ಈ ಜಿಲ್ಲೆ ರಚನೆಯಾಗಿ 15 ವರ್ಷ ಪೂರ್ಣಗೊಂಡರೂ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಜನತೆಗಿಲ್ಲ ಎಂಆರ್‌ಐ ಸ್ಕ್ಯಾನಿಂಗ್!

ಚಿಕ್ಕಬಳ್ಳಾಪುರ ಜನವರಿ 6: ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಕೇಂದ್ರವನ್ನು ಸ್ಥಾಪಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಸ್ತಾವನೆ ಸಲ್ಲಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 15 ವರ್ಷ ಕಳೆದರು ಇಲ್ಲಿಯವರೆಗೂ ರೋಗಿಗಳ ಹಿತದೃಷ್ಟಿಯಿಂದ ಸೇವೆ ಒದಗಿಸುವಲ್ಲಿ ವಿಳಂಬವಾಗಿರುವುದರ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಹೌದು ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು, ಜಿಲ್ಲಾಸ್ಪತ್ರೆ ಸೇರಿದಂತೆ ಹೈಟೆಕ್ ಆಸ್ಪತ್ರೆಗಳನ್ನು ಹೊಂದಿರುವ ಈ ಭಾಗದಲ್ಲಿ ಬಡವರು ನಿರ್ಗತಿಕರು ಸೇರಿದಂತೆ ಪ್ರತಿಯೊಬ್ಬರೂ ಸಹ ಎಂಆರ್‌ಐ ಸ್ಕ್ಯಾನಿಂಗ್‌ಗೆ ಖಾಸಗಿ ಆರೋಗ್ಯ ಸಂಸ್ಥೆಗಳನ್ನು ನೆಚ್ಚಿಕೊಳ್ಳುವಂತಾಗಿದೆ. ಇಲ್ಲವೇ ಬೆಂಗಳೂರು ಮತ್ತು ಕೋಲಾರಕ್ಕೆ ತೆರಳಬೇಕಾಗಿದೆ. ಇದರ ಪರದಾಟಕ್ಕೆ ಬ್ರೇಕ್ ಹಾಕಬೇಕೆಂಬ ಜನರ ಒತ್ತಾಯಕ್ಕೆ ಆಡಳಿತ ಯಂತ್ರಾಂಗವು ದಶಕಗಳು ಕಳೆದರು ಸಹ ಸಂಬಂಧಪಟ್ಟ ಅಧಿಕಾರಿಗಳಗಲಿ, ಸರಕಾರ ಮಣೆ ಹಾಕಿಲ್ಲ.

This is a district in name only, people here do not have MRI scanning!

2015ರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಜ್ಯದ ಕೆಲವು ಜಿಲ್ಲಾ ಆಸ್ಪತ್ರೆಯಲ್ಲಿ ಖಾಸಗಿ ಸಂಸ್ಥೆಯೊಂದರ ಸಹಯೋಗದಲ್ಲಿ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನ್ ಯಂತ್ರಗಳನ್ನು ಅಳವಡಿಸಿದ್ದು, ಪ್ರಸ್ತುತ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಯಂತ್ರಗಳು ಮಾತ್ರ ಇವೆ.

ಪರೀಕ್ಷೆಗೆಂದು ಇಲ್ಲಿಗೆ ಬರುವ ರೋಗಿಗಳಿಗೆ ಎಂಆರ್‌ಐ ಸ್ಕ್ಯಾನ್ ಅಗತ್ಯವಿದ್ದಲ್ಲಿ ಕೋಲಾರ ಜಿಲ್ಲಾಸ್ಪತ್ರೆ ಇಲ್ಲವೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫಾರಸು ಮಾಡಲಾಗುತ್ತಿದೆ. ಅಲ್ಲಿ ನೋಂದಣಿ ಕ್ರಮ ಸಂಖ್ಯೆಗೆ ಅನುಗುಣವಾಗಿ ಸೇವೆ ಸಿಗಲಿದ್ದು ದಿನಗಟ್ಟಲೇ ಕಾಯಬೇಕಾದ ಪರಿಸ್ಥಿತಿ ಇದ್ದು, ಕೆಲವೊಮ್ಮೆ ಹಲವು ಬಾರಿ ಅಲೆಡಾಡಬೇಕಾಗುತ್ತದೆ. ತಡವಾದಲ್ಲಿ ವಾಪಸ್ಸು ಮನೆಗೆ ಬರಲು ಸಮಸ್ಯೆಯಾಗಿ ಅಲ್ಲೇ ಉಳಿದುಕೊಳ್ಳಬೇಕಾದ ಸನ್ನಿವೇಶವು ಸಹ ಸೃಷ್ಟಿಯಾಗಿದೆ.

