• search
  • Live TV
ಚಿಕ್ಕಬಳ್ಳಾಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಂಪಿಯಲ್ಲಿ ಯೋಗ ದಿನಾಚರಣೆ; ಅಜಯ್ ರಾವ್, ಪ್ರಹ್ಲಾದ್ ಜೋಶಿ ಭಾಗಿ

|
Google Oneindia Kannada News

ವಿಜಯನಗರ, ಜೂನ್ 14; ವಿಶ್ವಪಾರಂಪರಿಕ ತಾಣವಾಗಿರುವ ಐತಿಹಾಸಿಕ ಹಂಪಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮ ನಡೆಯಲಿದೆ. ದೇಶದ 75 ಸ್ಥಳಗಳನ್ನು ಆಯ್ಕೆ ಮಾಡಲಾಗಿದ್ದು, ಅದರಲ್ಲಿ ಕರ್ನಾಟಕದ ಹಲವು ಸ್ಥಳಗಳು ಸೇರಿವೆ.

ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಟ ಅಜಯ್ ರಾವ್, ಪ್ರದ್ಮಶ್ರೀ ಮಂಜಮ್ಮ ಜೋಗತಿ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಮೈಸೂರಿನಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುವ ಯೋಗ ದಿನಾಚರಣೆಯಲ್ಲಿ 15000 ಜನ ಭಾಗಿಮೈಸೂರಿನಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುವ ಯೋಗ ದಿನಾಚರಣೆಯಲ್ಲಿ 15000 ಜನ ಭಾಗಿ

ಈ ಕಾರ್ಯಕ್ರಮದಲ್ಲಿ 5 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಜೂನ್ 21ರಂದು ಕರ್ನಾಟಕ ಹಂಪಿ, ಪಟ್ಟದಕಲ್ಲು, ಶಿವಮೊಗ್ಗದ ಜೋಗ ಜಲಪಾತದಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಹಂಪಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ನೇತೃತ್ವದಲ್ಲಿ ಯೋಗ ತಾಲೀಮು ನಡೆಯುತ್ತಿದೆ.

ಮೈಸೂರು, ಪಟ್ಟದಲ್ಲು, ಜೋಗ, ಹಂಪಿಯಲ್ಲಿ ಯೋಗ ದಿನಾಚರಣೆಮೈಸೂರು, ಪಟ್ಟದಲ್ಲು, ಜೋಗ, ಹಂಪಿಯಲ್ಲಿ ಯೋಗ ದಿನಾಚರಣೆ

ಮೈಸೂರು ಅರಮನೆ ಆವರಣದಲ್ಲಿಯೂ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಜೂನ್‌ 20 ರಂದು ಮೋದಿ ಮೈಸೂರಿಗೆ ಬರಲಿದ್ದು, ಮರುದಿನ ಬೆಳಗ್ಗೆ 6.30ಕ್ಕೆ ಆರಂಭವಾಗುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೋದಿ ಪಾಲ್ಗೊಳ್ಳುವ ಯೋಗ ಕಾರ್ಯಕ್ರಮಕ್ಕೆ ಎಷ್ಟು ಮಂದಿಗೆ ಅವಕಾಶ? ಮೋದಿ ಪಾಲ್ಗೊಳ್ಳುವ ಯೋಗ ಕಾರ್ಯಕ್ರಮಕ್ಕೆ ಎಷ್ಟು ಮಂದಿಗೆ ಅವಕಾಶ?

ಡಿಸಿ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ

ಡಿಸಿ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ

ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21ರಂದು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ. ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅಧ್ಯಕ್ಷತೆಯಲ್ಲಿ ಸೋಮವಾರ ಪೂರ್ವಸಿದ್ಧತಾ ಸಭೆ ನಡೆಯಿತು. ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನದ ಮುಂಭಾಗದ ವಿಶಾಲ ಆವರಣ ಅಥವಾ ಕಮಲ ಮಹಲ್‍ನ ವಿಶಾಲ ಮೈದಾನದಲ್ಲಿ ಯೋಗ ದಿನವನ್ನು ಆಚರಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. 5 ಸಾವಿರಕ್ಕೂ ಹೆಚ್ಚು ಜನರು ಸೇರುವ ಸಾಧ್ಯತೆ ಇದೆ.

ವಿವಿಧ ಸಮಿತಿಗಳ ರಚನೆ

ವಿವಿಧ ಸಮಿತಿಗಳ ರಚನೆ

ಯೋಗ ದಿನದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಕನ್ನಡ ನಟ ಅಜಯರಾವ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ, ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್, ಮುಜರಾಯಿ, ಹಜ್ ಮತ್ತು ವಕ್ಫ್ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತವು ವಿವಿಧ ಸಮಿತಿಗಳನ್ನು ರಚಿಸಿದೆ. ವಿವಿಧ ಸಮಿತಿಗಳ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಸಚಿವ ಆನಂದ್ ಸಿಂಗ್ ನೇತೃತ್ವದಲ್ಲಿ ಈಗಾಗಲೇ ಯೋಗ ತಾಲೀಮು ನಡೆಯುತ್ತಿದೆ.

