ಚಿಕ್ಕಮಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿಕ್ಕಮಗಳೂರಿನಲ್ಲಿ ಕೊರೊನಾ ಸೋಂಕಿನಿಂದ ಆರನೇ ಸಾವು

By ಚಿಕ್ಕಮಗಳೂರು ಪ್ರತಿನಿಧಿ
|
Google Oneindia Kannada News

ಚಿಕ್ಕಮಗಳೂರು. ಜುಲೈ 14: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಆರನೇ ಬಲಿಯಾಗಿದೆ. ಎರಡು ದಿನಗಳ ಅಂತರದಲ್ಲಿ ಸೋಂಕಿನಿಂದ ಮೂವರು ಸಾವನ್ನಪ್ಪಿದ್ದಾರೆ.

ಸಾವುಗಳ ಸಂಖ್ಯೆಯೂ ಏರುತ್ತಿರುವ ಕಾರಣ ಜಿಲ್ಲೆಯ ಜನರು ಆತಂಕಗೊಂಡಿದ್ದಾರೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿರುವುದು ಭಯದ ವಾತಾವರಣ ಮೂಡಿಸಿದೆ.

ಚಿಕ್ಕಮಗಳೂರು ಕೊವಿಡ್ ಆಸ್ಪತ್ರೆಯಲ್ಲೇ ಸಿಬ್ಬಂದಿಯ ಕಳ್ಳಾಟಚಿಕ್ಕಮಗಳೂರು ಕೊವಿಡ್ ಆಸ್ಪತ್ರೆಯಲ್ಲೇ ಸಿಬ್ಬಂದಿಯ ಕಳ್ಳಾಟ

ನಿನ್ನೆಯಷ್ಟೇ ಕೊರೊನಾದಿಂದಾಗಿ ಇಬ್ಬರು ಸಾವನ್ನಪ್ಪಿದ್ದರು. ಮಧುಮೇಹದಿಂದ ಬಳಲುತ್ತಿದ್ದ ಚಿಕ್ಕಮಗಳೂರು ನಗರದ ಉಪ್ಪಳ್ಳಿ ಬಡಾವಣೆ ನಿವಾಸಿ ನಾಲ್ಕು ದಿನದ ಹಿಂದೆ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದರು. ರಾಮನಹಳ್ಳಿ ನಿವಾಸಿ, 72 ವರ್ಷದ ವೃದ್ಧೆ ಕೂಡ ಎರಡು ದಿನದ ಹಿಂದೆ ಸಾವನ್ನಪ್ಪಿದ್ದರು. ಈ ಮಧ್ಯೆ ಚಿಕ್ಕಮಗಳೂರು ನಗರದ ಗೌರಿ ಕಾಲುವೆ ನಿವಾಸಿ, 56 ವರ್ಷದ ವ್ಯಕ್ತಿ ಕೂಡ ಇಂದು ಸಾವನ್ನಪ್ಪಿರುವುದು ಆತಂಕವನ್ನು ದುಪ್ಪಟ್ಟು ಮಾಡಿದೆ. ಅಸ್ತಮಾ ಹಾಗೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಈ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ.

6th Death Reported Today Due To Coronavirus In Chikkamagaluru

ಕೊರೊನಾ ಸೋಂಕು ಎಲ್ಲೆಡೆ ಹಬ್ಬುತ್ತಿದ್ದ ಆರಂಭದ ಮೊದಲ 55 ದಿನಗಳಲ್ಲಿ ಜಿಲ್ಲೆಯಲ್ಲಿ ಒಂದೇ ಒಂದು ಕೊರೊನಾ ಪ್ರಕರಣಗಳು ಕಂಡುಬಂದಿರಲಿಲ್ಲ. ಇದೀಗ ಕೊರೊನಾ ಸೋಂಕಿತರ ಸಂಖ್ಯೆ 155ರ ಗಡಿ ದಾಟಿದ್ದು, ಆರು ಜನರು ಸಾವನ್ನಪ್ಪಿದ್ದಾರೆ.

English summary
6th death reported due to Coronavirus in Chikkamagaluru district today. Three people died within two days in district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X