ಕರ್ತವ್ಯ ಲೋಪ ಆರೋಪ: ಪಿಎಸ್ಐ ಸಹಿತ 8 ಪೊಲೀಸ್ ಪೇದೆಗಳು ಸಸ್ಪೆಂಡ್
ಚಿಕ್ಕಮಗಳೂರು, ನವೆಂಬರ್ 29: ಕರ್ತವ್ಯ ಲೋಪ ಆರೋಪದಡಿಯಲ್ಲಿ ಓರ್ವ ಪಿಎಸ್ಐ ಸೇರಿದಂತೆ 8 ಜನ ಪೇದೆಗಳನ್ನು ಅಮಾನತ್ತು ಮಾಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಸುಖೇತ್ ಸೇರಿದಂತೆ ಪೊಲೀಸ್ ಪೇದೆಗಳಾದ ಯುವರಾಜ್, ಲಕ್ಷ್ಮಣ್, ಪ್ರದೀಪ್ ಎಂಬುವರನ್ನು ಕರ್ತವ್ಯ ಲೋಪ ಆರೋಪದಡಿಯಲ್ಲಿ ಅಮಾನತ್ತು ಮಾಡಲಾಗಿದೆ.

ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋದಡಿಯಲ್ಲಿಯೇ ಆಲ್ದೂರು ಪೊಲೀಸ್ ಪೇದೆಗಳಾದ ಶಶಿಧರ್, ಸ್ವಾಮಿ, ಅರುಣ್ ಕುಮಾರ್, ನವೀನ್ ಎಂಬುವರನ್ನು ಅಮಾನತ್ತು ಮಾಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಅಮಾನತ್ತುಗೊಂಡ ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸರು, ಗಾಂಜಾ ಕೇಸ್ ಫಿಕ್ಸ್ ಮಾಡುವುದಾಗಿ ಬೆದರಿಸಿ ಸ್ಥಳೀಯ ಇಬ್ಬರಿಂದ 3 ಲಕ್ಷದ 40 ಸಾವಿರ ರುಪಾಯಿ ಹಣ ಪಡೆದಿದ್ದರು ಎನ್ನಲಾಗಿದೆ. ಮತ್ತೊಂದು ಕಡೆ ಆಲ್ದೂರು ಪೊಲೀಸರು ಸಹ ಹೋಂ ಸ್ಟೇ ಮಾಲೀಕನಿಗರಿಸಿ ಬೆದರಿಸಿ ಲಂಚ ಪಡೆದಿದ್ದರು ಎಂದು ತಿಳಿದುಬಂದಿದೆ.












Click it and Unblock the Notifications