• search
 • Live TV
ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಇಂದು ಚಿಕ್ಕಮಗಳೂರಲ್ಲಿ 125, ರಾಮನಗರದಲ್ಲಿ 98 ಕೊರೊನಾ ಪ್ರಕರಣ ಪತ್ತೆ

By Lekhaka
|

ಚಿಕ್ಕಮಗಳೂರು, ಜುಲೈ 30: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 125 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.

   ಎಲ್ಲರ ಮನೆ ಸೇರಲಿ ಮಹಾಲಕ್ಷ್ಮಿ | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಕೊರೊನಾ ಸೋಂಕಿತರ ಸಂಖ್ಯೆ ಶತಕ ದಾಟಿದ್ದು, ಚಿಕ್ಕಮಗಳೂರು 86, ಕಡೂರು 17, ತರೀಕೆರೆ 14, ಮೂಡಿಗೆರೆ 3, ಎನ್.ಆರ್ ಪುರ 3, ಶೃಂಗೇರಿ ಮತ್ತು ಕೊಪ್ಪದಲ್ಲಿ 1 ಪ್ರಕರಣಗಳು ಪತ್ತೆಯಾಗಿವೆ.

   ಬಳ್ಳಾರಿ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಸ್ಪೋಟ

   ಇಂದು 30 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 461 ಸಕ್ರಿಯ ಪ್ರಕರಣಗಳಿವೆ. ಇಂದು ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಒಂದು ಸಾವಾಗಿದ್ದು, ಒಟ್ಟು ಸಾವಿನ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

   ರಾಮನಗರದಲ್ಲಿ ಇಂದು 98 ಕೋವಿಡ್ ಪಾಸಿಟಿವ್ ಪ್ರಕರಣ

   ರಾಮನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ಗಡಿ ಸಮೀಪಿಸಿದೆ. ಜಿಲ್ಲೆಯಲ್ಲಿ ಇಂದು 98 ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

   ರಾಮನಗರ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 998 ಕ್ಕೆ ಏರಿಕೆ ಕಂಡಿದೆ. ಇಂದು ಚನ್ನಪಟ್ಟಣ ತಾಲ್ಲೂಕಿನಲ್ಲಿ 23, ಮಾಗಡಿ ತಾಲ್ಲೂಕಿನಲ್ಲಿ 28, ಕನಕಪುರ ತಾಲ್ಲೂಕಿನಲ್ಲಿ 8, ರಾಮನಗರ ತಾಲ್ಲೂಕಿನಲ್ಲಿ 39 ಪ್ರಕರಣಗಳು ಪತ್ತೆಯಾಗಿವೆ.

   ರಾಮನಗರದಲ್ಲಿ 64, ಚಿಕ್ಕಮಗಳೂರಿನಲ್ಲಿ 61 ಕೋವಿಡ್-19 ಪ್ರಕರಣ ಪತ್ತೆ

   ಇಂದಿನ ಹೊಸ ಸೋಂಕಿತರನ್ನು ಚಿಕಿತ್ಸೆಗಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿದ್ದು, ಇಂದು 8 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಈವರೆಗೆ ಒಟ್ಟು 519 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತಾರೆ. ಸದ್ಯ 463 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

   English summary
   In Chikkamagaluru district the coronavirus prevalence is increasing day by day, with 125 positive cases confirmed today.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X