ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 9ನೇ ಬಲಿ
ಚಿಕ್ಕಮಗಳೂರು, ಜುಲೈ 19: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಮತ್ತೆ ಇಬ್ಬರು ಸಾವನ್ನಪ್ಪಪಿದ್ದು, ಇದರಿಂದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ 9 ಕ್ಕೆ ಏರಿದೆ.
Recommended Video
ಚಿಕ್ಕಮಗಳೂರು ನಗರದ ಮಾಜಿ ನಗರಸಭಾ ಸದಸ್ಯ ಹಾಗೂ 72 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ವೃದ್ಧನು ಸಕ್ಕರೆ ಕಾಯಿಲೆ ಸೇರಿದಂತೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು, ಇತ್ತೀಚಿಗೆ ಬೆಂಗಳೂರಿಗೆ ಹೋಗಿ ಬಂದಿದ್ದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸಾವುಗಳ ಸಂಖ್ಯೆಯೂ ಏರುತ್ತಿರುವ ಕಾರಣ ಚಿಕ್ಕಮಗಳೂರು ಜಿಲ್ಲೆಯ ಜನರು ಆತಂಕಗೊಂಡಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ಇಂದು 34 ಕೋವಿಡ್ ಪ್ರಕರಣ ದೃಢ
ರಾಮನಗರ ಜಿಲ್ಲೆಯಲ್ಲಿ ಇಂದು ಒಂದೇ ದಿನ 34 ಕೊರೊನಾ ವೈರಸ್ ಪ್ರಕರಣಗಳು ದೃಢವಾಗಿವೆ. ಜಿಲ್ಲಾ ಹೆಲ್ತ್ ಬುಲೆಟಿನ್ ಬಿಡುಗಡೆಯಾಗಿದ್ದು, ಚನ್ನಪಟ್ಟಣ ತಾಲ್ಲೂಕಿನಲ್ಲಿ- 4, ಮಾಗಡಿ ತಾಲ್ಲೂಕಿನಲ್ಲಿ- 8, ಕನಕಪುರ ತಾಲ್ಲೂಕಿನಲ್ಲಿ -2, ರಾಮನಗರ ತಾಲ್ಲೂಕಿನಲ್ಲಿ- 20 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಸೋಂಕಿತರನ್ನು ಚಿಕಿತ್ಸೆಗಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಾಮನಗರ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 462 ಕ್ಕೆ ಏರಿಕೆ ಕಂಡಿದೆ.












Click it and Unblock the Notifications