ಚಿಕ್ಕಮಗಳೂರು: ಒಂದೇ ವರ್ಷದಲ್ಲಿ 21 ಕನ್ನಡ ಶಾಲೆಗಳು ಬಂದ್, ಕಾರಣ ಏನು ಗೊತ್ತಾ?, ಇಲ್ಲಿದೆ ವಿವರ

ಚಿಕ್ಕಮಗಳೂರು, ಅಕ್ಟೋಬರ್‌, 31:2023ರ ಜನವರಿಯಿಂದ ಇಲ್ಲಿವರೆಗೂ ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ 21 ಕನ್ನಡ ಶಾಲೆಗಳು ಬಂದ್ ಆಗಿವೆ. ಸರ್ಕಾರ ಮಧ್ಯಾಹ್ನ ಬಿಸಿಯೂಟ, ಮೊಟ್ಟೆ-ಹಾಲು, ಶೂ-ಸಾಕ್ಸ್ ಅಂತೆಲ್ಲಾ ಹತ್ತಾರು ಯೋಜನೆಗಳನ್ನು ಜಾರಿಗೆ ತಂದರೂ ಹೆತ್ತವರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವುದಕ್ಕೆ ಮೂಗು ಮುರಿಯುತ್ತಿದ್ದಾರೆ. ಇದರಿಂದ ಕಾಫಿನಾಡಲ್ಲಿ ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಾಲೆಗಳಿಗೆ ಬೀಗ ಬೀಳುತ್ತಿರುವ ಪ್ರಮಾಣ ಕೂಡ ಹೆಚ್ಚಿದೆ.

ಸರ್ಕಾರ ಖಾಸಗಿ ಶಾಲೆಗಳಿಗೆ ಬೇಕಾಬಿಟ್ಟಿ ಅನುಮತಿ ನೀಡುತ್ತಿರುವುದರಿಂದಲೇ ಸರ್ಕಾರಿ ಶಾಲೆಗಳಿಗೆ ಈ ಸ್ಥಿತಿ ಬಂದಿದೆ ಅಂತಾ ಸ್ಥಳಿಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜನರಿಗೆ ಸರ್ಕಾರದ ಎಲ್ಲಾ ಸೌಲಭ್ಯ ಬೇಕು. ಅಕ್ಕಿ, ಬಸ್ಸು, ಕರೆಂಟ್, ದುಡ್ಡು ಎಲ್ಲಾ ಬೇಕು. ಆದರೆ, ಸರ್ಕಾರಿ ಶಾಲೆ ಮಾತ್ರ ಬೇಡ. ಖಾಸಗಿ ಹಾಗೂ ಇಂಗ್ಲೀಷ್ ಮೀಡಿಯಂನಲ್ಲಿ ಮಕ್ಕಳು ಓದುತ್ತಿದ್ದಾರೆ ಅಂದ್ರೆ ಹೆತ್ತವರಿಗೆ ಡಿಗ್ನಿಟಿ. ಪೋಷಕರು ತಮ್ಮ ಡಿಗ್ನಿಟಿಗಾಗಿ ಸರ್ಕಾರಿ ಶಾಲೆಗಳಿಗೆ ಬೀಗ ಹಾಕಿಸ್ತಿದ್ದಾರೆ ಎಂದು ಸ್ಥಳೀಯರು ಪೋಷಕರು ವಿರುದ್ಧ ಆಕ್ರೋಶ ಹೊರಹಾಕ್ತಿದ್ದಾರೆ.

