ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರಲಿ ಎಂದು ಬರೆದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ

ಚಿಕ್ಕಬಳ್ಳಾಪುರ, ಡಿಸೆಂಬರ್ 5: ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ತರಗತಿ ಬೋರ್ಡ್ ನಲ್ಲಿ ಬರೆದು ಶಿಕ್ಷಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.

ಇನ್ನೂ 32 ವಯಸ್ಸಿನ ಶಿಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ಇವರು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕನಗಾನಕೊಪ್ಪ ಗ್ರಾಮದ ನಿವಾಸಿಯಾಗಿದ್ದಾರೆ. ಶಿಕ್ಷಕ ಚಂದ್ರಶೇಖರ್ ಅವರು ಮಂಚೇನಹಳ್ಳಿಯ ಅನುದಾನಿತ ಆಚಾರ್ಯ ಪ್ರೌಢಶಾಲೆಯ ಶಿಕ್ಷಕಕನಾಗಿ ಸೇವೆ ಸಲ್ಲಿಸುತ್ತಿದ್ದರು.

ಶಾಲಾ ಆಡಳಿತ ಮಂಡಳಿಯಿಂದ ಅನುದಾನಿತ ಶಿಕ್ಷಕನಾಗಿ ಚಂದ್ರಶೇಖರ್ ಅವರನ್ನು ಅನುಮೋದನೆ ಮಾಡದ ಹಿನ್ನಲೆಯಲ್ಲಿ ಆತ್ಮಹತ್ಯೆಯ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

Chikkaballapura: Teacher Committed Suicide Over Not Appointed As Permanent

ತನ್ನ ಆತ್ಮಹತ್ಯೆಗೆ ಆಚಾರ್ಯ ಪ್ರೌಢಶಾಲೆ ಆಡಳಿತ ಮಂಡಳಿ ಕಾರಣ ಎಂದು ಶಿಕ್ಷಕ ಚಂದ್ರಶೇಖರ್ ಡೆತ್‍ನೋಟ್ ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಶಾಲೆಯ ತರಗತಿ ಬೋರ್ಡ್ ನಲ್ಲಿ "ವಿದ್ಯಾರ್ಥಿಗಳೇ.. ನಿಮ್ಮ ಭವಿಷ್ಯ ಉಜ್ವಲವಾಗಲಿ. ಹಾಗೂ ನನ್ನೆಲ್ಲಾ ಪ್ರೀತಿ ಪಾತ್ರರಲ್ಲಿ ಕ್ಷಮೆಯಾಚಿಸುತ್ತಿದ್ದೇನೆ ಎಂದು ಕೂಡ ಬರೆದಿದ್ದಾರೆ.

ಶಿಕ್ಷಕ ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Recommended Video

      Chahal Jadeja ಅದಲು ಬದಲು ಸರಿ ಇಲ್ಲ ಎಂದ Henriques | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+