ಮೋದಿ ಕಾರ್ಯಕ್ರಮದ ನೇರ ಪ್ರಸಾರ

ಮೋದಿ ಕಾರ್ಯಕ್ರಮದ ನೇರ ಪ್ರಸಾರ

ಜೂನ್ 21ರಂದು ಬೆಳಗ್ಗೆ 6ಕ್ಕೆ ಯೋಗ ಕಾರ್ಯಕ್ರಮಗಳು ಆರಂಭವಾಗಲಿದೆ. 6.40ರವರೆಗೆ ಯೋಗ ಸಂಬಂಧಿತ ವೇದಿಕೆ ಕಾರ್ಯಕ್ರಮಗಳು ನಡೆಯಲಿವೆ. ಪ್ರಹ್ಲಾದ್ ಜೋಶಿ, ಆನಂದ್ ಸಿಂಗ್, ಶಶಿಕಲಾ ಜೊಲ್ಲೆ ಮಾತನಾಡಲಿದ್ದಾರೆ. ಬೆಳಗ್ಗೆ 6.40ರಿಂದ 7ರವರೆಗೆ ಪ್ರಧಾನಿ ನರೇಂದ್ರ ಮೋದಿ ಮೈಸೂರಿನ ಅರಮನೆ ಎದುರು ನಡೆಯಲಿರುವ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಲಿರುವ ಕಾರ್ಯಕ್ರಮದ ನೇರ ಪ್ರಸಾರ ಮಾಡಲಾಗುತ್ತದೆ. ಬೆಳಗ್ಗೆ 7ಕ್ಕೆ ಯೋಗ ಕಾರ್ಯಕ್ರಮ ಆರಂಭವಾಗಲಿದೆ.

ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಲಘು ಉಪಾಹಾರ ಮತ್ತು ನೀರಿನ ವ್ಯವಸ್ಥೆ, ಯೋಗಾಸನಕ್ಕೆ ಗ್ರೀನ್ ಮ್ಯಾಟ್ ವ್ಯವಸ್ಥೆ, ವೇದಿಕೆ, ಧ್ವನಿವರ್ಧಕ ವ್ಯವಸ್ಥೆ, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಅಗತ್ಯ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಮಾಡಲು ಜಿಲ್ಲಾಧಿಕಾರಿಗಳು ಸೂಚಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗೂ ಟೀ ಶರ್ಟ್ ಮತ್ತು ಕ್ಯಾಪ್‍ಗಳ ವ್ಯವಸ್ಥೆ ಮಾಡಲಾಗಿದೆ.

5 ಸಾವಿರ ಜನರು ಸೇರುವ ನಿರೀಕ್ಷೆ

5 ಸಾವಿರ ಜನರು ಸೇರುವ ನಿರೀಕ್ಷೆ

ಜೂನ್ 21ರಂದು ನಡೆಯುವ ಕಾರ್ಯಕ್ರಮಕ್ಕೆ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಪತಂಜಲಿ, ಆರ್ಟ್ ಆಫ್ ಲಿವಿಂಗ್, ಬ್ರಹ್ಮಕುಮಾರಿ ಸಂಸ್ಥೆ, ಹಾಸ್ಟೆಲ್ ವಿದ್ಯಾರ್ಥಿಗಳು, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಸೇರಿದಂತೆ 5 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ಜಿಲ್ಲೆಯ ಪ್ರತಿ ತಾಲೂಕಿನಿಂದ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಖಾಸಗಿ ಬಸ್‍ಗಳು ಹೊರತುಪಡಿಸಿ 60ಕ್ಕೂ ಹೆಚ್ಚು ಬಸ್‍ಗಳ ವ್ಯವಸ್ಥೆ ಮಾಡಲಾಗುತ್ತಿದೆ. ಯೋಗ ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳಿಗೆ ಅಗತ್ಯ ಪಾರ್ಕಿಂಗ್ ವ್ಯವಸ್ಥೆ ಮತ್ತು ಭದ್ರತಾ ವ್ಯವಸ್ಥೆ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.

English summary
Union government has chosen Vijayanagar district Hampi in Karnataka as cultural heritage locations for the yoga day on June 21st. Around 5 thousand people will take part in event. Union minister Pralhad Joshi and Kannada actor Ajay Rao will perform yoga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X