ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಂತಾರಾಷ್ಟ್ರೀಯ ಸ್ಮರಣ ಕೇಂದ್ರವಾಗಿ ವಿದುರಾಶ್ವತ್ಥ: ಸುಧಾಕರ್

|
Google Oneindia Kannada News

ಚಿಕ್ಕಬಳ್ಳಾಪುರ, ಮಾರ್ಚ್ 12: ಸ್ವಾತಂತ್ರ್ಯ ಹೋರಾಟದ ಇತಿಹಾಸವಿರುವ ವಿದುರಾಶ್ವತ್ಥವನ್ನು ಅಂತಾರಾಷ್ಟ್ರೀಯ ಸ್ಮರಣ ಕೇಂದ್ರವಾಗಿ ರೂಪಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.

ವಿದುರಾಶ್ವತ್ಥದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ರಾಜ್ಯಪಾಲ ವಿ.ಆರ್.ವಾಲ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.

ನಂತರ ಮಾತನಾಡಿದ ಸಚಿವರು, ವಿದುರಾಶ್ವತ್ಥದಲ್ಲಿ 1938 ರಲ್ಲಿ ಧ್ವಜಾರೋಹಣ ನೆರವೇರಿಸುವ ವೇಳೆ ಬ್ರಿಟಿಷರು ಗುಂಡಿನ ದಾಳಿ ನಡೆಸಿ ಹೋರಾಟಗಾರರು ಹುತಾತ್ಮರಾದರು. ಈ ಸ್ಥಳಕ್ಕೆ ವಿದುರ ಬಂದು ಅಶ್ವತ್ಥಕಟ್ಟೆ ನಿರ್ಮಿಸಿದರು ಎಂಬ ಹಿನ್ನೆಲೆ ಇದೆ. ಇಲ್ಲಿ ನಾಗಪೂಜೆ ಕೂಡ ನಡೆಯುತ್ತಿದೆ. ಇದನ್ನು ಐತಿಹಾಸಿಕ, ಧಾರ್ಮಿಕ ತಾಣವಾಗಿ ಅಭಿವೃದ್ಧಿಪಡಿಸಿ, ಅಂತಾರಾಷ್ಟ್ರೀಯ ಸ್ಮರಣ ಕೇಂದ್ರವಾಗಿ ರೂಪಿಸಬೇಕು. ಈಗಾಗಲೇ ಸಮಿತಿಯು ಡಿಪಿಆರ್ ಮಾಡಿಕೊಟ್ಟಿದ್ದು, ಇದಕ್ಕಾಗಿ 15-16 ಕೋಟಿ ರೂ. ಖರ್ಚಾಗುತ್ತದೆ. ಈ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು ಎಂದು ಕೋರಿದರು.

ಸ್ವಾತಂತ್ರ್ಯ ಪಡೆದು 75 ವರ್ಷ

ಸ್ವಾತಂತ್ರ್ಯ ಪಡೆದು 75 ವರ್ಷ

ಸ್ವಾತಂತ್ರ್ಯ ಪಡೆದು 75 ವರ್ಷವಾಗುತ್ತಿರುವ ಸಂದರ್ಭದಲ್ಲಿ ದೇಶಾದ್ಯಂತ ಸಂಭ್ರಮಾಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಬಗ್ಗೆ ಚಿಂತನೆ ನಡೆಸಲು ಕಾರ್ಯಕ್ರಮ ನಡೆಸುವಂತೆ ಕರೆ ನೀಡಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಅನೇಕರು ಹುತಾತ್ಮರಾಗಿದ್ದು, ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮ ನಡೆಯುತ್ತಿದೆ. ಐತಿಹಾಸಿಕ, ಧಾರ್ಮಿಕ ಕ್ಷೇತ್ರವಾದ ವಿದುರಾಶ್ವತ್ಥದಲ್ಲಿ ಕೂಡ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದರು.

ಕೃಷ್ಣಾ ನದಿಯಿಂದ 2 ಜಿಲ್ಲೆಗಳಿಗೆ ನೀರು

ಕೃಷ್ಣಾ ನದಿಯಿಂದ 2 ಜಿಲ್ಲೆಗಳಿಗೆ ನೀರು

ಕೃಷ್ಣಾ ನದಿಯಿಂದ 5 ಟಿಎಂಸಿಯನ್ನು ಆಂಧ್ರಪ್ರದೇಶದಿಂದ ಸಹಕಾರದಿಂದ ಪಡೆದರೆ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ನೀರಾವರಿ ಕಲ್ಪಿಸಬಹುದು. ನಮ್ಮ ನದಿ ಮೂಲಗಳಿಂದ ಆ ರಾಜ್ಯದ ಜನರಿಗೆ ನೀರು ನೀಡಬಹುದು. ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾಗಿದ್ದು, ಮುಂದಿನ ವರ್ಷದ ಜೂನ್ ಗೆ ಸಿದ್ಧವಾಗಲಿದೆ ಎಂದರು.

