ನಂದಿ ಗಿರಿಧಾಮಕ್ಕೆ ಹೋಗುವ ಪ್ರವಾಸಿಗರ ಗಮನಕ್ಕೆ
ಚಿಕ್ಕಬಳ್ಳಾಪುರ, ಜುಲೈ 14; ಬೆಂಗಳೂರು ನಗರಕ್ಕೆ ಹತ್ತಿರದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ. ಅನ್‌ಲಾಕ್ ಘೋಷಣೆಯಾದ ಬಳಿಕ ಸಾವಿರಾರು ಪ್ರವಾಸಿಗರು ಪ್ರಕೃತಿ ಸೌಂದರ್ಯ ಸವಿಯಲು ನಂದಿ ಗಿರಿಧಾಮಕ್ಕೆ ಭೇಟಿ ನೀಡುತ್ತಿದ್ದಾರೆ. ನೂರಾರು ಜನರು ಸೇರಿರುವಾಗ ಕೋವಿಡ್ ನಿಯಮಗಳ ಪಾಲನೆ ಹೇಗೆ?.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ನಂದಿ ಗಿರಿಧಾಮಕ್ಕೆ ಪ್ರವಾಸಿಗರನ್ನು ನಿರ್ಬಂಧಿಸುವ ಕುರಿತು ತೀರ್ಮಾನ ಕೈಗೊಂಡಿದೆ. ಕೋವಿಡ್ ಹರಡುವಿಕೆಯನ್ನು ತಡೆಯಲು ಪೊಲೀಸ್ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ನಂದಿ ಗಿರಿಧಾಮಕ್ಕೆ ಬೇರೆ-ಬೇರೆ ಜಿಲ್ಲೆಗಳ ಪ್ರವಾಸಿಗರು ಅದರಲ್ಲೂ ಬೆಂಗಳೂರು ನಗರದಿಂದ ನೂರಾರು ಜನರು ಆಗಮಿಸುತ್ತಾರೆ. ಸರ್ಕಾರಿ ರಜೆ ದಿನಗಳು ಮತ್ತು ವಾರಾಂತ್ಯದಲ್ಲಿ ಸಾವಿರಾರು ಜನರು ಬರುತ್ತಾರೆ.

ಕೋವಿಡ್ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದರೂ ನಂದಿಬೆಟ್ಟದಲ್ಲಿ ಜನರು, ಸಂಚಾರ ದಟ್ಟಣೆಯನ್ನು ಹತೋಟಿಗೆ ತರಲು ಸಾಧ್ಯವಾಗುತ್ತಿಲ್ಲ. ಪ್ರವಾಸಿಗರ ಭೇಟಿಗೆ ನಿರ್ಬಂಧ ವಿಧಿಸುವುದು ಉತ್ತಮ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಮನವಿ ಮಾಡಿರುತ್ತಾರೆ.
ಆರೋಗ್ಯ, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ, ಸಚಿವರು ನೀಡಿರುವ ನಿರ್ದೇಶನದ ಅನ್ವಯ ಕೋವಿಡ್ ಸೋಂಕು ನಿಯಂತ್ರಿಸಲು ನಂದಿಬೆಟ್ಟದಲ್ಲಿ ಜನಸಂದಣಿ ತಡೆಯಲು ಕ್ರಮ ಕೈಗೊಳ್ಳಾಗಿದೆ.
ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಜನಪ್ರಿಯ ಪ್ರವಾಸಿ ತಾಣವಾದ ನಂದಿಗಿರಿಧಾಮಕ್ಕೆ ವಾರಾಂತ್ಯದಲ್ಲಿ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.@CMofKarnataka pic.twitter.com/1wbMRQ7ZHL
— DIPR Karnataka (@KarnatakaVarthe) July 14, 2021
ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿ ಅಮರೇಶ್ ಹೆಚ್. ನಂದಿಬೆಟ್ಟಕ್ಕೆ ಪ್ರವಾಸಿಗರ ಭೇಟಿ ನಿಷೇಧಿಸಿದ್ದಾರೆ. 12/72021ರಿಂದ ಮುಂದಿನ ಆದೇಶದ ತನಕ ಇದು ಜಾರಿಯಲ್ಲಿರುತ್ತದೆ. ವಾರಾಂತ್ಯ ಅಂದರೆ ಶುಕ್ರವಾರ ಸಂಜೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯ ತನಕ ನಂದಿಬೆಟ್ಟಕ್ಕೆ ಪ್ರವಾಸಿಗರು ಭೇಟಿ ನೀಡುವಂತಿಲ್ಲ.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆದೇಶದ ಅನ್ವಯ ಈ ಶುಕ್ರವಾರದಿಂದಲೇ ನಂದಿಬೆಟ್ಟಕ್ಕೆ ವಾರಾಂತ್ಯದಲ್ಲಿ ಜನರು ಭೇಟಿ ನೀಡುವಂತಿಲ್ಲ. ಆದ್ದರಿಂದ ಬೆಂಗಳೂರು ಸೇರಿದಂತೆ ಬೇರೆ ಜಿಲ್ಲೆಯ ಪ್ರವಾಸಿಗರು ಬಂದರೆ ವಾಪಸ್ ಹೋಗಬೇಕಾಗುತ್ತದೆ.












Click it and Unblock the Notifications