• search
  • Live TV
ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡು: ರಸ್ತೆಯುದ್ದಕ್ಕೂ ಟ್ರಾಫಿಕ್ ಜಾಮ್

|

ಚಿಕ್ಕಬಳ್ಳಾಪುರ, ಅಕ್ಟೋಬರ್ 4: ಕೊರೊನಾ ವೈರಸ್ ಹರಡುವ ಭೀತಿಯಿಂದ ನಂದಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ಲಾಕ್ ಡೌನ್ ನಿಯಮ ಜಾರಿ ಬಳಿಕ ಕೆಲ ದಿನಗಳ ಹಿಂದೆಯಷ್ಟೇ ಸಾರ್ವಜನಿಕ ಪ್ರವೇಶ ಮುಕ್ತವಾಗಿಸಲಾಗಿದೆ.

ಇದೀಗ ವಿಕೇಂಡ್ ಹಾಗೂ ಸತತ ರಜೆ ದಿನಗಳ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ತಾಲೂಕಿನಲ್ಲಿರುವ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಸಾವಿರಾರು ಜನರು ಆಗಮಿಸಿದ್ದು, ರಸ್ತೆಯುದ್ದಕ್ಕೂ ಟ್ರಾಫಿಕ್ ಜಾಮ್ ಉಂಟಾಗಿತ್ತು.

ನಂದಿ ಬೆಟ್ಟಕ್ಕೆ ಮುಕ್ತ ಅವಕಾಶ: ಮಾಸ್ಕ್ ಇಲ್ಲದಿದ್ದರೆ ನೋ ಎಂಟ್ರಿ

ನಂದಿಗಿರಿಧಾಮದ ಸೂರ್ಯೋದಯ ಸೌಂದರ್ಯವನ್ನು ಸವಿಯುವುದಕ್ಕೆ ಮುಂಜಾನೆ 4-5 ಗಂಟೆಯಿಂದಲೇ ನಂದಿಗಿರಿಧಾಮದತ್ತ ಪ್ರವಾಸಿಗರು ಆಗಮಿಸಿದ್ದಾರೆ.

ಆದರೆ ಬೆಳಗ್ಗೆ 8 ಗಂಟೆ ನಂತರ ನಂದಿಗಿರಿಧಾಮಕ್ಕೆ ಪ್ರವಾಸಿಗರ ವಾಹನಗಳ ಪ್ರವೇಶಕ್ಕೆ ಅನುಮತಿ ಇದೆ. ಹೀಗಾಗಿ ಚೆಕ್ ಪೋಸ್ಟ್ ನಲ್ಲಿ ವಾಹನಗಳಿಗೆ ತಡೆಯೊಡ್ಡಲಾಗಿತ್ತು. ಹೀಗಾಗಿ ಚೆಕ್ ಪೋಸ್ಟ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಸುಮಾರು 4 ರಿಂದ 5 ಕಿಲೋಮೀಟರ್ ದೂರ ರಸ್ತೆಯುದ್ದಕ್ಕೂ ವಾಹನಗಳು ನಿಂತಿದ್ದು, ಟ್ರಾಫಿಕ್ ಜಾಮ್ ಉಂಟಾಗಿತ್ತು. 8 ಗಂಟೆಗೆ ಚೆಕ್ ಪೋಸ್ಟ್ ಗೇಟ್ ತರೆದಿದ್ದೆ ತಡ, ಸಾವಿರಾರು ಮಂದಿ ಪ್ರವಾಸಿಗರು ನಂದಿಗಿರಿಧಾಮಕ್ಕೆ ಲಗ್ಗೆಯಿಟ್ಟಿದ್ದಾರೆ.

ಮಾರ್ಚ್ 14 ರಿಂದ ಲಾಕ್ ಡೌನ್ ನಿಂದ ಪ್ರವೇಶಕ್ಕೆ ನಿಷೇಧವಾಗಿದ್ದ ನಂದಿಗಿರಿಧಾಮ, ಬರೋಬ್ಬರಿ ಐದು ತಿಂಗಳ ನಂತರ ಕೆಲ ದಿನಗಳ ಹಿಂದೆಯಷ್ಟೇ ಪ್ರವಾಸಿಗರಿಗೆ ಪ್ರವೇಶ ಮುಕ್ತವಾಗಿದೆ. ಹೀಗಾಗಿ ವಿಕೇಂಡ್ ದಿನದಂದು ಸಾವಿರಾರು ಮಂದಿ ನಂದಿಗಿರಿಧಾಮಕ್ಕೆ ಆಗಮಿಸಿ, ಸೂರ್ಯೋದಯ ಹಾಗೂ ಬೆಟ್ಟದ ಅನನ್ಯ ಪ್ರಕೃತಿ ಸೌಂದರ್ಯದ ಸೊಬಗನ್ನು ಸವಿಯುತ್ತಿದ್ದಾರೆ.

English summary
Thousands of Tourists arrived to Nandi Hill at Chikkaballapur Taluk, in the wake of the Weekend and consecutive holidays, causing traffic jams along the road
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X