This is a district in name only, people here do not have MRI scanning!

ಇಲ್ಲಿಗೆ ಬರುವ ರೋಗಿಗಳಿಗೆ ಎಂಆರ್‌ಐ ಸ್ಕ್ಯಾನ್ ಅಗತ್ಯವಿದ್ದಲ್ಲಿ ಕೋಲಾರ ಜಿಲ್ಲಾಸ್ಪತ್ರೆ ಇಲ್ಲವೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫಾರಸು ಮಾಡಲಾಗುತ್ತಿದೆ. ಅಲ್ಲಿ ನೋಂದಣಿ ಕ್ರಮ ಸಂಖ್ಯೆಗೆ ಅನುಗುಣವಾಗಿ ಸೇವೆ ಸಿಗಲಿದ್ದು ದಿನಗಟ್ಟಲೇ ಕಾಯಬೇಕು. ಹಲವು ಬಾರಿ ಬರುವವರಲ್ಲಿ ಬಹುತೇಕ ಮಂದಿ ಬಡವರು, ಕೂಲಿಕಾರ್ಮಿಕರು, ಆರ್ಥಿಕ ಆಶಕ್ತರು ಇದ್ದು ಪರದಾಟ ಹೇಳತೀರದು.ಜಿಲ್ಲಾ ಆಸ್ಪತ್ರೆಗೆ ಬರುವವರಲ್ಲಿ ಬಹುತೇಕ ಮಂದಿ ಬಡವರು, ಕೂಲಿಕಾರ್ಮಿಕರು, ಆರ್ಥಿಕ ಆಶಕ್ತರು ಇದ್ದು ಪರದಾಟ ಹೇಳತೀರದು.

ಚಿಕ್ಕಬಳ್ಳಾಪುರ ಜಿಲ್ಲೆ ರಚನೆಯಾಗಿ 15 ವರ್ಷಗಳೇ ಕಳೆದಿವೆ. ಇಲ್ಲಿ ಒಂದು ವೈದ್ಯಕೀಯ ಕಾಲೇಜು, 165 ಹಾಸಿಗೆಗುಳ್ಳಳ್ಳ ಜಿಲ್ಲಾಸ್ಪತ್ರೆ 135 ಹಾಸಿಗೆಗಳ್ಳುಳ ಹಳೇ ಜಿಲ್ಲಾಸ್ಪತ್ರೆ, 5 ತಾಲೂಕು ಆಸ್ಪತ್ರೆ, 57 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು 2 ಸಮುದಾಯ ಆರೋಗ್ಯ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಆದರೆ, ಇಲ್ಲಿನ ಸರ್ಕಾರಿ ಆಸ್ಪತ್ರೆಯ ಎಲ್ಲೂ ಎಂಆರ್‌ಐ ಸ್ಕ್ಯಾನಿಂಗ್ ಕೇಂದ್ರ ಇಲ್ಲ.

2019ರ ಜನವರಿಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕ (ಐಸಿಯು) ಉದ್ಘಾಟಿಸಿದ್ದ ಅಂದಿನ ಸಂಸದ ಎಂ.ವೀರಪ್ಪ ಮೊಯ್ಲಿ ಜಿಲ್ಲಾ ಆಸ್ಪತ್ರೆಗೆ ಎಕ್ಸರೆ ಯಂತ್ರ ಸೇರಿದಂತೆ 10 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಯಂತ್ರೋಪಕರಣಗಳನ್ನು ವಿವಿಧ ಕಂಪನಿಗಳು ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್) ಅಡಿ ಕೊಡಿಸಿದ್ದರು.