21 Kannada schools closed in one year at Chikkamagaluru district

ಸರ್ಕಾರ ಸರ್ಕಾರಿ ಶಾಲೆಗಳನ್ನು ಉಳಿಸುವುದಕ್ಕೆ ನಾನಾ ಯೋಜನೆಗಳನ್ನು ಜಾರಿಗೆ ತಂದು ಪ್ರಯತ್ನಪಟ್ಟರೂ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುತ್ತಿಲ್ಲ. ಜೊತೆಗೆ ಸರ್ಕಾರ ಖಾಸಗಿ ಶಾಲೆಗಳಿಗೆ ಬೇಕಾಬಿಟ್ಟಿ ಅನುಮತಿ ನೀಡುತ್ತಿರುವುದರಿಂದ ಸರ್ಕಾರಿ ಶಾಲೆಗಳು ಅವನತಿಯ ಅಂಚಿನಲ್ಲಿವೆ. ಕಳೆದ ಐದಾರು ವರ್ಷದಲ್ಲಿ 50ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಶಾಶ್ವತ ಬೀಗ ಬಿದ್ದಿದೆ.

ನೂರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಸರ್ಕಾರಿ ಶಾಲೆಗಳಿಂದು ಲೂಟಿಯೊಡೆದ ಕೋಟೆಯಂತಾಗಿದೆ. ಸರ್ಕಾರ ಕನ್ನಡ ಶಾಲೆಗಳಿಗೆ ನಾನಾ ಸೌಲಭ್ಯ ನೀಡುತ್ತಿದೆ. ಆದರೆ ಅದರ ಬೆನ್ನಲ್ಲೇ ಖಾಸಗಿ ಶಾಲೆಗಳಿಗೆ ಎಗ್ಗಿಲ್ಲದೆ ಅನುಮತಿ ನೀಡುತ್ತಿರುವುದರಿಂದ ಪೋಷಕರಿಗೆ ಇಂಗ್ಲಿಷ್ ಮೇಲಿರುವ ವ್ಯಾಮೋಹದಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸ್ತಿದ್ದಾರೆ. ಈ ಮಧ್ಯೆ ವಸತಿ ಶಾಲೆಗಳ ಆರಂಭ ಕೂಡ ಸರ್ಕಾರಿ ಶಾಲೆಗೆ ಮರಣಶಾಸನ ಬರೆದಿದೆ ಎಂದು ಡಿಡಿಪಿಐ ರಂಗನಾಥ ಸ್ವಾಮಿ ಹೇಳಿದರು.

ಚಿಕ್ಕಮಗಳೂರು ಜಿಲ್ಲೆ 21 ಸರ್ಕಾರಿ ಶಾಲೆ ಬಂದ್

ಚಿಕ್ಕಮಗಳೂರು ತಾಲೂಕು- 5
ಕಡೂರು - 4
ತರೀಕೆರೆ - 2
ಮೂಡಿಗೆರೆ - 2
ಎನ್.ಆರ್.ಪುರ - 2
ಕೊಪ್ಪ - 2
ಶೃಂಗೇರಿ - 4

ಒಟ್ಟಾರೆ, ಒಂದೆಡೆ ಸರ್ಕಾರಿ ಶಾಲೆಗೆ ವಿವಿಧ ಯೋಜನೆಗಳನ್ನು ಜಾರಿಗೆ ತರುವುದು, ಮತ್ತೊಂದೆಡೆ ಖಾಸಗಿ ಶಾಲೆಗಳಿಗೆ ಅನುಮತಿ ನೀಡೋದು. ಸರ್ಕಾರಿ ಶಾಲೆ ಹಾಗೂ ಖಾಸಗಿ ಶಾಲೆಗಳ ನಡುವೆ ಕಣ್ಣಾಮುಚ್ಚಾಲೆ ಆಟವಾಡ್ತಿರೋ ಸರ್ಕಾರಗಳ ನಡೆಯಿಂದಲೇ ಸರ್ಕಾರಿ ಶಾಲೆಗಳು ಬೀಗ ಕಾಣುತ್ತಿವೆಯೋ ಎಂದು ಸಾರ್ವಜನಿಕರಿಗೆ ಸರ್ಕಾರದ ಮೇಲೆ ಅನುಮಾನ ಮೂಡುತ್ತಿದೆ. ಇನ್ನಾದರೂ ಸರ್ಕಾರ, ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಪ್ರಮಾಣಿಕ ಪ್ರಯತ್ನ ಮಾಡುತ್ತಾ ಕಾದುನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+