• search
 • Live TV
ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ 68 ಜನರಿಗೆ ಕೊರೊನಾ ಸೋಂಕು ದೃಢ

|

ಚಿಕ್ಕಮಗಳೂರು, ಜುಲೈ 22: ಕಾಫಿನಾಡಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಮುಂದುವರಿದಿವೆ. ಜಿಲ್ಲೆಯಲ್ಲಿ ತನ್ನ ಕಬಂಧ ಬಾಹುವನ್ನು ಕೊರೊನಾ ಚಾಚುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು 400ರ ಗಡಿ ದಾಟಿದ್ದು, ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

   ಸಿನಿಮಾ ಪ್ರದರ್ಶನಕ್ಕೆ ಅವಕಾಶ ಮಾಡಿಕೊಟ್ಟ ಸರ್ಕಾರ | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಜಿಲ್ಲೆಯಲ್ಲಿ ಮಂಗಳವಾರ 68 ಜನರಿಗೆ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಕಳೆದ 5 ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಮೂವತ್ತಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು, ಜಿಲ್ಲೆಯ ಜನ ಆತಂಕಕ್ಕೀಡಾಗಿದ್ದಾರೆ.

   ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 9ನೇ ಬಲಿ

   ಮಂಗಳವಾರದ 68 ಕೊರೊನಾ ಪಾಸಿಟಿವ್ ಪ್ರಕರಣಗಳ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 402ಕ್ಕೆ ಏರಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಚಿಕ್ಕಮಗಳೂರಿನಲ್ಲಿ 17, ಕಡೂರು 18, ಶೃಂಗೇರಿ 8, ಕೊಪ್ಪ 7, ಮೂಡಿಗೆರೆ 6, ಎನ್.ಆರ್ ಪುರ 7, ಅಜ್ಜಂಪುರ 3, ತರೀಕೆರೆಯಲ್ಲಿ 2 ಪ್ರಕರಣ ಪತ್ತೆಯಾಗಿವೆ. ಇದರಿಂದಾಗಿ ಜನ ಕಂಗಾಲಾಗಿದ್ದಾರೆ.

   ಪ್ರಮುಖವಾಗಿ ಕಳೆದ ಆರು ದಿನಗಳಲ್ಲಿ 234 ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಕೊರೊನಾ ಸೋಂಕು ಆರಂಭದ ಮೊದಲ 55 ದಿನಗಳ ಕಾಲ ಜಿಲ್ಲೆಯಲ್ಲಿ ಒಂದೂ ಪ್ರಕರಣ ಪತ್ತೆಯಾಗಿರಲಿಲ್ಲ. ಆದರೆ ಮೇ 19 ರಿಂದ ಆರಂಭವಾದ ಸೋಂಕಿತರ ಸಂಖ್ಯೆ ಜುಲೈ 15 ಕ್ಕೆ 158 ಪ್ರಕರಣಗಳು ಪತ್ತೆಯಾಗಿದ್ದವು. ಆದರೆ ಜುಲೈ16 ಬಳಿಕ ಆರು ದಿನಗಳಲ್ಲಿ 234 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

   ಮಲೆನಾಡು ಪ್ರದೇಶದಲ್ಲಿ ಮುಂದುವರೆದ ಮಳೆಯ ಅಬ್ಬರ

   ಈ 234 ಪ್ರಕರಣಗಳಲ್ಲಿ ಸುಮಾರು 50 ರಿಂದ 60 ಪ್ರಕಣರಗಳಿಗೆ ಟ್ರಾವೆಲ್ಸ್ ಹಿಸ್ಟರಿ ಇಲ್ಲ. ಶೀತ, ಕೆಮ್ಮು, ಜ್ವರ ಎಂದು ಆಸ್ಪತ್ರೆಗೆ ಹೋದವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ.

   English summary
   In Chikkamagaluru district, 68 people were reported with coronavirus on Tuesday. This has increased the number of infected people in the district to 402.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X