ಇದೇ ರೀತಿ ಇನ್ನು ಕೆಲ ಕಂಪನಿಗಳ ಜತೆ ಮಾತನಾಡಿ ಎಂಆರ್‌ಐ ಸ್ಕ್ಯಾನ್ ಯಂತ್ರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದ್ದರು. ಮಾಜಿ ಶಾಸಕರಾದ ಡಾ.ಕೆ.ಸುಧಾಕರ್ ಜಿಲ್ಲಾ ಉಸ್ತುವಾರಿ ಹೊಣೆಯ ಜತೆಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ಸಂದರ್ಭದಲ್ಲಿ ಹಲವು ಬಾರಿ ಒತ್ತಡ ಹೇರಿದರೂ ಪ್ರಯೋಜನವಾಗಲಿಲ್ಲ.

ಸರ್ಕಾರಕ್ಕೆ ಪ್ರಸ್ತಾವನೆ:-

ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ.ಸಿ.ಸುಧಾಕ‌ರ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಸೆಂಟರ್ ಅಗತ್ಯತೆಯ ಬಗ್ಗೆ ಚರ್ಚಿಸಲಾಗಿದೆ. ಅದರಂತೆ ಜಿಲ್ಲಾ ಶಸ್ತ್ರಚಿಕಿತ್ಸಕರು ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿನ ವಾಹನ ನಿಲುಗಡೆಯ ಸ್ಥಳದಲ್ಲಿ ಕೇಂದ್ರನನ್ನು ಸ್ಥಾಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಖಾಸಗಿ ಸಂಸ್ಥೆಗೆ ಅನುಕೂಲ?

ಸರಕಾರಿ ಆಸ್ಪತ್ರೆಯಲ್ಲಿ ಎಂ.ಆರ್. ಐ ಸ್ಕ್ಯಾನಿಂಗ್ ಸೆಂಟರ್ ಇಲ್ಲದಿರುವುದನ್ನು ಲಾಭವನ್ನಾಗಿಸಿಕೊಂಡು ಖಾಸಗಿ 'ಸಂಸ್ಥೆಗಳು ರೋಗಿಗಳಿಗೆ ಸೇವೆಯನ್ನು ಒದಗಿಸುತ್ತಿವೆ. ಆದರೆ, ಇದು ದುಬಾರಿ. ಬೇರೆ ಭಾಗಗಳಿಗೆ ತೆರಳಲು ಸಾಧ್ಯವಾಗದಿರುವ, ತುರ್ತು ಪರೀಕ್ಷೆ ಬಯಸುವ ಜನರು ಹೆಚ್ಚಿನ ಹಣವನ್ನು ತೆರಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ.

ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯ ಸೇವೆ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಬೇಕು. ತ್ವರಿತವಾಗಿ ಜಿಲ್ಲಾಸ್ಪತ್ರೆಯಲ್ಲಿ ಎಂ.ಆರ್.ಐ ನಿಗಾ ಕೇಂದ್ರ ಸ್ಥಾಪಿಸಬೇಕು. ಇದಕ್ಕಿಂತಲೂ ಮುಖ್ಯವಾಗಿ ಸೌಲಭ್ಯವಿದ್ದರೂ ರೋಗಿಗಳನ್ನು ಖಾಸಗಿ ಆರೋಗ್ಯ ಸಂಸ್ಥೆಗಳಿಗೆ ಚೀಟಿ ಬರೆದುಕೊಟ್ಟು ಖಾಸಗಿ ಸಂಸ್ಥೆಗಳ ಕಡೆಗೆ ಕಳುಹಿಸುವ ಸಂಪ್ರದಾಯವನ್ನು ನಿಲ್ಲಿಸಬೇಕಿದೆ ಎಂಬುದು ಹೋರಾಟಗಾರರ ಆಶಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+