Chikkamagaluru: ಚಿಕ್ಕಮಗಳೂರು ಚೆಕ್‌ಪೋಸ್ಟ್‌ನಲ್ಲಿ ಬರೋಬ್ಬರಿ 23 ಕೋಟಿ ರೂ ಮೌಲ್ಯದ ಚಿನ್ನಾಭರಣ ವಶ

ಚಿಕ್ಕಮಗಳೂರು, ಏಪ್ರಿಲ್‌ 20: ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವಾರು ಕಡೆಗಳಲ್ಲಿ ಚೆಕ್‌ಪೋಸ್ಟ್‌ ತೆರೆಯಲಾಗಿದ್ದು, ಪ್ರತಿಯೊಂದು ವಾಹನವನ್ನು ಕೂಡ ತಪಾಸಣೆ ನಡೆಸಲಾಗುತ್ತಿದೆ. ಈಗಾಗಲೇ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ನಡೆದ ತಪಾಸಣೆ ವೇಳೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 47 ಕೆ.ಜಿ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಬುಧವಾರ ವರದಿಯಾಗಿದೆ.

47KG Gold Jewellery Seized In Chikkamagaluru Check Post

ವಶಪಡಿಸಿಕೊಂಡಿರುವ ಚಿನ್ನಾಭರಣಗಳ ಮೌಲ್ಯದ 23 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದ್ದು, ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಈ ಚಿನ್ನಾಭರಣಗಳನ್ನು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದ್ದು, ಘಟನೆ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇದೇ ಚೆಕ್‌ಪೋಸ್ಟ್‌ನಲ್ಲಿ ಇತ್ತೀಚೆಗೆ ಸೂಕ್ತ ದಾಖಲೆ ಇಲ್ಲದ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಗಡಿ ಭಾಗದಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆದಿರುವ ಪೊಲೀಸರು ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ.

47KG Gold Jewellery Seized In Chikkamagaluru Check Post

ಬರೋಬ್ಬರಿ 5 ಕೋಟಿ ಮೌಲ್ಯದ ದಾಖಲೆ ಇಲ್ಲದ ಚಿನ್ನಾಭರಣ ವಶಕ್ಕೆ

ಧಾರವಾಡ: ಸೂಕ್ತ ದಾಖಲೆಗಳಿಲ್ಲದೇ ಸಾಗಿಸಲಾಗುತ್ತಿದ್ದ ಬರೊಬ್ಬರಿ 5 ಕೋಟಿ ರೂಪಾಯಿ ಮೌಲ್ಯದ 7 ಕೆಜಿ 700 ಗ್ರಾಂ ತೂಕದ ಚಿನ್ನಾಭರಣಗಳನ್ನು ತೇಗೂರು ಚೆಕ್‌ಪೋಸ್ಟ್‌ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಇತ್ಯಾದಿ ಚಟುವಟಿಕೆಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿರಿಸಿ ಚೆಕ್ ಪೋಸ್ಟ್ ತೆರೆದಿದ್ದಾರೆ. ಧಾರವಾಡ-ಬೆಳಗಾವಿ ರಸ್ತೆಯ ತೇಗೂರು ಚೆಕ್ ಪೋಸ್ಟ್‌ನಲ್ಲಿ ಇದೀಗ ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ಕಡೆಯಿಂದ ಬೆಂಗಳೂರಿನ ಕಡೆಗೆ ಬಿವಿಸಿ ಎಂಬ ಲಾಜೆಸ್ಟಿಕ್ ವಾಹನದಲ್ಲಿ ಈ ಚಿನ್ನಾಭಾರಣ ಸಾಗಿಸಲಾಗುತ್ತಿತ್ತು. ಮಲಬಾರ್, ಜೋಯಾಲುಕಾಸ್, ಕಲ್ಯಾಣ ಜ್ಯುವೆಲರ್ಸ್ ಸೇರಿದಂತೆ ಇತರ ಚಿನ್ನಾಭರಣಗಳನ್ನು ಗರಗ ಠಾಣೆ ಪೊಲೀಸರು ವಶಪಡಿಸಿಕೊಂಡು ಆದಾಯ ಮತ್ತು ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+