Video: ಸುರಿಯುವ ಮಳೆ ನಡುವೆ ನಿಂತು ಡಿ ಕೆ ಶಿವಕುಮಾರ್ ಭಾಷಣ!
ಚಿಕ್ಕಬಳ್ಳಾಪುರ, ಜುಲೈ 15: ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯ ನಡುವೆ ನಿಂತು ಸಾರ್ವಜನಿಕರನ್ನು ಉದ್ದೇಶಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭಾಷಣ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ನಗರದ ಶಾದಿ ಮಹಲ್ ನಲ್ಲಿ ನಡೆದ ಆಹಾರ ಧಾನ್ಯಗಳ (ಮೆಗಾ ಫುಡ್)ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭಾಗವಹಿಸಿದ್ದರು. ಈ ವೇಳೆ ಮಳೆ ಸುರಿಯಲು ಆರಂಭಿಸಿತು. ಭಾರತದಲ್ಲಿ ಯಾರೊಬ್ಬರೂ ಹಸಿದುಕೊಂಡು ಇರಬಾರದು ಎಂಬ ಉದ್ದೇಶದಿಂದ ಪ್ರತಿಯೊಬ್ಬರಿಗೆ 700 ರೂಪಾಯಿ ಖರ್ಚು ಮಾಡಲಾಗುತ್ತಿದೆ ಎಂದರು.
Recommended Video

ಒಂದು ಕಡೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯ ನಡುವೆಯೇ ಛತ್ರಿಯ ಅಡಿ ನಿಂತ ಡಿಕೆ ಶಿವಕುಮಾರ್ ಬಲುಉತ್ಸಾಹದಿಂದ ಭಾಷಣ ಮುಂದುವರಿಸಿದರು. ಇನ್ನೊಂದು ಕಡೆಯಲ್ಲಿ ಮಳೆಯಿಂದ ರಕ್ಷಿಸಿಕೊಳ್ಳುವುದಕ್ಕೆ ಕುಳಿತುಕೊಂಡಿದ್ದ ಕುರ್ಚಿಗಳನ್ನೇ ತಲೆ ಮೇಲೆ ಹಿಡಿದು ಸಾರ್ವಜನಿಕರು ಭಾಷಣವನ್ನು ಆಲಿಸಿದ್ದು ವಿಶೇಷವಾಗಿತ್ತು.

ಬಾಗೇಪಲ್ಲಿಯಲ್ಲಿ ಡಿ ಕೆ ಶಿವಕುಮಾರ್ ಹೇಳಿದ್ದೇನು?:
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ನಗರದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿದ ಡಿ ಕೆ ಶಿವಕುಮಾರ್ ಮಾತನಾಡಿದರು. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಸಂದರ್ಭದಲ್ಲಿ ಸರ್ಕಾರದ ಕಡೆಯಿಂದ ಮನೆ ಮನೆಗೆ ತೆರಳಿ ಆಹಾರ ಧಾನ್ಯಗಳನ್ನು ಪೂರೈಸುವ ಕೆಲಸವನ್ನು ಮಾಡಬೇಕಿತ್ತು. ಆದರೆ ಆ ರೀತಿಯ ಯಾವ ಕೆಲಸಗಳೂ ಆಗಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ಈ ರೀತಿ ಜನಸೇವೆಯಲ್ಲಿ ತೊಡಗಿದ್ದಾರೆ. ಅಂಥ ಕಾರ್ಯಕರ್ತರ ಜೊತೆಗೆ ಕಾಂಗ್ರೆಸ್ ಪಕ್ಷ ಯಾವಾಗಲೂ ನಿಂತಿರುತ್ತದೆ ಎಂಬುದನ್ನು ಖಾತ್ರಿ ಪಡಿಸುವುದಕ್ಕೆ ನಾವು ಬಂದಿದ್ದೇವೆ," ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.












Click it and Unblock the Notifications