ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರು; 15 ವಿದ್ಯಾರ್ಥಿ, 12 ಶಿಕ್ಷಕರಿಗೆ ಕೋವಿಡ್ ಸೋಂಕು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು, ಜನವರಿ 06: "ಜಿಲ್ಲೆಯಲ್ಲಿ 15 ವಿದ್ಯಾರ್ಥಿಗಳು, 12 ಶಿಕ್ಷಕರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢವಾಗಿದೆ" ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಹೇಳಿದ್ದಾರೆ.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿಡಿಯೋ ಕಾನ್ಫರೆನ್ಸ್ ಬಳಿಕ ಮಾತನಾಡಿದ ಅವರು, "ಇಂದು 11 ವಿಧ್ಯಾರ್ಥಿಗಳು ಹಾಗೂ 7 ಶಿಕ್ಷಕರಲ್ಲಿ ಕೋವಿಡ್ ವೈರಸ್ ಪತ್ತೆಯಾಗಿದೆ" ಎಂದರು.

ಇಬ್ಬರು ಶಿಕ್ಷಕರಿಗೆ ಕೋವಿಡ್ ಸೋಂಕು; ಶಾಲೆಗೆ ಬೀಗ ಇಬ್ಬರು ಶಿಕ್ಷಕರಿಗೆ ಕೋವಿಡ್ ಸೋಂಕು; ಶಾಲೆಗೆ ಬೀಗ

ಕೋವಿಡ್ ಸೋಂಕು ಪತ್ತೆಯಾಗಿರುವ ಶಿಕ್ಷಕರು ಹಾಗೂ ಮಕ್ಕಳಿಗೆ ಕ್ವಾರಂಟೈನ್‌ಗೆ ಸೂಚಿಸಲಾಗಿದೆ. ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ. ಶಿಕ್ಷಕರಿಂದ ವಿದ್ಯಾರ್ಥಿಗಳಿಗೆ ಬರುತ್ತಿದೆಯೋ ಅಥವ ವಿದ್ಯಾರ್ಥಿಗಳಿಂದಲೇ ವಿದ್ಯಾರ್ಥಿಗಳಿಗೆ ಬರುತ್ತಿದೆಯೋ ಗೊತ್ತಾಗಿಲ್ಲ.

ಬೆಳಗಾವಿ; 18 ಶಿಕ್ಷಕರಿಗೆ ಕೋವಿಡ್ ಸೋಂಕು ಪತ್ತೆ ಬೆಳಗಾವಿ; 18 ಶಿಕ್ಷಕರಿಗೆ ಕೋವಿಡ್ ಸೋಂಕು ಪತ್ತೆ

12 Teachers And 15 Students Test Positive For Coronavirus

"ಶಾಲೆಗಳಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ನಮಗೂ-ನಿಮಗೂ ಕೋವಿಡ್ ಬರುತ್ತದೆ. ಮುಂಜಾಗೃತಾ ಕ್ರಮ ಕೈಗೊಂಡಿದ್ದರೆ ಬರುವ ಸಾಧ್ಯತೆ ಕಡಿಮೆ ಎಂದಿದ್ದಾರೆ. ಸೋಂಕಿತರ ಪ್ರಾಥಮಿಕ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ" ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಶಾಲೆ ಪುನರಾರಂಭದ ಬಗ್ಗೆ ಆರೋಗ್ಯ ಸಚಿವರು ನೀಡಿದ ಸಲಹೆ ಏನು? ಶಾಲೆ ಪುನರಾರಂಭದ ಬಗ್ಗೆ ಆರೋಗ್ಯ ಸಚಿವರು ನೀಡಿದ ಸಲಹೆ ಏನು?

"ಕೋವಿಡ್ ಬಂದಿರುವ ವ್ಯಕ್ತಿಗಳ ಕುಟುಂಬದವರು, ಅಕ್ಕಪಕ್ಕದವರು, ಅವರು ಪ್ರತಿದಿನ ಸಂಪರ್ಕಕ್ಕೆ ಒಳಪಡುವ ಜನರ ಮೇಲೂ ನಿಗಾ ವಹಿಸಲಾಗಿದೆ. ಬಹುತೇಕ ಜನರು ರೋಗ ಲಕ್ಷಣಗಳನ್ನು ಹೊಂದಿಲ್ಲ. ಇಂತಹ ಸಂದರ್ಭದಲ್ಲಿ ಸೋಂಕು ಹರಡುವ ಸಾಧ್ಯತೆ ತುಂಬಾ ಕಡಿಮೆ" ಎಂದರು.

ಚಿಕ್ಕಮಗಳೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಉಮೇಶ್ ಮಾತನಾಡಿ, "ಶೀಘ್ರದಲ್ಲಿ ಕೋವಿಡ್‌ಗೆ ಲಸಿಕೆ ಬರುತ್ತದೆ ಎಂದಿದ್ದಾರೆ. ಜಿಲ್ಲೆಯಲ್ಲಿ ಲಸಿಕೆ ಸಂಗ್ರಹಕ್ಕೆ ಯಾವುದೇ ತೊಂದರೆ ಇಲ್ಲ. ಜಿಲ್ಲೆಯ 103 ಕೇಂದ್ರಗಳಲ್ಲಿ ಲಸಿಕೆ ಸಂಗ್ರಹಕ್ಕೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ" ಎಂದರು.

"ಮೊದಲ ಹಂತದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯ ಒಟ್ಟು 9,852 ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡಲಾಗುತ್ತದೆ. ಇದಕ್ಕಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ" ಎಂದು ಹೇಳಿದರು.

Recommended Video

hit Sharma ಒಂದು ವರ್ಷದ ಬಳಿಕ ಕಣಕ್ಕಿಳಿಯಲು ಸಜ್ಜು | Oneindia Kannada

English summary
Chikkamagaluru deputy commissioner Dr. Bagadi Gautham said that 12 teachers and 15 students test positive for Coronavirus in the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X