ಎಲ್ಲ ವರ್ಗದ ಜನರಿಗೆ ಸಾಮಾಜಿಕ ನ್ಯಾಯ

ಎಲ್ಲ ವರ್ಗದ ಜನರಿಗೆ ಸಾಮಾಜಿಕ ನ್ಯಾಯ

ಕೋವಿಡ್ ಆರ್ಥಿಕ ಸಂಕಷ್ಟವಿರುವುದರಿಂದ ಈ ಬಾರಿ ಹೆಚ್ಚಿನ ಗಾತ್ರದ ಬಜೆಟ್ ನೀಡುವುದಿಲ್ಲ ಎಂಬ ಅಪನಂಬಿಕೆ ಇತ್ತು. ಆದರೆ ಮುಖ್ಯಮಂತ್ರಿಗಳು ಹೆಚ್ಚು ಗಾತ್ರದ ಬಜೆಟ್ ಮಂಡಿಸಿ ಎಲ್ಲ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ನೀಡಿದ್ದಾರೆ. ಮಹಿಳಾ ಅಸಮಾನತೆ ದೂರವಾಗಿಸಲು, ಅಂತಾರಾಷ್ಟ್ರೀಯ ಮಹಿಳಾ ದಿನದಂದು ಮಂಡಿಸಿದ ಬಜೆಟ್ ನಲ್ಲಿ ಮಹಿಳಾ ಸಬಲೀಕರಣಕ್ಕೆ ಉತ್ತಮ ಕೊಡುಗೆ ನೀಡಲಾಗಿದೆ. ನಂದಿ ಬೆಟ್ಟ, ಎತ್ತಿನೆಹೊಳೆ ಯೋಜನೆ ಜಾರಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜಿಲ್ಲೆಗೆ ನೀಡಲಾಗಿದೆ ಎಂದರು.

Recommended Video

ಯಡಿಯುರಪ್ಪನೆ ಲಸಿಕೆ ಹಾಕಿಸಿ ಕೊಂಡ ಮೇಲೆ tension ಯಾಕೆ? | Oneindia Kannada
ಅಮೃತ ಮಹೋತ್ಸವದ ಕಾರ್ಯಕ್ರಮ

ಅಮೃತ ಮಹೋತ್ಸವದ ಕಾರ್ಯಕ್ರಮ

ಮಾರ್ಚ್ 12 ರಿಂದ ಆಗಸ್ಟ್ 15, 2022 ರವರೆಗೆ 75 ವಾರಗಳ ಕಾಲ ದೇಶದ ವಿವಿಧ ಸ್ವಾತಂತ್ರ್ಯ ಸಂಗ್ರಾಮದ ಸವಿನೆನೆಪಿನ ತಾಣಗಳಲ್ಲಿ ಈ ಅಮೃತ ಮಹೋತ್ಸವದ ಕಾರ್ಯಕ್ರಮವನ್ನು ಪ್ರತಿ ವಾರ ನಡೆಸಲಾಗುತ್ತದೆ. ಮೊದಲ ವಾರದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಕರ್ನಾಟಕದಲ್ಲಿ ವಿದುರಾಶ್ವತ್ಥಕ್ಕೆ ಸಿಎಂ ಯಡಿಯೂರಪ್ಪ, ರಾಜ್ಯಪಾಲರು ಸೇರಿದಂತೆ ಸಚಿವರು ಆಗಮಿಸಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಡಿದ ಸೇನಾನಿಗಳ ಸವಿನೆನಪಿನ ಸ್ಮಾರಕ ಸ್ತಂಭಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಸ್ವಾತಂತ್ರ್ಯ ಸಂಗ್ರಾಮದ ಛಾಯಾಚಿತ್ರ ಗ್ಯಾಲರಿ ವೀಕ್ಷಿಸಿದರು.

English summary
The historical freedom movement site Vidurashwatha should be developed as International Memorial, said Health and Medical Minister Dr.K.Sudhakar who is also the district in-charge minister of Chikkaballapura.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X