ವಸ್ತಾರೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ; ಗದ್ದೆಗೆ ಉರುಳಿಬಿದ್ದ ಆಟೋ
ಚಿಕ್ಕಮಗಳೂರು, ಜುಲೈ 26: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಆಟೋವೊಂದು ಗದ್ದೆಗೆ ಉರುಳಿ ಬಿದ್ದಿರುವ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ವಸ್ತಾರೆ ಬಳಿ ನಡೆದಿದೆ.
ಈ ಅವಘಡದಲ್ಲಿ ಹತ್ತಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಅವಘಡದಿಂದಾಗಿ ಚಿಕ್ಕಮಗಳೂರು ಮೂಡಿಗೆರೆ ರಸ್ತೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್ ಜಾಮ್ ಆದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು.

ಆಲ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.











Click it and Unblock the Notifications