥಿಗಳು 14 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಗುಡಿಬಂಡೆ ತಾಲೂಕಿನ 15 ಶಾಲೆಗಳ 725 ವಿದ್ಯಾರ್ಥಿಗಳು ಎರಡು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದು, ಶಿಡ್ಲಘಟ್ಟ ತಾಲೂಕಿನ 58 ಶಾಲೆಗಳಿಂದ 2671 ವಿದ್ಯಾರ್ಥಿಗಳು ಒಟ್ಟು 9 ಪರೀಕ್ಷಾ ಕೇಂದ್ರಗಳಲ್ಲಿ ಬರೆಯಲಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 302 ಶಾಲೆಗಳ 15,993 ವಿದ್ಯಾರ್ಥಿಗಳು ತಮ್ಮ ಮುಂದಿನ ಶಿಕ್ಷಣಕ್ಕಾಗಿ 52 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ.
ವೇಳಾಪಟ್ಟಿ ಹೀಗಿದೆ:-
*ಮಾ.25 : ಪ್ರಥಮ ಭಾಷೆ ಕನ್ನಡ.
*ಮಾ.27 : ಸಮಾಜ ವಿಜ್ಞಾನ.
*ಮಾ.30 : ವಿಜ್ಞಾನ.
*ಏ.2 : ಗಣಿತ.
*ಏ.4 : ತೃತೀಯ ಭಾಷೆ.
*ಏ.6 : ದ್ವಿತೀಯ ಭಾಷೆ.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications